Independence Day 2020 Live: ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

Independence Day 2020: ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಗಾರ್ಡ್​ ಆಫ್​ ಹಾನರ್ ಗೌರವ​ ಸಲ್ಲಿಸಲಾಯಿತು. ಲೆಫ್ಟಿನೆಂಟ್​ ಕೊಲೋನೆಲ್​ ಗೌರವ್ ಎಸ್​ ಯೆವಾಲ್ಕರ್​ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಗೌರವ ಸಮರ್ಪಣೆ ಮಾಡಿದರು.

ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

 • Share this:
  ನವದೆಹಲಿ(ಆ.15 ): ಕೊರೋನಾ ಕರಿ ನೆರಳಿನ ನಡುವೆ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ‌ ಸರಳವಾಗಿ ನಡೆಯುತ್ತಿದೆ.

  ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಆಗಮಿಸಿದ್ದಾರೆ. ಇದಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು.

  ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಗಾರ್ಡ್​ ಆಫ್​ ಹಾನರ್ ಗೌರವ​ ಸಲ್ಲಿಸಲಾಯಿತು. ಲೆಫ್ಟಿನೆಂಟ್​ ಕೊಲೋನೆಲ್​ ಗೌರವ್ ಎಸ್​ ಯೆವಾಲ್ಕರ್​ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಗೌರವ ಸಮರ್ಪಣೆ ಮಾಡಿದರು.

  ಈ‌ ಬಾರಿಯ ಕೆಂಪುಕೋಟೆ ಕಾರ್ಯಕ್ರಮಕ್ಕೆ ಕೆಲವೇ ಕೆಲವು ಗಣ್ಯರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಕೊರೋನಾ ಕಾರಣಕ್ಕೆ ಸಾರ್ವಜನಿಕರಿಗೆ ಈ ಬಾರಿ ಪ್ರವೇಶವನ್ನು ನಿರಾಕರಿಸಲಾಗಿದೆ. ಕೆಂಪು ಕೋಟೆ ಕಾರ್ಯಕ್ರಮದ ವೇಳೆ ನಡೆಯುವ ಧ್ವಜಾರೋಹಣ ಮತ್ತು ಪ್ರಧಾನ ಮಂತ್ರಿ ಭಾಷಣ ಪ್ರಮುಖ ಆಕರ್ಷಣೆ ಆಗಿದೆ.

  ಪ್ರಧಾನಿ ಮೋದಿ 74ನೇ ಸ್ವಾತಂತ್ರ್ಯ ದಿನಾಚರಣೆಯ ದಿನ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

  Published by:Latha CG
  First published: