‘ಕಾಶ್ಮೀರ ವಿಚಾರ ಬಿಡಿ, ನಿಮ್ಮ ದೇಶದ ಹಿಂಸಾಚಾರದ ಬಗ್ಗೆ ಮಾತಾಡಿ‘; ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 35ಎ ಮತ್ತು 370ನೇ ವಿಧಿಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಹಾಗೆಯೇ ಕಣಿವೆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

news18
Updated:September 14, 2019, 9:30 AM IST
‘ಕಾಶ್ಮೀರ ವಿಚಾರ ಬಿಡಿ, ನಿಮ್ಮ ದೇಶದ ಹಿಂಸಾಚಾರದ ಬಗ್ಗೆ ಮಾತಾಡಿ‘; ಪಾಕಿಸ್ತಾನಕ್ಕೆ ಭಾರತ ತಿರುಗೇಟು
ಪ್ರಧಾನಿ ಮೋದಿ, ಇಮ್ರಾನ್​ ಖಾನ್​​
  • News18
  • Last Updated: September 14, 2019, 9:30 AM IST
  • Share this:
ನವದೆಹಲಿ(ಸೆ.14): ಜಮ್ಮು-ಕಾಶ್ಮೀರ ವಿಚಾರದಲ್ಲಿ ಪದೇಪದೇ ಕ್ಯಾತೆ ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. "ನಮ್ಮ ಕಾಶ್ಮೀರದ ವಿಚಾರ ಬಿಡಿ, ನಿಮ್ಮ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಗಮನ ಹರಿಸಿ" ಎಂದು ವಿಶ್ವ ಸಂಸ್ಥೆಯ ಸಭೆಯಲ್ಲಿ ಭಾರತ ಪಾಕಿಸ್ಥಾನಕ್ಕೆ ತಪರಾಕಿ ಬಾರಿಸಿದೆ.

ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಅಧಿವೇಶನದಲ್ಲಿ ಭಾರತದ ಪ್ರತಿನಿಧಿಯಾಗಿ ಕುಮಾಮ್ ಮಿನಿ ದೇವಿ ಭಾಗವಹಿಸಿದ್ದರು. ಈ ವೇಳೆ ಜಮ್ಮು-ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಬೇಕಂತಲೇ ಮೂಗು ತೂರಿಸುತ್ತಿದೆ. ಸುಖಾಸುಮ್ಮನೇ ಜಗತ್ತಿಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸುತ್ತಿದೆ. ಇದರ ಬದಲಿಗೆ ಪಾಕ್‌ ಆಕ್ರಮಿತ ಕಾಶ್ಮೀರ, ಖೈಬರ್‌ ಪ್ರಾಂತ್ಯ, ಬಲೂಚಿಸ್ಥಾನ ಮತ್ತು ಸಿಂಧ್‌ ಪ್ರಾಂತ್ಯದಲ್ಲಿ ನಡೆಯುತ್ತಿರುವ ಕಗ್ಗೊಲೆಗಳ ಬಗ್ಗೆ ಮಾತಾಡಲಿ ಎಂದು ಕಪಾಳಮೋಕ್ಷ ಮಾಡಿದ್ದಾರೆ.

370ನೇ ವಿಧಿ ರದ್ದುಗೊಳಿಸಿದ ಭಾರತದ ವಿರುದ್ಧ ಪಾಕಿಸ್ತಾನ ತಪ್ಪು ಮಾಹಿತಿ ಹರಡುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಾಗಿದೆ ಎಂದು ಸುಳ್ಳು ಹೇಳುತ್ತಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡುವುದು ಭಾರತದ ಆಂತರಿಕ ವಿಷಯ. ಹೀಗಾಗಿ ಪಾಕಿಸ್ಥಾನದ ಉನ್ಮಾದಮತ್ತ ಹೇಳಿಕೆಗಳಿಗೆ ಮನ್ನಣೆ ನೀಡಬೇಕಾದ ಅವಶ್ಯಕೆ ಇಲ್ಲ ಎಂದು ಕುಮಾಮ್‌ ದೇವಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಯುವ ಸಂಸದ ತೇಜಸ್ವಿ ಸೂರ್ಯಗೆ ಬಿಜೆಪಿಯಲ್ಲಿ ರಾಷ್ಟ್ರೀಯ ಹುದ್ದೆ?

ಇತ್ತೀಚೆಗೆ ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಮಾಡುವ ಮುನ್ನವೇ ಕೇಂದ್ರ ಸರ್ಕಾರವು ಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾ ಮೊದಲಾದ ಕಾಶ್ಮೀರೀ ಮುಖಂಡರನ್ನು ಗೃಹ ಬಂಧನದಲ್ಲಿರಿಸಿತ್ತು. ಹಾಗೆಯೇ, ಮೊಬೈಲ್ ಸಂಪರ್ಕವನ್ನೂ ಸ್ಥಗಿತಗೊಳಿಸಿತ್ತು. ಇವತ್ತು ಹಿಂಸಾಚಾರ, ಪ್ರತಿಭಟನೆಗಳು ನಡೆಯುವ ನಿರೀಕ್ಷೆಯಲ್ಲಿ ರಾಜಕಾರಣಿಗಳು ಸೇರಿದಂತೆ ನೂರಾರು ಮಂದಿಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿತ್ತು. ಕಾಶ್ಮೀರದ ಅಧಿಕಾರಿಗಳು ಈ ಕ್ರಮ ತೆಗೆದುಕೊಂಡಿರುವುದನ್ನು ಖಚಿತಪಡಿಸಿದ್ದರು.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 35ಎ ಮತ್ತು 370ನೇ ವಿಧಿಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಹಾಗೆಯೇ ಕಣಿವೆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ. ಇವುಗಳಿಗೆ ಸಂಸತ್​ನ ಎರಡೂ ಸದನಗಳಲ್ಲಿ ಅನುಮೋದನೆಯೂ ಸಿಕ್ಕಿದೆ. ರಾಷ್ಟ್ರಪತಿಗಳ ಅಂಕಿತದೊಂದಿಗೆ ಅಧಿಕೃತವಾಗಿ ಚಾಲನೆಗೆ ಬಂದಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ--------------
First published:September 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading