Russia-Ukraine war: ಶಾಂತಿ ಹಾಗೂ ಸ್ಥಿರತೆ ಕಾಪಾಡುವಂತೆ ವಿಶ್ವಸಂಸ್ಥೆಯಲ್ಲಿ ಭಾರತ ಮನವಿ

United Nation: ಇಪ್ಪತ್ತು ಸಾವಿರಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ಉಕ್ರೇನ್‌ನ ಗಡಿ ಪ್ರದೇಶಗಳನ್ನು ಒಳಗೊಂಡಂತೆ ವಿವಿಧ ಭಾಗಗಳಲ್ಲಿ ನೆಲೆಸಿದ್ದಾರೆ. ಹೀಗಾಗಿ ಅವರನ್ನು ಸುರಕ್ಷಿತವಾಗಿ ಮರಳಿ ದೇಶಕ್ಕೆ ಕರೆತರಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿರುಮೂರ್ತಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಉಕ್ರೇನ್ (Ukraine) ಮೇಲೆ ರಷ್ಯಾ (Russia) ಸಮರ ಸಾರಿದ್ದು, ಉಕ್ರೇನ್ ರಾಜಧಾನಿ (Capital) ಕೈವಾ ಸೇರಿದಂತೆ ಪ್ರಮುಖ ನಗರಗಳ ಮೇಲೆ ವಾಯುದಾಳಿ ಆರಂಭಿಸಿದೆ. ಭಾರಿ ಪ್ರಮಾಣದಲ್ಲಿ ಗುಂಡಿನ ದಾಳಿಗಳು ನಡೆದಿದೆ. ಅಲ್ಲದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Putin) ರಷ್ಯಾ-ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ (Military) ಕಾರ್ಯಾಚರಣೆಯಲ್ಲಿ ಮಧ್ಯೆ ಪ್ರವೇಶಿಸಿದವರ ವಿರುದ್ಧ ಪ್ರತೀಕಾರ ಕ್ರಮ ಕೈಗೊಳ್ಳುವುದಾಗಿ ಕೂಡ ಎಚ್ಚರಿಕೆ ನೀಡಿದ್ದಾರೆ. ಎರಡು ರಾಷ್ಟ್ರಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಶಮನ ಮಾಡಲು ವಿಶ್ವಸಂಸ್ಥೆ (United Nation) ಭದ್ರತಾ ಮಂಡಳಿ ಸಭೆ ನಡೆಸಿ ಮಾತುಕತೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.. ಅಲ್ಲದೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಾತನಾಡಿರುವ ಭಾರತದ (India) ಶಾಂತಿ ಕಾಪಾಡುವಂತೆ ಎರಡು ರಾಷ್ಟ್ರಗಳಿಗೆ ಮನವಿ ಮಾಡಿದೆ.

  ಶಾಂತಿ ಹಾಗೂ ಸಂಯಮದಿಂದ ಇರುವಂತೆ ಭಾರತದ ಮನವಿ

  ಎರಡು ರಾಷ್ಟ್ರಗಳ ನಡುವಿನ ಬಿಕ್ಕಟ್ಟಿನ ಬಗ್ಗೆ ಮಾತನಾಡಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ, ರಷ್ಯಾ ಹಾಗೂ ಉಕ್ರೇನ್ ನಡುವಿನ ಪ್ರಸ್ತುತ ಪರಿಸ್ಥಿತಿಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಈಗಾಗಲೇ ಉಕ್ರೇನ್‌ ಮತ್ತು ಉಕ್ರೇನ್‌ನ ಪೂರ್ವ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ರಷ್ಯಾದ ಘೋಷಣೆಗಳನ್ನು ಗಮನಿಸುತ್ತಿದ್ದೇವೆ. ಈ ಎಲ್ಲಾ ಬೆಳವಣಿಗೆಗಳು ಉಭಯ ದೇಶಗಳ ಭದ್ರತೆ ಮತ್ತು ಶಾಂತಿಗೆ ಭಂಗವಾಗುವ ಸಾಧ್ಯತೆ ನಿಚ್ಚಳವಾಗಿದೆ. ಹೀಗಾಗಿ ಎಲ್ಲಾ ದೇಶಗಳ ಕಾನೂನುಬದ್ಧ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಂಡು, ಉದ್ವಿಗ್ನತೆಯನ್ನು ಶಾಂತಗೊಳಿಸುವುದು ಮತ್ತು ದೀರ್ಘಾವಧಿ ಶಾಂತಿ ಮತ್ತು ಸ್ಥಿರತೆಯನ್ನು ಭದ್ರಪಡಿಸುವುದು ತಕ್ಷಣದ ಆದ್ಯತೆಯಾಗಿದೆ. ಹೀಗಾಗಿ ಎರಡು ರಾಷ್ಟ್ರಗಳು ಸಂಯಮದಿಂದ ಇರಬೇಕು ಎಂದು ತಿರುಮೂರ್ತಿ ಹೇಳಿಕೆ ನೀಡಿದ್ದಾರೆ.

  ಇದನ್ನೂ ಓದಿ: ರಷ್ಯಾ-ಉಕ್ರೇನ್​ ಯುದ್ಧ ಬಿಕ್ಕಟ್ಟು; ಭಾರತದಲ್ಲಿ ಈ ವಸ್ತುಗಳ ಬೆಲೆ ಏರಿಕೆ

  ಭಾರತೀಯರ ರಕ್ಷಣೆಗೆ ಮೊದಲ ಆದ್ಯತೆ ಇಂದ ತಿರುಮೂರ್ತಿ

  ಇನ್ನು ವಿದ್ಯಾರ್ಥಿಗಳು ಸೇರಿದಂತೆ ಇಪ್ಪತ್ತು ಸಾವಿರಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ಉಕ್ರೇನ್‌ನ ಗಡಿ ಪ್ರದೇಶಗಳನ್ನು ಒಳಗೊಂಡಂತೆ ವಿವಿಧ ಭಾಗಗಳಲ್ಲಿ ನೆಲೆಸಿದ್ದಾರೆ. ಹೀಗಾಗಿ ಅವರನ್ನು ಸುರಕ್ಷಿತವಾಗಿ ಮರಳಿ ದೇಶಕ್ಕೆ ಕರೆತರಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿರುಮೂರ್ತಿ ತಿಳಿಸಿದ್ದಾರೆ. ಇನ್ನು ಸಾಧ್ಯವಾದಷ್ಟು ಬೇಗ ಉಕ್ರೇನ್‌ ಅನ್ನು ತೊರೆಯುವಂತೆ ಭಾರತದ ಪ್ರಜೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಭಾರತೀಯ ರಾಯಭಾರ ಕಚೇರಿ ಮತ್ತೊಮ್ಮೆ ಸಲಹೆ ನೀಡಿದೆ. ಅನಿವಾರ್ಯ ಇದ್ದರೆ ಮಾತ್ರ ಉಕ್ರೇನ್‌ನಲ್ಲಿ ಉಳಿದುಕೊಳ್ಳಿ ಎಂದು ಸೂಚಿಸಿದೆ. ಇದಿಷ್ಟೇ ಅಲ್ಲದೆ ಉಕ್ರೇನ್‌ನಲ್ಲಿರುವ ಭಾರತೀಯರನ್ನು ಕರೆತರಲು ಏರಿಂಡಿಯಾದ 3 ವಿಶೇಷ ವಿಮಾನಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ್ದು, ಮೊದಲ ಬ್ಯಾಚ್‌ನಲ್ಲಿ 250 ಜನರು ಭಾರತಕ್ಕೆ ಆಗಮಿಸಿದರು. ಇನ್ನೆರಡು ವಿಮಾನ ಫೆ. 24, 26ರಂದು ಕಾರ್ಯಾಚರಣೆ ನಡೆಸಲಿವೆ.

  ಭಾರತಕ್ಕೆ ತಟ್ಟಲಿರುವ ಬೆಲೆ ಏರಿಕೆ

  ಇನ್ನು ಎರಡು ರಾಷ್ಟ್ರಗಳ ನಡುವಿನ ಯುದ್ಧದ ಬಿಕ್ಕಟ್ಟಿನಿಂದ ಭಾರತದ ಮೇಲೆ ತೀವ್ರ ಪರಿಣಾಮ ಬೀರಲಿದೆ.. ರಷ್ಯಾ ಹಾಗೂ ಉಕ್ರೇನ್ ನಡುವೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದ ಭಾರತವು ವ್ಯಾಪಾರ-ವ್ಯವಹಾರಗಳಲ್ಲಿ ಎರಡು ದೇಶಗಳನ್ನ ಅವಲಂಬಿಸಿತ್ತು.. ಹೀಗಾಗಿ ಭಾರತದಲ್ಲಿ ಎರಡೂ ರಾಷ್ಟ್ರಗಳಿಂದ ಆಮದಾಗುತ್ತಿದ್ದ ವಸ್ತುಗಳಿಗೆ ತೀವ್ರ ಕೊರತೆ ಕಾಣಲಿದ್ದು, ಬೆಲೆ ಏರಿಕೆಯ ಆತಂಕ ಶುರುವಾಗಿದೆ. ಪ್ರಮುಖವಾಗಿ ಪೆಟ್ರೋಲ್ ಡೀಸೆಲ್ ಅಡುಗೆ ಎಣ್ಣೆ, ಲೋಹದ ವಸ್ತುಗಳನ್ನು ಬೆಲೆ ಏರಿಕೆ ಆಗಲಿದೆ.

  ಇದನ್ನೂ ಓದಿ: ರಷ್ಯಾ - ಉಕ್ರೇನ್ ಬಿಕ್ಕಟ್ಟಿಗೆ ಲಾರ್ಡ್‌ ಬಾಬಿಯೇ ಪರಿಹಾರವಂತೆ

  ಇನ್ನು ಉಕ್ರೇನ್‌ನ ಗಡಿಯುದ್ದಕ್ಕೂ ರಷ್ಯಾ ಅನೇಕ ಚೆಕ್‌ಪೋಸ್ಟ್‌ಗಳ ಮೇಲೆ ದಾಳಿ ಮಾಡುತ್ತಿದೆ ಎಂದು ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಉಕ್ರೇನ್‌ನ ಕೈವ್ ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿಗೆ ಒಳಗಾಗಿದೆ ಎಂದು ಆಂತರಿಕ ಸಚಿವಾಲಯವು ಎಚ್ಚರಿಸಿದೆ. ರಷ್ಯಾದ ಸೇನಾ ಪಡೆಗಳು ಕಪ್ಪು ಸಮುದ್ರದ ಬಂದರು ನಗರಗಳಾದ ಒಡೆಸಾ ಮತ್ತು ಮರಿಯುಪೋಲ್‌ನಲ್ಲಿ ಇಳಿದಿವೆ.
  Published by:ranjumbkgowda1 ranjumbkgowda1
  First published: