ನವದೆಹಲಿ(ಜೂ.27): ಕೊರೋನಾ ಸೋಂಕು ಹರಡುವಿಕೆ ಬಹಳ ಕಡಿಮೆ ಇದ್ದಾಗ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಒಂದೇ ವಾರದಲ್ಲಿ ಒಂದು ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿ ದೇಶದ ಕೊರೋನಾ ಪೀಡಿತರ ಸಂಖ್ಯೆ ಐದು ಲಕ್ಷದ ಗಡಿ ದಾಟಿದೆ.
ಭಾರತದಲ್ಲಿ ಪ್ರತಿದಿನ ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 12 ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 17ರಿಂದ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಿಂದ 13 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 19ರಿಂದ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 23ರಿಂದ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 24ರಿಂದ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹಾಗೂ ಜೂನ್ 25ರಿಂದ17 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ. ಕಳೆದ ನಾಲ್ಕು ದಿನಗಳಿಂದ ದಿನವೊಂದರಲ್ಲಿ ದಾಖಲಾದ ಸಂಖ್ಯೆಯಲ್ಲಿ ಪ್ರತಿದಿನವೂ ಒಂದೊಂದು ಸಾವಿರ ಸಂಖ್ಯೆಗಳು ಹೆಚ್ಚಾಗುತ್ತಿವೆ. ಶುಕ್ರವಾರ 18,552 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 5,08,953ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಶುಕ್ರವಾರ 384 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ 15,685ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 2,95,881 ಜನ ಮಾತ್ರ. ದೇಶದಲ್ಲಿ ಇನ್ನೂ 1,97,387 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಜೋರು ಮಳೆಗೆ ಕೆಸರು ಗದ್ದೆಯಂತಾದ ಕೋಲಾರದ ಎಪಿಎಂಸಿ ಮಾರುಕಟ್ಟೆ - ಯಾವುದೇ ಮುಂಜಾಗೃತ ಕ್ರಮಕೈಗೊಳ್ಳದ ಜಿಲ್ಲಾಡಳಿತ
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ. ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392, ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956, ಜೂನ್ 12ರಂದು 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು 16,922, ಜೂನ್ 25ರಂದು 17,296 ಹಾಗೂ ಜೂನ್ 26ರಂದು 18,552 ಹೊಸ ಪ್ರಕರಣಗಳು ಕಂಡುಬಂದಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ