ನವದೆಹಲಿ ( ಡಿ.2): 2021ರ ಗಣರಾಜ್ಯೋತ್ಸವ ಆಚರಣೆಗೆ ಮುಖ್ಯ ಅತಿಥಿಯಾಗಿ ಬ್ರಿಟನ್ ಅಧ್ಯಕ್ಷ ಬೋರಿಸ್ ಜಾನ್ಸನ್ ಅವರನ್ನು ಭಾರತ ಸರ್ಕಾರ ಆಹ್ವಾನಿಸಿದೆ ಎಂಬ ಮಾಹಿತಿಯನ್ನು ಹಲವು ವರದಿಗಳು ತಿಳಿಸಿವೆ. ಆದರೆ, ಈ ಬಗ್ಗೆ ಭಾರತ ಸರ್ಕಾರವಾಗಲಿ ಅಥವಾ ಬ್ರಿಟನ್ ಸರ್ಕಾರವಾಗಲಿ ಸ್ಪಷ್ಟಪಡಿಸಿಲ್ಲ. ಆದರೆ, ಜಾನ್ಸನ್ ಭಾರತಕ್ಕೆ ಭೇಟಿ ನೀಡುವ ಕುರಿತು ಉತ್ಸಕತೆ ತೋರಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಬ್ರಿಟಿಷ್ ಹೈ ಕಮಿಷನ್, ಜಾನ್ಸನ್ ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿ ಭಾಗಿಯಾಗುವ ಬಗ್ಗೆ ಅಧಿಕೃತವಾಗಿ ಹೇಳಲು ಸಾಧ್ಯವಿಲ್ಲ. ಆದರೆ, ಅವರು ಭಾರತಕ್ಕೆ ಶೀಘ್ರದಲ್ಲಿಯೇ ಭೇಟಿ ನೀಡಲು ಉತ್ಸಾಹ ತೋರಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
We can’t confirm one way or other, PM Boris Johnson keen to visit India as soon as possible: British High Commission Spokesperson to ANI on reports of India’s invitation to UK PM for Republic Day
— ANI (@ANI) December 2, 2020
ವರದಿ ಪ್ರಕಾರ ನ.27ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಜಾನ್ಸನ್ ನಡುವೆ ನಡೆದ ದೂರವಾಣಿ ಸಂಭಾಷಣೆ ವೇಳೆ ಮುಂದಿನ ವರ್ಷ ಯುಕೆಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಭಾರತದ ಪ್ರಧಾನಿಯನ್ನು ಆಹ್ವಾನಿಸಿಸಲಾಗಿದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ