HOME » NEWS » National-international » INDIA POST RECRUITMENT 2020 GRAMIN DAK SEVAKS 2582 VACANCIES FOR 10TH PASS HG

India Post Recruitment 2020: 2582 ಗ್ರಾಮೀಣ ಡಾಕ್​ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರಿಗೆ ಅವಕಾಶ

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

news18-kannada
Updated:November 23, 2020, 3:22 PM IST
India Post Recruitment 2020: 2582 ಗ್ರಾಮೀಣ ಡಾಕ್​ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರಿಗೆ ಅವಕಾಶ
ಭಾರತೀಯ ಅಂಚೆ ಇಲಾಖೆ
  • Share this:
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ (ಜಿಡಿಎಸ್) ಹುದ್ದೆಗಳನ್ನು ಅರ್ಜಿ ಆಹ್ವಾನಿಸಿದೆ. ಸುಮಾರು 2582 ಗ್ರಾಮೀಣ ಡಾಕ್​​ ಸೇವಕ ಹುದ್ದೆಗಳು ಖಾಲಿ ಇದ್ದು,  ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಡಿಸೆಂಬರ್​ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

-ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ

-ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ: ಗ್ರಾಮೀಣ ಡಾಕ್​ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5200- ರಿಂದ 22,000-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100-ರೂ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 100-ರೂ, ಪ.ಜಾ, ಪ.ಪಂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://appost.in/gdsonline/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕಾಗಿದೆ. ಡಿಸೆಂಬರ್ 11, 2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
Published by: Harshith AS
First published: November 23, 2020, 2:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories