HOME » NEWS » National-international » INDIA POST RECRUITMENT 2021 FOR GRAMIN DAK SEVAK POSTS HG

India Post Recruitment 2021: 1137 ಗ್ರಾಮೀಣ ಅಂಚೆ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರಿಗೆ ಅವಕಾಶ

ಎಸ್​ಎಸ್​ಎಲ್​ಸಿ  ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

news18-kannada
Updated:March 16, 2021, 4:42 PM IST
India Post Recruitment 2021: 1137 ಗ್ರಾಮೀಣ ಅಂಚೆ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರಿಗೆ ಅವಕಾಶ
ಪ್ರಾತಿನಿಧಿಕ ಚಿತ್ರ.
  • Share this:
ಇಂಡಿಯನ್ ಪೋಸ್ಟಲ್ ಸರ್ಕಲ್ ನಲ್ಲಿ ಖಾಲಿ ಇರುವ 1137 ಬಿಪಿಎಂ, ಎಬಿಪಿಎಂ ಮತ್ತು ಅಂಚೆ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ವಿದ್ಯಾರ್ಹತೆ: ಎಸ್​ಎಸ್​ಎಲ್​ಸಿ  ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಮಾರ್ಚ್‌ 8,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

-ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

-ಬಿಪಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000 ರೂ ವೇತನ ಸಿಗಲಿದೆ

-ಎಬಿಪಿಎಂ/ದಖ್ ಸೇವಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000 ರೂ ವೇತನ ನೀಡಲಾಗುವುದು.ಆಯ್ಕೆ ಹೇಗೆ?: ಆಸಕ್ತ ಅಭ್ಯರ್ಥಿಯನ್ನ ಲಿಖಿತ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಓಸಿ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ/ಮಹಿಳೆ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆದರೆ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಭಾರತೀಯ ಪೋಸ್ಟಲ್ ಸರ್ಕಲ್ ನ ಅಧಿಕೃತ ವೆಬ್‌ಸೈಟ್​ಗೆ http://www.appost.in/gdsonline/home.aspx ಭೇಟಿ ನೀಡುವ ಮೂಲಕ ಏಪ್ರಿಲ್ 7,2021ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.
Published by: Harshith AS
First published: March 16, 2021, 4:26 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories