40 ಸಾವಿರ ಕೋಟಿ ರೂ.ಗೆ ಎಸ್​-400 ಕ್ಷಿಪಣಿ ಖರೀದಿ ಒಪ್ಪಂದಕ್ಕೆ ಭಾರತ-ರಷ್ಯಾ ಸಹಿ

news18
Updated:October 5, 2018, 2:17 PM IST
40 ಸಾವಿರ ಕೋಟಿ ರೂ.ಗೆ ಎಸ್​-400 ಕ್ಷಿಪಣಿ ಖರೀದಿ ಒಪ್ಪಂದಕ್ಕೆ ಭಾರತ-ರಷ್ಯಾ ಸಹಿ
news18
Updated: October 5, 2018, 2:17 PM IST
ನ್ಯೂಸ್ 18 ಕನ್ನಡ

ನವದೆಹಲಿ (ಅ.5): ಸುಮಾರು 40 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 'ಎಸ್-400 ಟ್ರಯಂಫ್' ವಾಯು ರಕ್ಷಣಾ ವ್ಯವಸ್ಥೆಯನ್ನು ಖರೀದಿಸಲು ಭಾರತ ಅಧಿಕೃತವಾಗಿ ರಷ್ಯಾದೊಂದಿಗಿನ ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಿದೆ. ಈ ಮೂಲಕ ಭಾರತದ ರಕ್ಷಣಾ ವ್ಯವಸ್ಥೆಗೆ ಹೊಸ ಬಲ ಬಂದಂತಾಗಿದೆ.
ಭಾರತ ಹಾಗೂ ರಷ್ಯಾ ನಡುವೆ 19ನೇ ದ್ವಿಪಕ್ಷೀಯ ಸಮಾವೇಶ ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಆರಂಭವಾಗಿದ್ದು, ಮೋದಿ ಹಾಗೂ ಪುಟಿನ್ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.



ಪುಟಿನ್ ಜೊತೆಗೆ ಮಾತುಕತೆ ನಡೆಸಿರುವ ಪ್ರಧಾನಿ ಮೋದಿಯವರು ಎಸ್-400 ಟ್ರಯಂಫ್'ಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಅಲ್ಲದೆ, ಉಭಯ ರಾಷ್ಟ್ರಗಳು ಇನ್ನಿತರೆ ಮಹತ್ವದ ಒಪ್ಪಂದಕ್ಕೂ ಸಹಿ ಹಾಕಿವೆ ಎಂದು ವರದಿಗಳು ತಿಳಿಸಿವೆ. 


ರಷ್ಯಾದ ಸೈಬೀರಿಯಾ ಬಳಿಯಿರುವ ನೊವೊಸಿಬಿರ್ಸ್​ಕ್​ನ ಲ್ಲಿ ಭಾರತೀಯ ಮೇಲ್ವಿಚಾರಣಾ ಕೇಂದ್ರವನ್ನು ನಿರ್ಮಿಸುವ ಕುರಿತಂತೆಯೂ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.


ರಷ್ಯಾದಿಂದ ಸಮರ ಸಾಮಾಗ್ರಿಗಳನ್ನು ಖರೀಸಿದ ಕಾರಣಕ್ಕೆ ಕೆಲ ದಿನಗಳ ಹಿಂದಷ್ಟೇ ಚೀನಾ ಮೇಲೆ ಅಮೆರಿಕ ದಿಗ್ಬಂಧನ ವಿಧಿಸಿತ್ತು. ಒಂದು ವೇಳೆ ರಷ್ಯಾದಿಂದ ಎಸ್-400 ಟ್ರಯಂಫ್ ವ್ಯವಸ್ಥೆ ಖರೀದಿಗೆ ಭಾರತ ಮುಂದಾದಲ್ಲಿ ಅದರ ಮೇಲೂ ದಿಗ್ಬಂಧನ ಹೇರುವ ಕುರಿತು ಪರಿಶೀಲನೆ ನಡೆಸುವುದಾಗಿ ಅಮೆರಿಕ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 40 ಸಾವಿರ ಕೋಟಿ ರೂ. ಮೌಲ್ಯದ ಎಸ್-400 ಏರ್'ಡಿಫೆನ್ಸ್ ಸಿಸ್ಟಂ ಖರೀದಿಯತ್ತ ಎಲ್ಲರ ಗಮನ ಕೇಂದ್ರೀಕೃತವಾಗಿತ್ತು. ಅಮೆರಿಕ ಎಚ್ಚರಿಕೆಯ ನಡುವೆಯೂ ರಷ್ಯಾ ಮತ್ತು ಭಾರತದ ನಡುವೆ ಈ ಒಪ್ಪಂದವಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ.


ಮಾತುಕತೆ ವೇಳೆ ಉಭಯ ರಾಷ್ಟ್ರಗಳು ಐಎನ್ಎಸ್ ಚಕ್ರ ಜಲಾಂತರ್ಗಾಮಿ ನೌಕೆ ಜಾಗಕ್ಕೆ ಮರು ನಿರ್ಮಾಣಗೊಂಡಿರುವ, ಪರಮಾಣು ಇಂಧನ ಚಾಲಿತ ಅಕುಲಾ ದರ್ಜೆ ಸಬ್ ಮರೀನ್ ಖರೀದಿಗೆ 14 ಸಾವಿರ ಕೋಟಿ ರೂ. ಒಪ್ಪಂದ, ಕ್ರಿವಾಕ್ ದರ್ಜೆಯ ಲಘು ನೌಕೆಗಳನ್ನು ರೂ.14 ಸಾವಿರ ಕೋಟಿ  ರೂ. ವೆಚ್ಚದಲ್ಲಿ ಖರೀದಿ, ದೇಶದ ಒಂದು ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಏಕೆ-103 ರೈಫಲ್ ಉತ್ಪಾದನೆಗೆ ಒಪ್ಪಂದ ಏರ್ಪಡಲಿದೆ ಎಂದು ಹೇಳಲಾಗಿದೆ.


ಇದಲ್ಲದೆ 2022ಕ್ಕೆ ಭಾರತ ಮಾನವ ಸಹಿತ ಬಾಹ್ಯಾಕಾಶ ಯೋಜನೆ ರೂಪಿಸಿದ್ದು, ಇದಕ್ಕೆ ಪೂರಕವಾಗಿ ಭಾರತದ ಗಗನಯಾತ್ರಿಗಳನ್ನು ಕೆಲ ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕರೆದೊಯ್ಯುವ ಕುರಿತೂ ಉಭಯ ದೇಶಗಳು ಒಪ್ಪಂದ ಮಾಡಿಕೊಳ್ಳಲಿವೆ ಎನ್ನಲಾಗಿದೆ. ಈ ಹಿಂದೆ ಭಾರತದ ರಾಕೇಶ್ ಶರ್ಮಾ ಅವರಿಗೂ ರಷ್ಯಾ ತರಬೇತಿ ನೀಡಿ 1984ರಲ್ಲಿ ಬಾಹ್ಯಾಕಾಶಕ್ಕೆ ಕರೆದೊಯ್ದಿತ್ತು.


ಗುರುವಾರ ಭಾರತಕ್ಕೆ ಆಗಮಿಸಿದ ಪುಟಿನ್ ಅವರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬರಮಾಡಿಕೊಂಡು, ನೇರವಾಗಿ ಮೋದಿ ಅವರ ನಿವಾಸಕ್ಕೆ ಕರೆದೊಯ್ದರು. ಅಲ್ಲಿ ಉಭಯ ನಾಯಕರು ಸಭೆ ನಡೆಸಿದ್ದರು. ಆನಂತರ ಅತಿಥಿಗಳಿಗೆ ಪ್ರಧಾನಿ ಖಾಸಗಿಯಾಗಿ ಔತಣಕೂಟ ಏರ್ಪಡಿಸಿದ್ದರು. ಶುಕ್ರವಾರದಿಂದ ಎರಡು ದಿನ 19ನೇ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ.
First published:October 5, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...