ನವದೆಹಲಿ (ಫೆ.25): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಪ್ರವಾಸ ನಿಮಿತ್ತ ಸೋಮವಾರ ಭಾರತಕ್ಕೆ ಆಗಮಿಸಿದ್ದರು. ಅಹಮದಾಬಾದ್ನ ಮೊಟೆರಾ ಕ್ರೀಡಾಂಗಣದಲ್ಲಿ ನಡೆದಿದ್ದ 'ನಮಸ್ತೆ ಟ್ರಂಪ್' ಕಾರ್ಯಕ್ರಮದಲ್ಲಿ ಭಾರತ-ಅಮೆರಿಕ ನಡುವೆ ಮಹತ್ವದ ರಕ್ಷಣಾ ಒಪ್ಪಂದದ ಬಗ್ಗೆ ಘೋಷಣೆ ಮಾಡಿದ್ದರು. ಇಂದು ಈ ಒಪ್ಪಂದಕ್ಕೆ ಟ್ರಂಪ್ ಮತ್ತು ಮೋದಿ ಸಹಿ ಹಾಕುವ ಸಾಧ್ಯತೆ ಹೆಚ್ಚಾಗಿದೆ.
ಬೆಳಗ್ಗೆ 11 ಗಂಟೆಗೆ
ಹೈದರಾಬಾದ್ ಹೌಸ್ನಲ್ಲಿ ಮೋದಿ ಮತ್ತು ಟ್ರಂಪ್ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಹಲವು ನಿಯೋಗಗಳು ಭಾಗಿಯಾಗಲಿವೆ. ಈ ವೇಳೆ 3 ಬಿಲಿಯನ್ ಡಾಲರ್ ರಕ್ಷಣಾ ಒಪ್ಪಂದಕ್ಕೆ ಭಾರತ-ಅಮೆರಿಕ ಸಹಿ ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮೊಟೆರಾ ಕ್ರೀಡಾಂಗಣದಲ್ಲಿ ಮಾತನಾಡಿದ್ದ ಡೊನಾಲ್ಡ್ ಟ್ರಂಪ್, “ಭಾರತದ ಜೊತೆ 3 ಬಿಲಿಯನ್ ಡಾಲರ್ ರಕ್ಷಣಾ ಒಪ್ಪಂದ ಮಾಡಿಕೊಳ್ಳುತ್ತೇವೆ. ಈ ಒಪ್ಪಂದದಂತೆ ಯುದ್ಧ ವಿಮಾನ, ಸಬ್ಮೆರಿನ್ ಸೇರಿದಂತೆ ನಮ್ಮ ದೇಶದಲ್ಲಿ ಯಾವುದೇ ಅತ್ಯಾಧುನಿಕ ರಕ್ಷಣಾ ಸಾಮಗ್ರಿಗಳನ್ನು ಸಿದ್ಧಪಡಿಸಿದರೂ ನಾವು ಅದನ್ನು ಭಾರತಕ್ಕೆ ನೀಡುತ್ತೇವೆ. ಈ ಮೂಲಕ ಭಾರತ ಏಷ್ಯಾದಲ್ಲಿ ಪ್ರಬಲ ಮಿಲಿಟರಿ ವ್ಯವಸ್ಥೆಯನ್ನು ಹೊಂದುವ ದೇಶವಾಗಲಿದೆ," ಎಂದಿದ್ದರು.
ಇದನ್ನೂ ಓದಿ: ಪಾಕಿಸ್ತಾನ ಭಯೋತ್ಪಾದನೆಯನ್ನು ಹತ್ತಿಕ್ಕಲೇಬೇಕು ಇಲ್ಲದಿದ್ದರೆ ತಕ್ಕ ದಂಡ ತೆರಬೇಕಾಗುತ್ತದೆ; ಡೊನಾಲ್ಡ್ ಟ್ರಂಪ್
ನೆರೆಯ
ಚೀನಾ ಹಾಗೂ ಪಾಕಿಸ್ತಾನ ದೇಶಗಳು ಗಡಿ ವಿಚಾರದಲ್ಲಿ ಸದಾ ಕ್ಯಾತೆ ತೆಗೆಯುತ್ತಿವೆ. ಒಂದೊಮ್ಮೆ ಈ ಒಪ್ಪಂದಕ್ಕೆ ಸಹಿ ಬಿದ್ದರೆ ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಪ್ರಬಲಗೊಳ್ಳಲಿದ್ದು, ಚೀನಾ ಹಾಗೂ ಪಾಕಿಸ್ತಾನವನ್ನು ಸುಲಭವಾಗಿ ಮಣಿಸುವ ತಾಕತ್ತು ಭಾರತಕ್ಕೆ ಬರಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ