HOME » NEWS » National-international » INDIA WILL PAY A HUGE PRICE RAHUL GANDHI AGAIN TARGETS GOVT OVER BORDER STANDOFF WITH CHINA MAK

ಚೀನಾದೊಂದಿನ ಗಡಿ ವಿವಾದದಲ್ಲಿ ಭಾರತ ಭಾರೀ ಬೆಲೆ ತೆರಲಿದೆ; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ಗಡಿಯಲ್ಲಿನ ಸಮಸ್ಯೆಯ ಪರಿಹಾರಕ್ಕಾಗಿ ಚೀನಾದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಹೇಳಿಕೆ ನೀಡಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ಸತ್ಯ ಎಂಬುದು ಖಾತರಿ ಇಲ್ಲ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

MAshok Kumar | news18-kannada
Updated:July 19, 2020, 9:48 AM IST
ಚೀನಾದೊಂದಿನ ಗಡಿ ವಿವಾದದಲ್ಲಿ ಭಾರತ ಭಾರೀ ಬೆಲೆ ತೆರಲಿದೆ; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ರಾಹುಲ್ ಗಾಂಧಿ.
  • Share this:
ನವ ದೆಹಲಿ: "ಕೇಂದ್ರ ಸರ್ಕಾರದ ನಿರ್ಲಕ್ಷ್ಯ ನೀತಿಯಿಂದ ಚೀನಾದೊಂದಿಗಿನ ಗಡಿ ವಿವಾದದಲ್ಲಿ ಭಾರತದ ದೊಡ್ಡ ಬೆಲೆ ತೆರಬೇಕಾಗುತ್ತದೆ" ಎಂದು ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಕಳೆದ ಜೂನ್.15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಉಂಟಾಗಿತ್ತು. ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಮೃತಪಟ್ಟಿದ್ದರು. ಈ ಘಟನೆಯ ನಂತರ ಗಡಿಯಲ್ಲಿ ಎರಡೂ ದೇಶಗಳ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಲಡಾಖ್‌ನ ಏರ್‌ಬೇಸ್‌ಗೆ ತೆರಳಿ ಸೈನಿಕರಿಗೆ ಧೈರ್ಯ ತುಂಬಿದ್ದರು.


ಪ್ರಧಾನಿ ಮೋದಿ ಭೇಟಿ ಬಿನ್ನಿಗೆ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್ ಎರಡು ದಿನಗಳ ಭೇಟಿಗಾಗಿ ಶುಕ್ರವಾರ ಲಡಾಖ್‌ಗೆ ತೆರಳಿದ್ದರು. ಅಲ್ಲಿನ ರಾಜ್‌ನಾಥ್‌ ಸಿಂಗ್ ಅವರ ಭಾಷಣವನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿ ಟೀಕಾಪ್ರಹಾರ ನಡೆಸಿರುವ ರಾಹುಲ್ ಗಾಂಧಿ, “ಗಡಿ ತಕರಾರು ಕುರಿತ ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದ ವರ್ತನೆಯಿಂದ ಚೀನಾ ದೇಶ ಮತ್ತಷ್ಟು ಧೈರ್ಯಗೊಳ್ಳಲಿದೆ. ಪರಿಣಾಮ ಭಾರತ ದೊಡ್ಡ ಬೆಲೆ ತೆರಬೇಕಾದ ಪರಿಸ್ಥಿತಿ ಎದುರಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ರಾಜಕಾರಣಿಗಳ ಫೋನ್‌ ಟ್ಯಾಪಿಂಗ್ ಪ್ರಕರಣ; ರಾಜಸ್ಥಾನ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಇಲಾಖೆಇನ್ನೂ ಲಡಾಖ್‌ನಲ್ಲಿ ಮಾತನಾಡಿರುವ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, “ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ಗಡಿಯಲ್ಲಿನ ಸಮಸ್ಯೆಯ ಪರಿಹಾರಕ್ಕಾಗಿ ಚೀನಾದೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ, ಇದು ಎಷ್ಟರ ಮಟ್ಟಿಗೆ ಸತ್ಯ ಎಂಬುದು ಖಾತರಿ ಇಲ್ಲ” ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
Published by: MAshok Kumar
First published: July 19, 2020, 9:46 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories