ಜಮ್ಮು ಕಾಶ್ಮೀರದಲ್ಲಿ ಎನ್​ಕೌಂಟರ್; ಭಾರತೀಯ ಸೇನಾಪಡೆಯಿಂದ 6 ಉಗ್ರರ ಹತ್ಯೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Terrorists Encounter: ಪುಲ್ವಾಮಾ ಮತ್ತು ಶೋಪಿಯಾನ್​ ಬಳಿ ನಡೆದ ಗುಂಡಿನ ದಾಳಿಯಲ್ಲಿ ಆರು ಉಗ್ರರು ಹತರಾಗಿದ್ದಾರೆ. ಕಳೆದ 24 ಗಂಟೆಗಳಿಂದ ಎರಡು ಎನ್​ಕೌಂಟರ್ ಕಾರ್ಯಾಚರಣೆ ನಡೆಸಲಾಗಿದೆ.

  • Share this:

ಶ್ರೀನಗರ (ಜೂ. 19): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಆರು ಉಗ್ರರನ್ನು ಹತ್ಯೆಗೈದಿದೆ. ಇಲ್ಲಿನ ಎರಡು ಪ್ರದೇಶಗಳಲ್ಲಿ ಏಕಕಾಲಕ್ಕೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಜಮ್ಮುವಿನ ಪೊಲೀಸರು ಮತ್ತು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.


ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಸೇನೆಯ ವಕ್ತಾರ ರಾಜೇಶ್ ಕಲಿಯ, ಪುಲ್ವಾಮಾ ಮತ್ತು ಶೋಪಿಯಾನ್​ ಬಳಿ ನಡೆದ ಗುಂಡಿನ ದಾಳಿಯಲ್ಲಿ ಆರು ಉಗ್ರರು ಹತರಾಗಿದ್ದಾರೆ. ಕಳೆದ 24 ಗಂಟೆಗಳಿಂದ ಎರಡು ಎನ್​ಕೌಂಟರ್ ಕಾರ್ಯಾಚರಣೆ ನಡೆಸಲಾಗಿದೆ. ಪ್ಯಾಂಪೋರ್​ನ ಮೀಜ್ ಎಂಬಲ್ಲಿರುವ ಮಸೀದಿಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದ ಮಾಹಿತಿ ಲಭ್ಯವಾಗಿತ್ತು. ಭಾರತೀಯ ಸೇನಾಪಡೆ ಮಸೀದಿಯನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.



ದಕ್ಷಿಣ ಆವಂತಿಪುರದ ಮಸೀದಿಯಲ್ಲಿ ಅಡಗಿ ಕುಳಿತಿದ್ದ ಉಗ್ರರಿಗೆ ಶರಣಾಗುವಂತೆ ಹೇಳಲಾಗಿತ್ತು. ಆದರೂ ಅವರು ಹೊರಬಾರದ ಹಿನ್ನೆಲೆಯಲ್ಲಿ ಎನ್​ಕೌಂಟರ್ ನಡೆಸಿ ಹತ್ಯೆ ಮಾಡಲಾಗಿದೆ. ಮಸೀದಿಗೆ ಯಾವುದೇ ಹಾನಿಯಾಗದಂತೆ ಉಗ್ರರನ್ನು ಹೊಡೆದುರುಳಿಸಲಾಗಿದೆ.

Published by:Sushma Chakre
First published: