HOME » NEWS » National-international » INDIAN COAST GUARD JOBS JOIN INDIAN COAST GUARD 2020 APPLY FOR NAVIK POSTS HERE FULL DETAILS HG

Indian Coast Guard Jobs: 50 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಉತ್ತೀರ್ಣರಾದವರಿಗೆ ಅವಕಾಶ!

Indian Coast Guard Recruitment:ಖಾಲಿ ಇರುವ ಕೋಸ್ಟ್​​​​ ಗಾರ್ಡ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.

news18-kannada
Updated:November 18, 2020, 7:23 PM IST
Indian Coast Guard Jobs: 50 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಉತ್ತೀರ್ಣರಾದವರಿಗೆ ಅವಕಾಶ!
ಸಾಂದರ್ಭಿಕ ಚಿತ್ರ
  • Share this:
ಭಾರತೀಯ ಕೋಸ್ಟ್ ಗಾರ್ಡ್​ನಲ್ಲಿ ಖಾಲಿ ಇರುವ 50 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದೆಂದು ತಿಳಿಸಿದೆ. ಆನ್‌ಲೈನ್‌ನ್ ಮೂಲಕ ಅಧಿಕೃತ ವೆಬ್​ಸೈಟ್​ಗೆ ತೆರಳಿ ನವೆಂಬರ್ 30,2020 ರಿಂದ ಡಿಸೆಂಬರ್ 7,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.

ವಿದ್ಯಾರ್ಹತೆ:

ಖಾಲಿ ಇರುವ ಕೋಸ್ಟ್​​​​ ಗಾರ್ಡ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಏಪ್ರಿಲ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ಸಿಗಲಿದೆ.ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?:

ಆಸಕ್ತ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ https://joinindiancoastguard.gov.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 30,2020 ರಿಂದ ಪ್ರಾರಂಭವಾಗಿ ಡಿಸೆಂಬರ್ 7,2020ರ  ಒಳಗೆ ಅರ್ಜಿ ಸಲ್ಲಿಸಲು ಸಮಯವಕಾಶವಿರುತ್ತದೆ.
Published by: Harshith AS
First published: November 18, 2020, 7:20 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories