ಭಾರತೀಯ ನೌಕಾಪಡೆ ನೇಮಕಾತಿ: ಎಸ್​ಎಸ್​ಎಲ್​ಸಿ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ

ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಉತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

zahir | news18
Updated:December 7, 2018, 3:39 PM IST
ಭಾರತೀಯ ನೌಕಾಪಡೆ ನೇಮಕಾತಿ: ಎಸ್​ಎಸ್​ಎಲ್​ಸಿ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ
job opening
zahir | news18
Updated: December 7, 2018, 3:39 PM IST
ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವವರಿಗೆ ಸುರ್ವಣಾವಕಾಶ. ಇಂಡಿಯನ್ ನೆವಿಯ ಸೆಲರ್ ವಿಭಾಗದ 3400 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಎಸ್​ಎಸ್ಎಲ್​ಸಿ ಮತ್ತು ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 14 ರಿಂದ ಅಧಿಕೃತ ವೆಬ್​ಸೈಟ್​ www.joinindiannavy.gov.in ಮೂಲಕ ಅರ್ಜಿ ಹಾಕಬಹುದು. ಮುಖ್ಯವಾಗಿ ಈ ಪೋಸ್ಟ್​ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವಿವಾಹಿತರಾಗಿರಬೇಕು ಎಂದು ಭಾರತೀಯ ನೌಕಾಪಡೆ ವೆಬ್​ಸೈಟ್​ನಲ್ಲಿ ತಿಳಿಸಲಾಗಿದೆ.

ಹುದ್ದೆಗಳ ವಿವರ
ಸೆಲರ್ ಸೀನಿಯರ್ ಸೆಕೆಂಡರಿ ನೇಮಕಾತಿ (SSR)- 2500
ಸೆಲರ್ ಆರ್ಟಿಫಿಸರ್ ಅಪ್ರೆಂಟಿಸ್ (AA)- 500

ಸೆಲರ್ ಮೆಟ್ರಿಕ್ ನೇಮಕಾತಿ (MR)- 400

ಅರ್ಹತೆಗಳು
ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಉತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಲ್ಲಿ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಹುದ್ದೆಗಳನ್ನು ನೀಡಲಾಗುತ್ತದೆ.
Loading...

ವಯೋಮಿತಿ
ಇಲ್ಲಿ ಖಾಲಿಯಿರುವ ಹುದ್ದೆಗಳ ವಯೋಮಿತಿಗಳು ಭಿನ್ನವಾಗಿದ್ದು, ಅವಿವಾಹಿತರು ಮಾತ್ರ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆರಿಸಿಕೊಳ್ಳಲಾಗುತ್ತದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಕರೆಯಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ
ಭಾರತೀಯ ನೌಕಾಪಡೆಯ ಅಧಿಕೃತ ವೆಬ್​ಸೈಟ್www.joinindiannavy.gov.in ಗೆ ಭೇಟಿ ನೀಡುವ ಮೂಲಕ ಆನ್​ಲೈನ್​ನಲ್ಲಿ ಅರ್ಜಿಸಲ್ಲಿಸಬಹುದು.

ಇದನ್ನೂ ಓದಿ: ಇದು ವಜ್ರದ ವಿಮಾನ; ಆದರೆ ಅಸಲಿ ವಿಷಯ ಗೊತ್ತಾದರೆ ಅಚ್ಚರಿ ಪಡುತ್ತೀರಿ..!

ಪ್ರಮುಖ ದಿನಾಂಕ
ಡಿಸೆಂಬರ್ 14 ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬಹುದು.

First published:December 7, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ