ನವ ದೆಹಲಿ (ಜುಲೈ 01); ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಯಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.
"ಭಾರತೀಯ ರೈಲ್ವೆ ಇಲಾಖೆಯಲ್ಲಿ ಆಧುನಿಕ ತಂತ್ರಜ್ಞಾನವಾದ ರೋಲಿಂಗ್ ಸ್ಟಾಕ್ ಅನ್ನು ಪರಿಚಯಿಸುವುದು.ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತಿದೆ. ಮತ್ತು ಈ ಹೂಡಿಕೆಯ ಕಾಲಾವಧಿ 35 ವರ್ಷವಾಗಿರುತ್ತದೆ" ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
"ಭಾರತೀಯ ರೈಲ್ವೆ ಜಾಲದಾದ್ಯಂತ 12 ಕ್ಲಸ್ಟರ್‌ಗಳಾಗಿ ವಿಂಗಡಿಸಿ, 151 ಆಧುನಿಕ ರೈಲುಗಳನ್ನು ಪರಿಚಯಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಭವಿಷ್ಯದಲ್ಲಿ ಅಭಿವೃದ್ಧಿಪಡಿಸುವ ಎಲ್ಲಾ ರೈಲುಗಳು ಗರಿಷ್ಟ 160 ಕಿಮೀ ವೇಗದಲ್ಲಿ ಚಲಿಸುವಂತೆ ಹಾಗೂ ಪ್ರತಿ ರೈಲು ಕನಿಷ್ಠ 16 ಬೋಗಿಗಳನ್ನು ಹೊಂದಿರುವಂತೆ ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದೆ.
ಇದನ್ನೂ ಓದಿ : ಸೇನಾ ಜನರಲ್ ಎಂಎಂ ನರವಾನೆ ಜೊತೆ ಶುಕ್ರವಾರ ಲಡಾಖ್‌ಗೆ ಭೇಟಿ ನೀಡಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ