• Home
  • »
  • News
  • »
  • national-international
  • »
  • Monkeypox Case: ಭಾರತದಲ್ಲಿ 3ನೇ ಮಂಕಿಪಾಕ್ಸ್ ಕೇಸ್ ಕೇರಳದಲ್ಲೇ ಪಕ್ಕಾ; ಕರ್ನಾಟಕಕ್ಕೆ ಹೆಚ್ಚಾಯ್ತು ಆತಂಕ

Monkeypox Case: ಭಾರತದಲ್ಲಿ 3ನೇ ಮಂಕಿಪಾಕ್ಸ್ ಕೇಸ್ ಕೇರಳದಲ್ಲೇ ಪಕ್ಕಾ; ಕರ್ನಾಟಕಕ್ಕೆ ಹೆಚ್ಚಾಯ್ತು ಆತಂಕ

ಮಂಕಿಪಾಕ್ಸ್

ಮಂಕಿಪಾಕ್ಸ್

ಕೇರಳದ 35 ವರ್ಷದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲೂ ಆತಂಕ ಹೆಚ್ಚಿದೆ.

  • Share this:

    ತಿರುವನಂತಪುರಂ: ಭಾರತದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ (India's 3rd Monkeypox case) ಖಚಿತವಾಗಿದೆ. 3ನೇ ಮಂಕಿಪಾಕ್ಸ್ ಪ್ರಕರಣವೂ ಕೇರಳದಲ್ಲೇ (Kerala Monkeypox Case) ದೃಢಪಟ್ಟಿದೆ. UAEಯಿಂದ ಮಲಪ್ಪುರಂಗೆ ಜುಲೈ 6ರಂದು ಹಿಂತಿರುಗಿದ್ದ ಕೇರಳದ 35 ವರ್ಷದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಸಹ ಕೇರಳದಲ್ಲಿಯೇ ಭಾರತದ ಮೊದಲ ಎರಡು ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದವು. ಇದೀಗ 3ನೇ ಪ್ರಕರಣವೂ ಕೇರಳದಲ್ಲೇ ಖಚಿತಪಟ್ಟಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. 


    ನೆರೆಯ ರಾಜ್ಯ ಕೇರಳದಲ್ಲಿ 'ಮಂಕಿಪಾಕ್ಸ್' ರೋಗದ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಕಣ್ಗಾವಲು ಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸಿದೆ. ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ತೀವ್ರ ನಿಗಾ ಇರಿಸಲು ನಿರ್ಧರಿಸಿದೆ.
    ಮಂಕಿಪಾಕ್ಸ್​ಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಪ್ರಕಾರ ಪರಿಣಾಮಕಾರಿ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸೂಚನೆ ನೀಡಿದೆ.


    ಕೇರಳದ ಕಣ್ಣೂರಿನಲ್ಲಿ 2ನೇ ಮಂಕಿಪಾಕ್ಸ್ ಪ್ರಕರಣ
    ಜುಲೈ 18 ರಂದು ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಎರಡನೇ ಮಂಗನ ಕಾಯಿಲೆ ವರದಿಯಾದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದರು.


    ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರೀ ನಿಗಾ
    ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೇರಳದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನೆಯಂತೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸ್ಕ್ರೀನಿಂಗ್ ಆರಂಭಿಸಲಾಗಿದೆ. ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತಿದ್ದು, ಅವರು ತೆರಳುವ ಸ್ಥಳದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ. ಅಲ್ಲದೇ 10 ಹಾಸಿಗೆಗಳ ವಿಶೇಷ ವಾರ್ಡ್​ನ್ನು ಸಹ ಮಂಗಳೂರಿನಲ್ಲಿ ಆರಂಭಿಸಲಾಗಿದೆ. 


    ಇದನ್ನೂ ಓದಿ: Mangaluru Alert: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಬೆಡ್​ಗಳ ವಿಶೇಷ ವಾರ್ಡ್; ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟು


    ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾ
    ಅಲ್ಲದೇ, ಪ್ರಯಾಣಿಕರು ಆಗಮಿಸುವ ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣಗಳ ಬಗ್ಗೆಯೂ ನಿಗಾ ವಹಿಸುವುದಾಗಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಗೆ ಆಗಮಿಸುವ ವಿದೇಶಿ ಪ್ರಯಾಣಿಕರ ಬಗ್ಗೆ ನಿಗಾವಿರಿಸಿದೆ.


    ಇದನ್ನೂ ಓದಿ: Monkeypox V/s Marburg Virus: ಮಾನವರಿಗೆ ಯಾವುದು ಮಾರಣಾಂತಿಕ? ಮಂಕಿಪಾಕ್ಸ್ ಅಥವಾ ಮಾರ್ಬರ್ಗ್?


    ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್
    ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಶೇಷ ವಾರ್ಡ್ ತೆರೆಯಲಾಗಿದೆ. 10 ಹಾಸಿಗೆಯುಳ್ಳ ವಾರ್ಡ್​ನಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣದ ಸೋಂಕಿತರ ಮೇಲೆ ನಿಗಾ ಇಡಲು ನಿರ್ಧರಿಸಿದೆ. ಆದರೆ, ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಮಂಕಿ ಪಾಕ್ಸ್ ಲಕ್ಷಣ ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.


    ಕೇರಳ ರಾಜ್ಯದಾದ್ಯಂತ ಹೈ ಅಲರ್ಟ್
    ಕೇರಳದಲ್ಲಿ ಈಗಾಗಲೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಕಾರಣ 5 ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ. ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತದೆ. ಪ್ರಯಾಣಿಕರ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದೀಗ ಕೇರಳದಲ್ಲಿ ಕೋವಿಡ್ ಜೊತೆಗೆ ಮಂಕಿಪಾಕ್ಸ್ ಪ್ರಕರಣ ಭೀತಿ ಹೆಚ್ಚಾಗಿದೆ.

    Published by:ಗುರುಗಣೇಶ ಡಬ್ಗುಳಿ
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು