ಭಾರತದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾನೂನುಗಳು ರೈತರ ಆದಾಯವನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿವೆ. ಆದರೆ ದುರ್ಬಲ ಕೃಷಿಕರಿಗೆ ಸಾಮಾಜಿಕ ಸುರಕ್ಷತೆ ಬಲವನ್ನು ಒದಗಿಸುವ ಅವಶ್ಯಕತೆಯಿದೆ ಎಂದು ಐಎಂಎಫ್ನ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಹೇಳಿದ್ದಾರೆ. ಭಾರತೀಯ ಕೃಷಿಗೆ ಸುಧಾರಣೆಗಳ ಅಗತ್ಯವಿದೆ ಎಂದು ಅವರು ಹೇಳಿದರು.
ಮೂಲಸೌಕರ್ಯ ಸೇರಿದಂತೆ ಸುಧಾರಣೆಗಳು ಅಗತ್ಯವಿರುವ ಅನೇಕ ಕ್ಷೇತ್ರಗಳಿವೆ ಎಂದು ವಾಷಿಂಗ್ಟನ್ ಮೂಲದ ಜಾಗತಿಕ ಹಣಕಾಸು ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞೆಗೀತಾ ಗೋಪಿನಾಥ್ ಅವರು ಮಂಗಳವಾರ ಹೇಳಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳನ್ನು ಭಾರತ ಸರ್ಕಾರವು ಕೃಷಿ ಕ್ಷೇತ್ರದ ಪ್ರಮುಖ ಸುಧಾರಣೆಗಳೆಂದು ಅಂದಾಜಿಸಿದೆ. ಈ ಕಾನೂನುಗಳು ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುತ್ತದೆ ಮತ್ತು ರೈತರು ತಮ್ಮ ಉತ್ಪನ್ನಗಳನ್ನು ದೇಶದಲ್ಲಿ ಎಲ್ಲಿಯಾದರೂ ಬೇಕಾದರೂ ಮಾರಾಟ ಮಾಡಲು ಅವಕಾಶ ಮಾಡಿಕೊಡುತ್ತದೆ.
ಹೊಸ ಕೃಷಿ ಕಾನೂನುಗಳ ಪ್ರಶ್ನೆಗೆ ಉತ್ತರಿಸಿದ ಗೋಪಿನಾಥ್ ಹೀಗೆ ಹೇಳಿದರು. ಈ ನಿರ್ದಿಷ್ಟ ಕೃಷಿ ಕಾನೂನುಗಳು ಮಾರುಕಟ್ಟೆ ಕ್ಷೇತ್ರದಲ್ಲಿದ್ದವು. ಇದು ರೈತರಿಗೆ ಮಾರುಕಟ್ಟೆಯನ್ನು ವಿಸ್ತರಿಸಲಿವೆ. ತೆರಿಗೆ ಪಾವತಿಸದೆ ಮಂಡಿಗಳಲ್ಲದೆ ಅನೇಕ ಮಳಿಗೆಗಳಿಗೆ ಮಾರಾಟ ಮಾಡಲು ಸಾಧ್ಯವಾಗುತ್ತದೆ. ಮತ್ತು ಈ ಕಾನೂನುಗಳು ನನ್ನ ದೃಷ್ಟಿಯಲ್ಲಿ ರೈತರ ಆದಾಯವನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿವೆ. ಪ್ರತಿ ಬಾರಿಯೂ ಸುಧಾರಣೆಯನ್ನು ಜಾರಿಗೆ ತಂದಾಗ, ಪರಿವರ್ತನೆ ವೆಚ್ಚಗಳಿವೆ ಸಾಮಾಜಿಕ ಸುರಕ್ಷರೆ ಬಲವನ್ನು ಒದಗಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಮತ್ತು ಇದು ದುರ್ಬಲ ರೈತರಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಇದನ್ನು ಓದಿ: VK Sasikala: ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಿಂದ ರಿಲೀಸ್; 1 ವಾರದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್
ಭಾರತದಲ್ಲಿ ಸಾವಿರಾರು ರೈತರು, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದವರು ಕಳೆದ ವರ್ಷ ನವೆಂಬರ್ 28 ರಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ ) ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿದ್ದಾರೆ. ಈವರೆಗೆ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆ ನಡೆದಿದ್ದು, ಎರಡೂ ಕಡೆಯವರು ತಮ್ಮ ನಿಲುವುಗಳನ್ನು ಬಿಟ್ಟುಕೊಟ್ಟಿಲ್ಲ. ಹೀಗಾಗಿ 11 ಬಾರಿ ನಡೆದ ಮಾತುಕತೆಗಳು ವಿಫಲವಾಗಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ