ನವ ದೆಹಲಿ (ಜೂನ್ 17); ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ತಾರಕಕ್ಕೇರಿದೆ. ಪರಿಣಾಮ ಸೋಮವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಕನಿಷ್ಟ 20 ಸೈನಿಕರು ಮೃತಪಟ್ಟಿದ್ದಾರೆ. ಈ ಘಟನೆಯ ನಂತರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಇಂದು ದೂರವಾಣಿ ಕರೆ ಮೂಲಕ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಗಡಿಯಲ್ಲಿ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪೋನ್ ಮೂಲಕ ಚರ್ಚೆ ನಡೆಸಿರುವ ಎರಡೂ ದೇಶದ ನಾಯಕರು, ಈ ಗಡಿ ಸಮಸ್ಯೆಯನ್ನು ಶಾಂತಿಯುತವಾಗಿ ಮತ್ತು ನ್ಯಾಯಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ.
ಭಾರತದ ಚೀನಾ ಗಡಿ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಂಜೆ 5 ಗಂಟೆಗೆ ಸರ್ವ ಪಕ್ಷಗಳ ಸಭೆ ಕೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆ ನಡೆಯಲಿದ್ದು, ಇಂಡೋ-ಚೀನಾ ಗಡಿ ವಿವಾದದ ಕುರಿತು ಭಾರತ ಸರ್ಕಾರ ಭವಿಷ್ಯದಲ್ಲಿ ಎಂತಹಾ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಈ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ