IRCON Recruitment 2020: ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನ

ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಪೋಸ್ಟ್ ಗ್ರಾಜುಯೇಟ್  ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದಿರಬೇಕಾಗಿ ತಿಳಿಸಿದೆ.

news18-kannada
Updated:October 8, 2020, 9:32 PM IST
IRCON Recruitment 2020: ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನ
JOB
  • Share this:
ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ನವೆಂಬರ್ 6, 2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ: ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಪೋಸ್ಟ್ ಗ್ರಾಜುಯೇಟ್  ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದಿರಬೇಕಾಗಿ ತಿಳಿಸಿದೆ.

ವಯೋಮಿತಿ: ಸೆಪ್ಟೆಂಬರ್ 1,2020ರ ಅನ್ವಯ ಗರಿಷ್ಟ 33 ರಿಂದ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನ: ಐಆರ್ ಸಿಓಎನ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಅಥವಾ ನೇರಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 1000/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು ಪ.ಜಾತಿ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ: ಆನ್​ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://ircon.org/index.php?lang=en ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಜೊತೆಗೆ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 17,2020 ರಿಂದ ನವೆಂಬರ್ 6,2020ರೊಳಗೆ ಅರ್ಜಿಯನ್ನು ಪೋಸ್ಟ್ ಅಥವಾ ಕೊರಿಯರ್ ಮೂಲಕ ತಲುಪಿಸಬೇಕಿರುತ್ತದೆ.
Published by: Harshith AS
First published: October 8, 2020, 9:32 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading