ಬಿಕ್ಕಟ್ಟಿನ ಸಮಯದಲ್ಲೂ ತೈಲ ಬೆಲೆ ಏರಿಕೆ ಸರಿಯೇ?; ಪ್ರಧಾನಿ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ

ಕೇಂದ್ರ ಸರ್ಕಾರ ಕಳೆದ 6 ವರ್ಷಗಳಿಂದ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುತ್ತಲೇ ಬಂದಿದೆ. ಪೆಟ್ರೋಲ್ ಮೇಲೆ 23.78ರೂ, ಡೀಸೆಲ್ ಮೇಲೆ 28.37 ರೂ ಹೇರಲಾಗಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 258% ರಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ 820% ರಷ್ಟು ಹೆಚ್ಚಿಸಿದೆ. ಇದರಿಂದ 18 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿ.

ಸೋನಿಯಾ ಗಾಂಧಿ.

  • Share this:
ನವ ದೆಹಲಿ (ಜೂನ್‌ 16); "ಇಡೀ ದೇಶ ಕೊರೋನಾ ಸಂಕಷ್ಟಕ್ಕೆ ಸಿಲುಕಿದೆ, ಆರ್ಥಿಕ ಹಿಂಜರಿತದಿಂದಾಗಿ ಜನ ನಲುಗಿ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ತೈಲ ಬೆಲೆ ಪಾತಾಳಕ್ಕೆ ಕುಸಿದಿದೆ. ಆದರೂ, ಇದರ ಲಾಭವನ್ನು ಜನರಿಗೆ ನೀಡುವ ಬದಲು, ತೈಲ ಬೆಲೆಯನ್ನು ದಿನೇ ದಿನೇ ಹೆಚ್ಚಳ ಮಾಡುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ಅಸೂಕ್ಷ್ಮತೆಯನ್ನು ತೋರಿಸುತ್ತದೆ" ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತು ಇಂದು ಪತ್ರ ಬರೆದಿರುವ ಸೋನಿಯಾ ಗಾಂಧಿ, “ಜನರು ಸಂಕಷ್ಟದಲ್ಲಿ ಸಿಲುಕಿರುವ ಸಂದರ್ಭದಲ್ಲಿ ನಿರಂತರ 10 ನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿರುವುದು ಜನರಿಗೆ ಹೆಚ್ಚುವರಿ ಹೊರೆ ಹಾಕಿದಂತಾಗಿದೆ. ಕೊರೋನಾ ಸೋಂಕಿನ ಸಮಸ್ಯೆಯಿಂದ ಭಾರತದ ಸಾರ್ವಜನಿಕ ಆರೋಗ್ಯ, ಆರ್ಥಿಕತೆ ಮತ್ತು ಸಾಮಾಜಿಕ ಸವಾಲುಗಳು ಜನರನ್ನು ಕಾಡುತ್ತಿವೆ.

ಮಾರ್ಚ್ ತಿಂಗಳಿಂದ ಕೊರೋನಾ ಸೋಂಕು ಆರಂಭವಾದ ಬಿಕ್ಕಟ್ಟಿನಿಂದ ಜನರು ಸಂಕಟಷ್ಟಕ್ಕೆ ಸಿಲುಕಿರುವುದು ನನಗೆ ಯಾತನೆಯನ್ನುಂಟು ಮಾಡಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಅಸೂಕ್ಷ್ಮತೆಯಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸುತ್ತಲೇ ಇದೆ” ಎಂದು ದೂರಿದ್ದಾರೆ.

“ಬೆಲೆ ಏರಿಕೆ ಸಂಬಂಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ನಾನು ನಿರೀಕ್ಷಿಸಿದ್ದೇನೆ. ಕೊರೋನಾ ಆರ್ಥಿಕ ಬಿಕ್ಕಟ್ಟಿನಿಂದ ಪ್ರಸ್ತುತ ದೇಶದಲ್ಲಿ ಲಕ್ಷಾಂತರ ಮಂದಿ ಉದ್ಯೋಗವಿಲ್ಲದೆ ಸಂಕಷ್ಟದಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಣ್ಣ, ದೊಡ್ಡ ವ್ಯಾಪಾರಸ್ಥರು ಮತ್ತು ಮಧ್ಯಮ ವರ್ಗದವರು ಆದಾಯವಿಲ್ಲದೆ ತೊಂದರೆಯಲ್ಲಿದ್ದಾರೆ.

ರೈತರು ಸಹ ಬದುಕು ನಡೆಸಲು ಹೋರಾಟವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ತೈಲದ ಮೇಲೆ ಅಬಕಾರಿ ಸುಂಕ ಹೆಚ್ಚಿಸಿ ಜನ ಸಾಮಾನ್ಯರ ಮೇಲೆ ಬರೆಹಾಕಿರುವುದು ಸರಿಯಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಳೆದ ವಾರ ಭಾರೀ ಇಳಿಕೆಯಾಗಿತ್ತು. ಆದರೆ, ಸರ್ಕಾರ ಅದರ ಲಾಭವನ್ನು ಜನರಿಗೆ ತಲುಪಿಸಲೇ ಇಲ್ಲ. ಬದಲಿಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೇರಿ 2 ಲಕ್ಷ 60 ಸಾವಿರ ಕೋಟಿ ಆದಾಯದ ನಿರೀಕ್ಷೆಯಲ್ಲಿದೆ" ಇದು ಅಮಾನವೀಯ" ಎಂದು ಆಕ್ಷೇಪಿಸಿದ್ದಾರೆ.

"ಜನರ ನರಳಾಟ ಹೆಚ್ಚಾಗಿದೆ. ಆದರೂ ಸರ್ಕಾರ ಕ್ರಮ ವಹಿಸಿಲಿಲ್ಲ. ಹಾಗಾಗಿ ಜನರನ್ನು ಭಯ ಮತ್ತು ಅಭದ್ರತೆ ಬಿಡದೆ ಕಾಡುತ್ತಿದೆ. ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಹೆಚ್ಚುವರಿ ಹೊರೆ ಹೊರಿಸಿದಂತಾಗಿದೆ. ಕೇಂದ್ರ ಸರ್ಕಾರ ಕಳೆದ 6 ವರ್ಷಗಳಿಂದ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುತ್ತಲೇ ಬಂದಿದೆ. ಪೆಟ್ರೋಲ್ ಮೇಲೆ 23.78ರೂ, ಡೀಸೆಲ್ ಮೇಲೆ 28.37 ರೂ ಹೇರಲಾಗಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 258% ರಷ್ಟು ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ 820% ರಷ್ಟು ಹೆಚ್ಚಿಸಿದೆ. ಇದರಿಂದ 18 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.

ಇದನ್ನೂ ಓದಿ : ಮಾನಸಿಕ ಆರೋಗ್ಯಕ್ಕೆ ವಿಮಾ ರಕ್ಷಣೆ ಏಕಿಲ್ಲ?; ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ಕಚ್ಚಾತೈಲ ಬೆಲೆ ಕಡಿಮೆಯಾಗಿದ್ದರೂ ಅದರ ಲಾಭವನ್ನು ದೇಶದ ಜನರಿಗೆ ವರ್ಗಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ" ಎಂದು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಸೋನಿಯಾ ಗಾಂಧಿ ಸರಣಿ ಆರೋಪ ಮಾಡಿದ್ದಾರೆ. ಅಲ್ಲದೆ, ಶೀಘ್ರದಲ್ಲಿ ತೈಲ ಬೆಲೆ ಇಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
First published: