ITI Limited Recruitment 2021: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಅವಕಾಶ!

ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ಖಾಲಿ ಇರುವ 17 ಎಕ್ಸಿಕ್ಯುಟಿವ್ ಡೈರೆಕ್ಟರ್, ಮ್ಯಾನೇಜರ್ ಮತ್ತು ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಸಬಹುದಾಗಿ ತಿಳಿಸಿದೆ.

    ವಿದ್ಯಾರ್ಹತೆ: ಬಿ.ಇ, ಎಂ.ಇ, ಎಂ.ಟೆಕ್, ಎಲ್‌ಎಲ್‌ಬಿ, ಎಲ್‌ಎಲ್‌ಎಂ, ಎಂಬಿಎ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ವೇತನ: ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?:

    ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್  ಮೂಲಕ ಐಟಿಐ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://www.itiltd.in/ ಗೆ ಭೇಟಿ ನೀಡಿ.ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಬಳಿಕ ಸಲ್ಲಿಸಿದ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಬೇಕಾದ ಅಗತ್ಯ ದಾಖಲೆಗಳನ್ನು ಜೋಡಿಸಿಕೊಂಡು ಕಚೇರಿಗೆ ಕಳುಹಿಸಬೇಕು. ಜನವರಿ 19,2021ರೊಳಗೆ ದಾಖಲೆಯನ್ನು ಕಳುಹಿಸಿಕೊಡಬೇಕು.

    ಕಚೇರಿ ವಿಳಾಸ: Addl. General Manager -HR, ITI limited, Regd & Corporate office ITI bhavan, Dooravani nagar, Bengaluru -560016.
    First published: