ಜಮ್ಮು ಕಾಶ್ಮೀರ (ಜೂನ್ 06); ಪುಲ್ವಾಮಾ ಜಿಲ್ಲೆಯ ಟ್ರಾಲ್ ಚೌಕ್ ಪ್ರದೇಶದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ವಾಹನದ ಮೇಲೆ ಭಯೋತ್ಪಾದಕರು ಭಾನುವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 7 ಮಂದಿ ನಾಗರಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗ್ರೆನೇಡ್ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಎಲ್ಲಾ ಸಿಆರ್ಪಿಎಫ್ ಯೋಧರು ಸುರಕ್ಷಿತರಾ ಗಿದ್ದಾರೆ. 6-7 ನಾಗರಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳವನ್ನು ಸುತ್ತುವರಿಯಲಾಗಿದ್ದು, ಉಗ್ರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಸಿಆರ್ಪಿಎಫ್ ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದೆ ಬಿಜೆಪಿ ಕೌನ್ಸಿಲರ್ ರಾಕೇಶ್ ಪಂಡಿತಾ ಅವರನ್ನು ತ್ರಾಲ್ನಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದರು. ಮೂವರು ಭಯೋತ್ಪಾದಕರ ಗುಂಪು ಬಿಜೆಪಿ ನಾಯಕರ ಮೇಲೆ ಮನ ಬಂದಂತೆ ಗುಂಡು ಹಾರಿಸಿದ್ದರು.
ಇದಕ್ಕೂ ಮುನ್ನ ಶನಿವಾರ ಶ್ರೀನಗರದಲ್ಲಿ ಭದ್ರತಾ ಪಡೆಗಳು ಶಂಕಿತ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪತ್ತೆ ಮಾಡಿವೆ. ಸುಮಾರು 10 ಕೆಜಿ ತೂಕದ ಉಕ್ಕಿನ ಪಾತ್ರೆಯಲ್ಲಿ ಈ ಸ್ಪೋಟಕವನ್ನು ಚನ್ಪೊರಾದ ಸರ್ಕಾರಿ ಕ್ವಾರ್ಟರ್ಸ್ ಬಳಿ ಇಡಲಾಗಿತ್ತು. ಬಾಂಬ್ ವಿಲೇವಾರಿ ದಳವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿ ಯೊಬ್ಬರು ಕೈ ಜೋಡಿಸಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ