Vice Presidential Election: ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಜಗದೀಪ್ ಧನಕರ್‌, ವಿಪಕ್ಷಗಳಿಂದ ಹುರಿಯಾಳು ಯಾರು?

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ (West Bengal) ರಾಜ್ಯಪಾಲ (Governor) ಜಗದೀಪ್ ಧನಕರ್ (Jagdeep Dhankhar) ಆಯ್ಕೆಯಾಗಿದ್ದಾರೆ. ಇನ್ನು ಇಂದು ತಮ್ಮ ಅಭ್ಯರ್ಥಿ ಕುರಿತಂತೆ ವಿಪಕ್ಷಗಳಿಂದ ಮಹತ್ವದ ಸಭೆ (Meeting) ನಡೆಯಲಿದೆ.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನಕರ್‌

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನಕರ್‌

  • Share this:
ನವದೆಹಲಿ: ಭಾರತದ ರಾಷ್ಟ್ರಪತಿ (President of India) ರಾಮನಾಥ್ ಕೋವಿಂದ್ (Ramanath Kovind) ಹಾಗೂ ಉಪ ರಾಷ್ಟ್ರಪತಿ (Vice President) ವೆಂಕಯ್ಯ ನಾಯ್ಡು (Venkaiaha Naidu) ಅವರ ಅಧಿಕಾರದ ಅವಧಿ ಶೀಘ್ರವೇ ಮುಕ್ತಾಯವಾಗಲಿದೆ. ಹೀಗಾಗಿ ದೇಶದ ಉನ್ನತ 2 ಸ್ಥಾನಗಳಿಗೆ ಶೀಘ್ರವೇ ಚುನಾವಣೆ (Election) ನಡೆಯಲಿದೆ. ಇದೇ 18ರಂದು ರಾಷ್ಟ್ರಪತಿ ಚುನಾವಣೆ (Presidential Election) ನಡೆಯಲಿದೆ. ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ (NDA Candidate) ದ್ರೌಪದಿ ಮುರ್ಮು (Daupadi Murmu) ಹಾಗೂ ವಿಪಕ್ಷಗಳ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ (Yashwanth Sinha) ಕಣದಲ್ಲಿದ್ದಾರೆ. ಮತ್ತೊಂದೆಡೆ ಆಗಷ್ಟ್‌ನಲ್ಲಿ (August) ಉಪ ರಾಷ್ಟ್ರಪತಿ ಚುನಾವಣೆ (Vice Presidential Election) ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ (West Bengal) ರಾಜ್ಯಪಾಲ (Governor) ಜಗದೀಪ್ ಧನಕರ್ (Jagdeep Dhankhar) ಆಯ್ಕೆಯಾಗಿದ್ದಾರೆ. ಇನ್ನು ಇಂದು ತಮ್ಮ ಅಭ್ಯರ್ಥಿ ಕುರಿತಂತೆ ವಿಪಕ್ಷಗಳಿಂದ ಮಹತ್ವದ ಸಭೆ (Meeting) ನಡೆಯಲಿದೆ.

ಉಪ ರಾಷ್ಟ್ರಪತಿ ಅಭ್ಯರ್ಥಿಯಾದ ಜಗದೀಪ್ ಧನಕರ್‌

ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಜಗದೀಪ್ ಧನಕರ್ ಅವರ ಉಮೇದುವಾರಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿನ್ನೆ ಘೋಷಿಸಿದ್ದಾರೆ. ಬಿಜೆಪಿ ಹಾಗೂ ಮಿತ್ರಪಕ್ಷಗಳ ಎಲ್ಲ ಪರಿಗಣನೆಗಳು ಮತ್ತು ಸಮಾಲೋಚನೆಗಳ ಬಳಿಕ, ನಾವು ಜಗದೀಪ್ ಧನಕರ್ ಅವರನ್ನು ಉಪ ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲು ನಿರ್ಧರಿಸಿದ್ದೇವೆ ಎಂದಿರುವ ಜೆಪಿ ನಡ್ಡಾ, ಜಗದೀಪ್ ಧನಕರ್ ಅವರನ್ನು ರೈತನ ಮಗ ಅ್ಂತ ಕರೆದಿದ್ದಾರೆ.

ನಿನ್ನೆ ದೆಹಲಿಯಲ್ಲಿ ನಡೆದಿದ್ದ ಮಹತ್ವದ ಸಭೆ

ನಿನ್ನೆ ನವದೆಹಲಿಯ ಬಿಜೆಪಿ  ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಡೆದಿತ್ತು. ಈ ಸಭೆಯಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮತ್ತು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: Draupadi Murma: ದ್ರೌಪದಿ ಮುರ್ಮು ಯಾರು? ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಹಿನ್ನೆಲೆ ಇಲ್ಲಿದೆ

ಜಗದೀಪ್ ಧನಕರ್ ಬಗ್ಗೆ ಮೋದಿ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಯನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ: “ಕಿಸಾನ್ ಪುತ್ರ ಜಗದೀಪ್ ಧನಕರ್ ಜೀ ತಮ್ಮ ನಮ್ರತೆಗೆ ಹೆಸರುವಾಸಿಯಾಗಿದ್ದಾರೆ. ಅವರು ಯಾವಾಗಲೂ ರೈತರು, ಯುವಕರು, ಮಹಿಳೆಯರು ಮತ್ತು ಅಂಚಿನಲ್ಲಿರುವವರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅವರು ನಮ್ಮ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿರುವುದು ಖುಷಿ ತಂದಿದೆ ಅಂತ ಮೋದಿ ಟ್ವೀಟ್ ಮಾಡಿದ್ದಾರೆ.

ಜಗದೀಪ್ ಧನಕರ್ ಯಾರು?

ಜಗದೀಪ್ ಧನಕರ್ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದಾರೆ. 2019ರಲ್ಲಿ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದೊಂದಿಗಿನ ತಿಕ್ಕಾಟದಿಂದಲೇ  ಆಗಾಗ ಸುದ್ದಿಯಾಗುತ್ತಿದ್ದರು. ವೃತ್ತಿಯಲ್ಲಿ ವಕೀಲರಾಗಿದ್ದ ಧನಕರ್ ಅವರು 1989ರಲ್ಲಿ ರಾಜಕೀಯಕ್ಕೆ ಬಂದರು. ರಾಜಸ್ಥಾನದ ಝುಂಝುನು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. 1990ರಲ್ಲಿ ಕೇಂದ್ರ ಸಚಿವರೂ ಆದರು. ರಾಜಸ್ಥಾನ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದಾರೆ. 1993ರಿಂದ 1998ರವರೆಗೆ ರಾಜಸ್ಥಾನ ವಿಧಾನಸಭೆಯ ಸದಸ್ಯರೂ ಆಗಿದ್ದರು. ಜನತಾ ದಳದಿಂದ ರಾಜಕೀಯ ಜೀವನ ಆರಂಭಿಸಿದ್ದ ಅವರು, ನಂತರ ಕಾಂಗ್ರೆಸ್ ಸೇರಿದ್ದರು. 2003ರಲ್ಲಿ ಅವರು ಬಿಜೆಪಿ ಸೇರಿದರು.

 ಇಂದು ವಿಪಕ್ಷಗಳಿಂದ ಮಹತ್ವದ ಸಭೆ

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತಂತೆ ಇಂದು ವಿಪಕ್ಷ ನಾಯಕರು ಸಭೆ ಸೇರಲಿದ್ದಾರೆ. ಸಂಸತ್‌ನ ಮಳೆಗಾಲದ ಅಧಿವೇಶನಕ್ಕೆ ಸಂಬಂಧಿಸಿ ಸರ್ಕಾರ ಸರ್ವಪಕ್ಷ ಸಭೆ ನಡೆಸಲಿದೆ. ಅದಾದ ಬಳಿಕ, ವಿಪಕ್ಷ ನಾಯಕರು ಒಟ್ಟಾಗಿ ಉಪರಾಷ್ಟ್ರಪತಿ ಚುನಾವಣೆ ಕುರಿತು ಚರ್ಚಿಸಲಿದ್ದಾರೆ.

ಇದನ್ನೂ ಓದಿ: Yashwant Sinha: ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಯಶ್ವಂತ್ ಸಿನ್ಹಾ ಹೆಜ್ಜೆ ಗುರುತು

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

ಆಗಸ್ಟ್ 6 ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ಹೊಸ ಉಪ ರಾಷ್ಟ್ರಪತಿಗಳು ಆಗಸ್ಟ್ 10 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉಪಾಧ್ಯಕ್ಷರ ಚುನಾವಣೆಯ ಚುನಾವಣಾ ಕಾಲೇಜು ಲೋಕಸಭೆ ಮತ್ತು ರಾಜ್ಯಸಭೆಯ ಚುನಾಯಿತ ಮತ್ತು ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡಿರುತ್ತದೆ.
Published by:Annappa Achari
First published: