‘ವಿಧಾನ ಪರಿಷತ್​​​ ರದ್ದುಗೊಳಿಸುವ ಜಗನ್​​ ಸರ್ಕಾರದ ನಿರ್ಧಾರ ಖಂಡನೀಯ‘: ಪವನ್​​ ಕಲ್ಯಾಣ್​​

ನಂತರ ವಿಧಾನ ಪರಿಷತ್ತನ್ನು ವಿಸರ್ಜನೆ ಮಾಡುವ ಮಸೂದೆಯನ್ನು ಮಂಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ಣಯವನ್ನು ಕಳುಹಿಸಲಾಗುತ್ತದೆ. ಸದ್ಯ ದೇಶದಲ್ಲಿ ಕೇವಲ ಆರು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್‌ ಅಸ್ತಿತ್ವದಲ್ಲಿದೆ. ಇದರಲ್ಲಿ ಕರ್ನಾಟಕವೂ ಒಂದು. ಇನ್ನುಳಿದ ರಾಜ್ಯಗಳು ಈಗಾಗಲೇ ಮೇಲ್ಮನೆಯನ್ನು ರದ್ದುಗೊಳಿಸಿವೆ.

ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್, ಜಗನ್​​

ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್, ಜಗನ್​​

 • Share this:
  ಅಮರಾವತಿ(ಜ.27): ರಾಜ್ಯ ವಿಧಾನ ಪರಿಷತ್‌ ರದ್ದುಗೊಳಿಸುವ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ವೈ.ಎಸ್​​ ಜಗನ್​​ ಮೋಹನ್​​ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರದ ವಿರುದ್ಧ ಜನಸೇನಾ ಮುಖ್ಯಸ್ಥ ನಟ ಪವನ್​​ ಕಲ್ಯಾಣ್​​ ಕಿಡಿಕಾರಿದ್ಧಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ನಟ ಪವನ್​​ ಕಲ್ಯಾಣ್​​, ಜಗನ್​​ ಮೋಹನ್​​ ರೆಡ್ಡಿ ಸರ್ಕಾರ ತೀರ್ಮಾನ ನ್ಯಾಯಸಮ್ಮತ ಅಲ್ಲ. ಇದು ಸಂವಿಧಾನಕ್ಕೆ ವಿರುದ್ಧವಾದ ನಿರ್ಧಾರ ಎಂಬುದು ಜನಸೇನೆ ಅಭಿಪ್ರಾಯ ಎಂದರು.

  ವೈ.ಎಸ್​​ ರಾಜಶೇಖರ್​​ ರೆಡ್ಡಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್​​​ ಶುರು ಮಾಡಲಾಯ್ತು. ಅಂದಿನ ವಿಧಾನ ಪರಿಷತ್​​ ಅನ್ನು ಇಂದು ಸಿಎಂ ವೈ.ಎಸ್ ಜಗನ್​​ ಮೋಹನ್​ ರೆಡ್ಡಿ ರದ್ದುಗೊಳಿಸಿರುವುದು ಖಂಡನೀಯ. ಇದರ ವಿರುದ್ಧ ಜನಸೇನೆ ಹೋರಾಟ ಮಾಡಲಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಲುವಾಗಿ ವಿಧಾನ ಪರಿಷತ್​​ ಬೇಕಿದೆ ಎಂದು ನಟ ಪವನ್​​ ಕಲ್ಯಾಣ್​​ ತಿಳಿಸಿದರು.

  ವಿಧಾನ ಪರಿಷತ್​​ ತೆಗೆದು ಹಾಕಲು ಆಂಧ್ರಪ್ರದೇಶ ಸಿಎಂ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಸಚಿವ ಸಂಪುಟ ನಿರ್ಣಯ ತೆಗೆದುಕೊಂಡಿದೆ. ಇದನ್ನು ಈಗಾಗಲೇ ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಆಡಳಿತರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಇರುವುದರಿಂದ ಸುಲಭವಾಗಿ ಅನುಮೋದನೆ ಸಿಕ್ಕಿದೆ.

  ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ವಿಧಾನ ಪರಿಷತ್ ರದ್ದು: ಜಗನ್ ಸಂಪುಟ ಒಪ್ಪಿಗೆ

  ತಮ್ಮ ತಂದೆ ಮತ್ತೆ ಅಸ್ತಿತ್ವಕ್ಕೆ ತಂದಿದ್ದ ವಿಧಾನ ಪರಿಷತ್ ಅನ್ನು ರದ್ದುಗೊಳಿಸುವ ಕುರಿತಂತೆ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಬಳಿಕ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಯಿತು. ನಿರ್ಣಯದ ಪರವಾಗಿ 133 ಮತಗಳು ಬಿದ್ದಿದೆ. ನಿರ್ಣಯದ ವಿರುದ್ಧ ಯಾವುದೇ ಮತ ಚಲಾವಣೆಯಾಗಿಲ್ಲ. ಈ ಮೂಲಕ ಆಂಧ್ರದಲ್ಲೇ ವಿಧಾನ ಪರಿಷತ್ ಅನ್ನು ಎರಡನೇ ಬಾರಿ ವಿಸರ್ಜಿಸಲಾಗಿದೆ.

  ನಂತರ ವಿಧಾನ ಪರಿಷತ್ತನ್ನು ವಿಸರ್ಜನೆ ಮಾಡುವ ಮಸೂದೆಯನ್ನು ಮಂಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ಣಯವನ್ನು ಕಳುಹಿಸಲಾಗುತ್ತದೆ. ಸದ್ಯ ದೇಶದಲ್ಲಿ ಕೇವಲ ಆರು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್‌ ಅಸ್ತಿತ್ವದಲ್ಲಿದೆ. ಇದರಲ್ಲಿ ಕರ್ನಾಟಕವೂ ಒಂದು. ಇನ್ನುಳಿದ ರಾಜ್ಯಗಳು ಈಗಾಗಲೇ ಮೇಲ್ಮನೆಯನ್ನು ರದ್ದುಗೊಳಿಸಿವೆ.
  First published: