ಜಾರ್ಖಂಡ್​ ವಿಧಾನಸಭಾ ಚುನಾವಣೆ; ನ.30ರಿಂದ 5ಹಂತಗಳಲ್ಲಿ ಮತದಾನ, ಡಿ. 23ಕ್ಕೆ ಫಲಿತಾಂಶ

ಜಾರ್ಖಂಡ್​ನ 81 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 81 ಸ್ಥಾನಗಳ ಶಾಸಕರ ಅಧಿಕಾರಾವಧಿ ಜನವರಿ 5ರಂದು ಅಂತ್ಯವಾಗಲಿದೆ.

Latha CG | news18-kannada
Updated:November 1, 2019, 5:44 PM IST
ಜಾರ್ಖಂಡ್​ ವಿಧಾನಸಭಾ ಚುನಾವಣೆ; ನ.30ರಿಂದ 5ಹಂತಗಳಲ್ಲಿ ಮತದಾನ, ಡಿ. 23ಕ್ಕೆ ಫಲಿತಾಂಶ
ಮುಖ್ಯ ಚುಣಾವಣಾಧಿಕಾರಿ ಸುನಿಲ್​ ಅರೋರಾ
  • Share this:
ನವದೆಹಲಿ(ನ.01): ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ.  ನವೆಂಬರ್​ 30ರಿಂದ5 ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 23ಕ್ಕೆ ಫಲಿತಾಂಶ ಹೊರ ಬೀಳಲಿದೆ. 

ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೋರಾ ಜಾರ್ಖಂಡ್​ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಿಸಿದ್ಧಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಜಾರ್ಖಂಡ್​ ವಿಧಾನಸಭೆ ಚುನಾವಣೆ ನವೆಂಬರ್​ 30ರಿಂದ 5 ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 23ಕ್ಕೆ ಫಲಿತಾಂಶ ಬರಲಿದೆ ಎಂದರು.

ನ.30ಕ್ಕೆ ಮೊದಲ ಹಂತದ ಮತದಾನ, ಡಿ.7ರಂದು 2ನೇ ಹಂತದ ಮತದಾನ, ಡಿ.12ರಂದು 3ನೇ ಹಂತದ ಮತದಾನ, ಡಿ.16ರಂದು 4ನೇ ಹಂತದ ಮತದಾನ, ಡಿ.20ರಂದು 5ನೇ ಹಂತದ ಮತದಾನ ನಡೆಯಲಿದೆ.

ಜಲ ವಿವಾದ ರಾಜ್ಯ ವಕೀಲರ ಟೀಂನಲ್ಲಿ ಮಹತ್ವದ ಬದಲಾವಣೆ; 9 ಮಂದಿ ನ್ಯಾಯವಾದಿಗಳಿಗೆ ಕೋಕ್ ಕೊಟ್ಟ ಸರ್ಕಾರ

ರಾಜ್ಯದಲ್ಲಿ ಇಂದಿನಿಂದ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ರಾಜ್ಯ ವಿಧಾನಸಭೆಯ ಐದು ವರ್ಷಗಳ ಅವಧಿ ಜನವರಿ 5, 2020 ಕ್ಕೆ ಮುಕ್ತಾಯಗೊಳ್ಳಲಿದೆ. ಚುನಾವಣಾ ಖರ್ಚಿನ ಮೇಲೆ ಹಿಡಿತ ಸಾಧಿಸಲು ಪ್ರತಿ ಜಿಲ್ಲೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ ಎಂದು ಅರೋರಾ ಹೇಳಿದರು.

ಜಾರ್ಖಂಡ್​ನ 81 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 81 ಸ್ಥಾನಗಳ ಶಾಸಕರ ಅಧಿಕಾರಾವಧಿ ಜನವರಿ 5ರಂದು ಅಂತ್ಯವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 2ನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ 3ನೇ ರಾಜ್ಯದ ಚುನಾವಣೆ ಇದಾಗಿದೆ. ಈ ರಾಜ್ಯದಲ್ಲಿ ಕೂಡ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ, ಜಾರ್ಖಂಡ್ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಕನ್ನಡ ಬಾವುಟ ಹಾರಿಸಬೇಡಿ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಕಚೇರಿ ಮೇಲೆ ಬಾವುಟ ಹಾರಿಸಿದ ಕರವೇಮಹಾರಾಷ್ಟ್ರ, ಹರಿಯಾಣ ಚುನಾವಣೆ ಹಾಗೂ ಇನ್ನೂ ಕೆಲ ರಾಜ್ಯಗಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಿ 1 ವಾರ ಕಳೆದಿದೆ. 2 ರಾಜ್ಯಗಳಲ್ಲಿ ಹೊಸ ಸರ್ಕಾರ ರಚಿಸಲು ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಇದರ ಬೆನ್ನಲ್ಲೇ ಜಾರ್ಖಂಡ್ ಚುನಾವಣೆಯ ದಿನಾಂಕ ಘೋಷಣೆಯಾಗಿದೆ.

First published:November 1, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ