ಇಂದು ಜಾರ್ಖಂಡ್​​ ಚುನಾವಣೆ: 20 ಕ್ಷೇತ್ರಗಳಿಗೆ ಮತದಾನ; ಡಿ.23ಕ್ಕೆ ಅಭ್ಯರ್ಥಿಗಳ ಭವಿಷ್ಯ ಬಹಿರಂಗ

ಇತ್ತೀಚೆಗಷ್ಟೇ ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿತ್ತು. ಈ ಬೆನ್ನಲ್ಲೀಗ ಜಾರ್ಖಂಡ್ ಚುನಾವಣೆ ನಡೆಯುತ್ತಿದೆ.

news18-kannada
Updated:December 7, 2019, 7:33 AM IST
ಇಂದು ಜಾರ್ಖಂಡ್​​ ಚುನಾವಣೆ: 20 ಕ್ಷೇತ್ರಗಳಿಗೆ ಮತದಾನ; ಡಿ.23ಕ್ಕೆ ಅಭ್ಯರ್ಥಿಗಳ ಭವಿಷ್ಯ ಬಹಿರಂಗ
ಪ್ರಾತಿನಿಧಿಕ ಚಿತ್ರ
  • Share this:
ನವದೆಹಲಿ(ಡಿ.07): ಇಂದು ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ ಚುನಾವಣೆ ನಡೆಯಲಿದೆ. ಸುಮಾರು 20 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಸಿಎಂ ರಘುವರ್ ದಾಸ್ ಸೇರಿದಂತೆ ಹಲವು ಘಟಾನುಘಟಿಗಳ ಭವಿಷ್ಯ ನಿರ್ಧಾರವಾಗಲಿದೆ. ಹಾಗೆಯೇ ಡಿ.12ರಂದು 3ನೇ ಹಂತದ ಮತದಾನ, ಡಿ.16ರಂದು 4ನೇ ಹಂತದ ಮತದಾನ, ಡಿ.20ರಂದು 5ನೇ ಹಂತದ ಮತದಾನ ನಡೆಯಲಿದೆ. ಬಳಿಕ ಡಿಸೆಂಬರ್ 23ಕ್ಕೆ ಫಲಿತಾಂಶ ಹೊರ ಬೀಳಲಿದೆ.

ಜಾರ್ಖಂಡ್​​ನಲ್ಲಿ ನವೆಂಬರ್​​ 1ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯ ವಿಧಾನಸಭೆಯ ಐದು ವರ್ಷಗಳ ಅವಧಿ ಜನವರಿ 5, 2020 ಕ್ಕೆ ಮುಕ್ತಾಯಗೊಳ್ಳಲಿದೆ. ಚುನಾವಣಾ ಖರ್ಚಿನ ಮೇಲೆ ಹಿಡಿತ ಸಾಧಿಸಲು ಪ್ರತಿ ಜಿಲ್ಲೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ.

ಜಾರ್ಖಂಡ್​ನ 81 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 81 ಸ್ಥಾನಗಳ ಶಾಸಕರ ಅಧಿಕಾರಾವಧಿ ಜನವರಿ 5ರಂದು ಅಂತ್ಯವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 2ನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ 3ನೇ ರಾಜ್ಯದ ಚುನಾವಣೆ ಇದಾಗಿದೆ. ಈ ರಾಜ್ಯದಲ್ಲಿ ಕೂಡ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ, ಜಾರ್ಖಂಡ್ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಇದನ್ನೂ ಓದಿ: ಜಾರ್ಖಂಡ್​​ ವಿಧಾನಸಭಾ ಚುನಾವಣೆ: ಇಂದಿನಿಂದ ಐದು ಹಂತಗಳಲ್ಲಿ ಮತದಾನ; ಡಿ.23ಕ್ಕೆ ಅಭ್ಯರ್ಥಿಗಳ ಭವಿಷ್ಯ ಬಹಿರಂಗ

ಇತ್ತೀಚೆಗಷ್ಟೇ ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿತ್ತು. ಈ ಬೆನ್ನಲ್ಲೀಗ ಜಾರ್ಖಂಡ್ ಚುನಾವಣೆ ನಡೆಯುತ್ತಿದೆ.
First published: December 7, 2019, 7:33 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading