Jharkhand: ಅಕ್ರಮ ಸಂಬಂಧ ಹಿನ್ನೆಲೆ ವಿವಸ್ತ್ರಗೊಳಿಸಿ ಮಹಿಳೆ ಮೆರವಣಿಗೆ - ಜಾರ್ಖಂಡ್‌ನಲ್ಲೊಂದು ಅಮಾನವೀಯ ಘಟನೆ

Extramarital affair : ಈ ಘಟನೆ  ಡುಮ್ಕಾ   ಜಿಲ್ಲೆಯ ರಣೀಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಇತ್ತೀಚಿನ ದಿನಗಳಲ್ಲಿ ವಿವಾಹದ ನಂತರ ಅನೈತಿಕ ಸಂಬಂಧಗಳ ಬಗ್ಗೆ ಬಹಳ ಕೇಳಿರುತ್ತೇವೆ. ಇನ್ನು ಗಂಡ ಬೇರೆ ಸಂಬಂಧ ಇಟ್ಟುಕೊಂಡ ವಿಚಾರ ತಿಳಿದು, ಹೆಂಡತಿ ರಸ್ತೆಯಲ್ಲಿ ಗಲಾಟೆ ಮಾಡುವುದು ಮತ್ತು ಆ ಮಹಿಳೆಗೆ ಹೊಡೆಯುವ ಬಗ್ಗೆ ಸಹ ನೋಡಿರುತ್ತೇವೆ. ಹಿಂದಿನ ಕಾಲದಲ್ಲಿ ಪರಪುರುಷನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯನ್ನು ಅವಮಾನಿಸುವುದು, ಬೀದಿಯಲ್ಲಿ ಮೊಟ್ಟೆ ಹೊಡೆಯುವುದನ್ನು ಮಾಡುತ್ತಿದ್ದ ಬಗ್ಗೆ ನಾವು ಕೇಳಿದ್ದೇವೆ. ಅಲ್ಲದೇ ಆಕೆಗೆ ನಾನಾ ಬಗೆಯ ಶಿಕ್ಷೆಗಳನ್ನು ಸಹ ನೀಡಲಾಗುತ್ತಿತ್ತು, ಚಿತ್ರಹಿಂಸೆಯನ್ನು ನೀಡುತ್ತಿದ್ದರು. ಆದರೆ ಈಗಿನ ಕಾಲದಲ್ಲಿ  ಇಂಥಹ ಘಟನೆಗಳು ಕಡಿಮೆ, ಆದರೆ ಇದೀಗ   ವಿವಾಹಿತ ಪುರುಷನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೌದು, ವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳನ್ನು ಆಕೆಯ ಕುತ್ತಿಗೆಗೆ ಶೂಗಳ ಮಾಲೆ ಹಾಕಿ ವಿವಸ್ತ್ರಗೊಳಿಸಿದ್ದಾರೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.

ಇನ್ನು ಈ ಘಟನೆ  ಡುಮ್ಕಾ   ಜಿಲ್ಲೆಯ ರಣೀಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ,  ಮಹಿಳೆ ಕೂಡ ವಿವಾಹಿತಳಾಗಿದ್ದು, ಇನ್ನೊಬ್ಬ  ವಿವಾಹಿತ  ವ್ಯಕ್ತಿಯೊಂದಿಗೆ ಪರಾರಿಯಾಗಿದ್ದಳು. ಆದರೆ ಬುಧವಾರ ರಾತ್ರಿ ಆ ವ್ಯಕ್ತಿಯ ಪತ್ನಿಯ ಕುಟುಂಬದವರಿಗೆ ಸಿಕ್ಕಿಬಿದ್ದಿದ್ದು, ಪತ್ನಿಯ ಕುಟುಂಬಸ್ಥರು ಆಕೆಯನ್ನು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಮೇಲೆ ಆಕೆಯ ಬಟ್ಟೆಯನ್ನು ಕಳಚಿ ಅವಳ ಕುತ್ತಿಗೆಗೆ ಶೂಗಳ ಹಾರವನ್ನು ಹಾಕಿ, ಹಳ್ಳಿಯ ರಸ್ತೆಗಳಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಯಿತು ಎಂದು ಅವರು ಹೇಳಿದರು. ಇನ್ನು ಗ್ರಾಮಸ್ಥರು ಸಹ ಇದಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸಿದೆ ಆ ಮಹಿಳೆಗೆ ಆಗುತ್ತಿದ್ದ ಅವಮಾನವನ್ನು ನೋಡುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ.

ಇದನ್ನೂ ಓದಿ: ನೀಟ್ ಎಕ್ಸಾಂ ಸೆಂಟರ್, ಪರೀಕ್ಷೆಗೆ ತಯಾರಾಗುವ ಬಗ್ಗೆ ನಿಮ್ಮೆಲ್ಲಾ ಗೊಂದಲಗಳಿಗೆ ಇಲ್ಲಿದೆ ಉತ್ತರ

ಗುರುವಾರ ಈ ಘಟನೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ 12 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಲ್ಲಿಯವರೆಗೆ, ಆ ವ್ಯಕ್ತಿ ಮತ್ತು ಆತನ ಪತ್ನಿ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಆರೋಪಿ ವ್ಯಕ್ತಿಯು ತನ್ನಿಂದ 25,000 ರೂಪಾಯಿಗಳನ್ನು ಕಸಿದುಕೊಂಡಿದ್ದಾರೆ ಎಂದು ಆ ಮಹಿಳೆ ಆರೋಪಿಸಿದ್ದಾರೆ.

ಐಪಿಸಿ ಸೆಕ್ಷನ್ 148 (ಗಲಭೆ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 506 (ಕ್ರಿಮಿನಲ್ ಬೆದರಿಕೆ), 354 ಬಿ (ದಾಳಿ) ಮತ್ತು 379 (ಕಳ್ಳತನ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಉಳಿದ ಆರು ಆರೋಪಿಗಳನ್ನು ಬಂಧಿಸಲು ಹುಡುಕಾಟ ನಡೆಸಿದ್ದು, ಬಹು ಬೇಗನೆ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

 
Published by:Sandhya M
First published: