Protest: ರೈಲಿಗೆ ಬೆಂಕಿ ಹಚ್ಚಿದ ಉದ್ಯೋಗಾಕಾಂಕ್ಷಿಗಳು, ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ

ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಕುಮಾರ್ ಮಾತನಾಡಿ, ‘ಗಯಾ ಜಂಕ್ಷನ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ. ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬೆಂಕಿ ಹಚ್ಚಿದವರನ್ನು ಪತ್ತೆ ಹಚ್ಚಿದ ನಂತರ ಕ್ರಮ ಕೈಗೊಳ್ಳಲಾಗುವುದು' ಎಂದರು.

ರೈಲಿಗೆ ಬೆಂಕಿ ಹಚ್ಚಿರುವ ದೃಶ್ಯ

ರೈಲಿಗೆ ಬೆಂಕಿ ಹಚ್ಚಿರುವ ದೃಶ್ಯ

  • Share this:
ಬಿಹಾರದಲ್ಲಿ(Bihar) ರೈಲ್ವೆ ಉದ್ಯೋಗಾಂಕ್ಷಿಗಳ ಪ್ರತಿಭಟನೆ ತಾರಕಕ್ಕೇರಿದೆ. ರೈಲ್ವೆ ನೇಮಕಾತಿ ಮಂಡಳಿಯ ನಾನ್‌ ಟೆಕ್ನಿಕಲ್‌ ಪಾಪ್ಯುಲರ್‌ ಕ್ಯಾಟಗರೀಸ್‌ (NTPC-Non Technical Popular Categories) ಪರೀಕ್ಷೆ ವಿಧಾನದ ವಿರುದ್ಧ ಬಿಹಾರದಲ್ಲಿ ಉದ್ಯೋಗಾಕಾಂಕ್ಷಿಗಳು ತಿರುಗಿಬಿದ್ದಿದ್ದಾರೆ. ರೈಲ್ವೆ ಉದ್ಯೋಗಾಂಕ್ಷಿಗಳು(Railway Job Seekers) ರೈಲಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಪರಿಣಾಮ ಅಭ್ಯರ್ಥಿಗಳ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದೆ. ಬುಧವಾರ ಪ್ರತಿಭಟನಾಕಾರರ ಗುಂಪು ಗಯಾ ಜಂಕ್ಷನ್​ನಲ್ಲಿ(Gaya Junction) ನಿಂತಿದ್ದ ಪ್ಯಾಸೆಂಜರ್ ರೈಲಿಗೆ (Passenger Train) ಬೆಂಕಿ ಹಚ್ಚಿದೆ. ಅದೃಷ್ಟವಶಾತ್​ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು(Police) ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಯಾಗಿಸಿದ್ದಾರೆ. ಜೊತೆಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ಕುಂದು-ಕೊರತೆ ಪರಿಹಾರ

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಪ್ರತಿಭಟನಾಕಾರರು ಶಾಂತ ರೀತಿಯಲ್ಲಿ ವರ್ತಿಸುವಂತೆ ಮನವಿ ಮಾಡಿದ್ದಾರೆ. ದಯವಿಟ್ಟು ಸಾರ್ವಜನಿಕ ಆಸ್ತಿಯನ್ನು ನಾಶ ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಅವರ ಕುಂದು-ಕೊರತೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ರೈಲ್ವೆ ಇಲಾಖೆಯು ಸದ್ಯಕ್ಕೆ RRB NTPC ಮತ್ತು ಲೆವೆಲ್ 1 ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ.

ಇದನ್ನೂ ಓದಿ: Morning Digest: ಈ ರಾಜ್ಯಗಳಲ್ಲಿ ಹಿಮಪಾತ-ಮಳೆ, ಬೆಂಗಳೂರಿನಲ್ಲಿ ಪವರ್ ಕಟ್, ಚಿನ್ನದ ಬೆಲೆ ಏರಿಕೆ; ಬೆಳಗಿನ ಟಾಪ್ ನ್ಯೂಸ್​​​ಗಳು

ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಟ್ವೀಟ್

ಏತನ್ಮಧ್ಯೆ, ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತಿಭಟನಾನಿರತ ಅಭ್ಯರ್ಥಿಗಳ ‘ದಮನಕಾರಿ‘ ನೀತಿಯನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಜೊತೆಗೆ ಸರ್ಕಾರವು ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಬೇಕೆಂದು ಸಲಹೆ ನೀಡಿದ್ದಾರೆ. ಬಂಧಿತ ಅಭ್ಯರ್ಥಿಗಳನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಗಯಾ ಜಂಕ್ಷನ್​​ನಲ್ಲಿ ರೈಲಿಗೆ ಬೆಂಕಿ 

ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಕುಮಾರ್ ಮಾತನಾಡಿ, ‘ಗಯಾ ಜಂಕ್ಷನ್‌ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದೇವೆ. ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬೆಂಕಿ ಹಚ್ಚಿದವರನ್ನು ಪತ್ತೆ ಹಚ್ಚಿದ ನಂತರ ಕ್ರಮ ಕೈಗೊಳ್ಳಲಾಗುವುದು' ಎಂದರು.

ರೈಲು ಸಂಚಾರದಲ್ಲಿ ಅಸ್ತವ್ಯಸ್ತ

ಮಂಗಳವಾರ, ಬಿಹಾರದ ಪಾಟ್ನಾ, ನವಾಡ, ಮುಜಾಫರ್‌ಪುರ, ಬಕ್ಸರ್ ಮತ್ತು ಭೋಜ್‌ಪುರ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಕುಳಿತು ರೈಲು ಸಂಚಾರಕ್ಕೆ ಅಡ್ಡಿಪಡಿಸಿದರು. ಪರಿಣಾಮವಾಗಿ ಹಲವು ರೈಲುಗಳ ಸಂಚಾರ ರದ್ದುಗೊಂಡಿತು, ಬಹುತೇಕ ರೈಲುಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು.

ಸಾರ್ವಜನಿಕ ಆಸ್ತಿ ನಾಶ ಮಾಡಬೇಡಿ

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು, ಉದ್ಯೋಗಾಕಾಂಕ್ಷಿಗಳಿಗೆ ಸಾರ್ವಜನಿಕ ಆಸ್ತಿಯನ್ನು ನಾಶ ಮಾಡದಂತೆ ಒತ್ತಾಯಿಸಿದರು ಮತ್ತು ಅವರ ಕುಂದುಕೊರತೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ರೈಲ್ವೆ ಇಲಾಖೆಯು ಸಂಬಂಧಪಟ್ಟ ಮುಖ್ಯಮಂತ್ರಿಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಸಮಸ್ಯೆಯನ್ನು "ಸೂಕ್ಷ್ಮವಾಗಿ" ನಿರ್ವಹಿಸಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು. ಸಾರ್ವಜನಿಕ ಆಸ್ತಿಗೆ ಹಾನಿಯಾದರೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅಪಮಾನ; Amazon ವಿರುದ್ಧ ಪ್ರಕರಣ ದಾಖಲು

ಎನ್‌ಟಿಪಿಸಿ ಪರೀಕ್ಷೆಗಳನ್ನು ಒಂದೇ ಹಂತದಲ್ಲಿ ನಡೆಸುವುದಾಗಿ ರೈಲ್ವೆ ಇಲಾಖೆಯ 2019ರ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ಇತ್ತೀಚೆಗೆ ರೈಲ್ವೆ ನೇಮಕಾತಿ ಮಂಡಳಿ ಎರಡು ಹಂತಗಳಲ್ಲಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ಅಂತಿಮ ಆಯ್ಕೆಗಾಗಿ 2ನೇ ಹಂತದ ಕಂಪ್ಯೂಟರ್‌ ಆಧಾರಿತ ಪರೀಕ್ಷೆ (ಸಿಬಿಟಿ)ಯನ್ನು ಎದುರಿಸಬೇಕಿದ್ದು, ಇದು ಆರ್‌ಆರ್‌ಬಿ-ಎನ್‌ಟಿಪಿಸಿಯು (RRB NTPC ) ಮೊದಲ ಹಂತದಲ್ಲಿ ಉತ್ತೀರ್ಣರಾದವರಿಗೆ ಎಸಗಿರುವ ವಂಚನೆ ಎಂದು ಆರೋಪಿಸಿದ್ದಾರೆ. ಲೆವೆಲ್‌ 2-ಲೆವೆಲ್‌ 6ರವರೆಗಿನ ಒಟ್ಟು 35000 ಹುದ್ದೆಗಳಿಗೆ ಒಟ್ಟು 1.25 ಕೋಟಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
Published by:Latha CG
First published: