ಕೊರೋನಾ ಲಸಿಕೆ ಪ್ರಯೋಗವನ್ನು ಸ್ಥಗಿತಗೊಳಿಸಿದ ಅಮೆರಿಕ ಮೂಲದ ಜಾನ್ಸನ್​ ಅಂಡ್ ಜಾನ್ಸನ್ ಕಂಪೆನಿ

ಈ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅಕ್ಟೋಬರ್​ 12 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

news18-kannada
Updated:October 13, 2020, 3:15 PM IST
ಕೊರೋನಾ ಲಸಿಕೆ ಪ್ರಯೋಗವನ್ನು ಸ್ಥಗಿತಗೊಳಿಸಿದ ಅಮೆರಿಕ ಮೂಲದ ಜಾನ್ಸನ್​ ಅಂಡ್ ಜಾನ್ಸನ್ ಕಂಪೆನಿ
ಸಾಂದರ್ಭಿಕ ಚಿತ್ರ
  • Share this:
ವಾಷಿಂಗ್ಟನ್​ (ಅಕ್ಟೋಬರ್​ 13); ಕಳೆದ ವರ್ಷ ಡಿಸೆಂಬರ್​ ವೇಳೆಗೆ ಚೀನಾದಲ್ಲಿ ಆರಂಭವಾಗಿ ಪ್ರಸ್ತುತ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ಸೋಂಕು ಈಗಾಗಲೇ ಲಕ್ಷಾಂತರ ಜನರ ಪ್ರಾಣವನ್ನು ಬಲಿಪಡೆದಿದೆ. ಕೋಟ್ಯಾಂತರ ಜನ ಈ ಸೋಂಕಿಗೆ ತುತ್ತಾಗಿ ಅವಸ್ತೆಪಡುತ್ತಿದ್ದಾರೆ. ಭಾರತವೂ ಇದಕ್ಕೆ ಹೊರತಾಗಿಲ್ಲ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಅನೇಕ ಖಾಸಗಿ ಭಾಗೀದಾರರು ಈ ಸೋಂಕಿಗೆ ಔಷಧಿ ಕಂಡುಹಿಡಿಯಲು ಮುಂದಾಗಿದ್ದಾರೆ. ಅಲ್ಲದೆ, ಸತತ ಪ್ರಯತ್ನ ನಡೆಸುತ್ತಿದ್ದಾರೆ. ವಿಶ್ವದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿದೆ ಏರಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಕಂಡುಹಿಡಿಯುವ ಪ್ರಯೋಗದಲ್ಲಿ ಹಲವು ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಅಂತಹ ಕಂಪನಿಗಳಲ್ಲಿ ಅಮೆರಿಕ ಮೂಲದ ಜಾನ್ಸನ್ ಮತ್ತು ಜಾನ್ಸನ್ (ಜೆ & ಜೆ) ಕಂಪೆನಿಯೂ ಒಂದು.

ಕಳೆದ ಎಂಟು ತಿಂಗಳಿನಿಂದ ಅಮೆರಿಕ ಮೂಲದ ಜಾನ್ಸನ್ & ಜಾನ್ಸನ್ ಕಂಪನಿ ಕೊರೋನಾ ಲಸಿಕೆಯನ್ನು ಕಂಡುಹಿಡಿಯುವ ಪ್ರಯೋಗದಲ್ಲಿ ನಿರತವಾಗಿತ್ತು. ಆದರೆ, ಈ ಕಂಪೆನಿ ಇದೀಗ ತಾನು ತಯಾರಿಸಿರುವ ಲಸಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿಯೂ, ಪ್ರಯೋಗಕ್ಕೆ ಒಳಗಾದವರಿಗೆ ಡೋಸೆಜ್‌ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ಉತ್ತರಪ್ರದೇಶದಲ್ಲಿ ಶಾಲಾ ಬಾಲಕಿಯ ಮೇಲೆ ಕಾಲೇಜು ಆವರಣದಲ್ಲೇ ಅತ್ಯಾಚಾರ; 8 ಜನ ಕಾಮುಕರ ಬಂಧನ!

ಈ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅಕ್ಟೋಬರ್​ 12 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಕಂಪನಿ ತಯಾರಿಸಿರುವ ಲಸಿಕೆಯ ಮೂರನೇ ಹಾಗೂ ಅಂತಿಮ ಹಂತದಲ್ಲಿ 60 ಸಾವಿರ ಜನರ ಮೇಲೆ ಕ್ಲಿನಿಕಲ್‌ ಪರೀಕ್ಷೆ ನಡೆಸುತ್ತಿತ್ತು. ಕೊರೋನಾ ಲಸಿಕೆ ಪ್ರಯೋಗಗಳು ನಡೆಯುತ್ತಿರುವ ಇತರ ದೇಶಗಳ ಪಟ್ಟಿಯಲ್ಲಿ ಅರ್ಜೆಂಟಿನಾ, ಬ್ರೆಜಿಲ್, ಚಿಲಿ, ಕೊಲಂಬಿಯಾ, ಮೆಕ್ಸಿಕೊ, ಪೆರು ಮತ್ತು ದಕ್ಷಿಣ ಆಫ್ರಿಕಾ ಸಹ ಸೇರಿವೆ.
Published by: MAshok Kumar
First published: October 13, 2020, 1:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading