BJP President: ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಜೆಪಿ ನಡ್ಡಾ

ಈ ಹಿಂದೆ ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಬಿಜೆಪಿಯ ಸಂಸದೀಯ ಮಂಡಳಿಲ್ಲಿ ಈ ನೇಮಕಾತಿ ನಡೆದಿತ್ತು. ಬಳಿಕ ಪಂಚರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಜೆ.ಪಿ ನಡ್ಡಾ ಪೂರ್ಣಪ್ರಮಾಣಲ್ಲಿ ಅಧ್ಯಕ್ಷರಾಗಿ ನಿಯುಕ್ತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು.

news18-kannada
Updated:January 20, 2020, 11:41 AM IST
BJP President: ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಜೆಪಿ ನಡ್ಡಾ
ಜೆ.ಪಿ. ನಡ್ಡಾ.
  • Share this:
ನವದೆಹಲಿ(ಜ.19): ಭಾರತೀಯ ಜನತಾ ಪಕ್ಷದ ಕಾರ್ಯಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ನಾಳೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲೇ ಈ ಸಮಾರಂಭ ನಡೆಯಲಿದ್ದು, ಕೇಂದ್ರ ಸಚಿವರು ಮತ್ತು ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಇವರ ಸಮ್ಮುಖದಲ್ಲೇ ಜೆ.ಪಿ ನಡ್ಡಾ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಈ ಹಿಂದೆ ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಬಿಜೆಪಿಯ ಸಂಸದೀಯ ಮಂಡಳಿಲ್ಲಿ ಈ ನೇಮಕಾತಿ ನಡೆದಿತ್ತು. ಬಳಿಕ ಪಂಚರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಜೆ.ಪಿ ನಡ್ಡಾ ಪೂರ್ಣಪ್ರಮಾಣಲ್ಲಿ ಅಧ್ಯಕ್ಷರಾಗಿ ನಿಯುಕ್ತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಈಗಿನ ಎನ್​ಡಿಎ-2 ಸರ್ಕಾರದಲ್ಲಿ ಅಮಿತ್ ಶಾ ಅವರು ಗೃಹ ಸಚಿವರಾಗಿ ಸಂಪುಟ ಸೇರ್ಪಡೆಯಾದ ಬಳಿಕ ಜೆ.ಪಿ. ನಡ್ಡಾ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುವ ನಿರೀಕ್ಷೆಗಳಿದ್ದವು. ಆದರೆ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರಿಂದ ಈ ಮೂರು ರಾಜ್ಯಗಳ ಚುನಾವಣೆಯು ಆ ಪಕ್ಷದ ಪಾಲಿಗೆ ಅಗ್ನಿಪರೀಕ್ಷೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಈ ಚುನಾವಣೆಗಳು ಮುಗಿಯುವವರೆಗೂ ಪಕ್ಷದ ಚುಕ್ಕಾಣಿ ಹಿಡಿದಿರಲಿದ್ದಾರೆ. ಹಾಗೆಯೇ, 2020ರ ಜನವರಿಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತದೆ. ನಡ್ಡಾ ಅವರೇ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎಂಬುದು ಸ್ಪಷ್ಟವಾಗಿತ್ತು.

ಇದನ್ನೂ ಓದಿ: ಭಾರತದ ಉದಾರವಾದಿ ಪ್ರಜಾಪ್ರಭುತ್ವದ ಸಂಸ್ಥೆಗಳು ಬಲಗೊಳ್ಳಬೇಕು; ಮನಮೋಹನ್ ಸಿಂಗ್ ಕರೆ

ಹಿಮಾಚಲಪ್ರದೇಶ ಮೂಲದ ಬ್ರಾಹ್ಮಣ ಸಮುದಾಯದ ಜೆ.ಪಿ. ನಡ್ಡಾ(58) ಅವರು ಹಿಂದಿನ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ನಡ್ಡಾ ಸಂಘಟನಾ ಚತರುರರೂ ಹೌದು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜವಾಬ್ದಾರಿಯನ್ನು ನಡ್ಡಾ ಸಮರ್ಥವಾಗಿ ನಿಭಾಯಿಸಿದ್ದರು. ಮಹಾಘಟಬಂಧನ್ ಮೈತ್ರಿಕೂಟದ ತೀವ್ರ ಪ್ರತಿರೋಧದ ನಡುವೆಯೂ ಬಿಜೆಪಿಯು ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 62ರಲ್ಲಿ ಗೆಲುವು ಸಾಧಿಸಲು ಶಕ್ಯವಾಯಿತು. ಈ ಸಾಧನೆಯು ಅವರನ್ನು ಬಿಜೆಪಿಯ ಚುಕ್ಕಾಣಿ ಹಿಡಿಯಲು ಕಾರಣವಾಗಿರಬಹುದು.
First published:January 19, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ