ಬಿಜೆಪಿಗೆ ನೂತನ ರಾಷ್ಟ್ರೀಯ ಅಧ್ಯಕ್ಷ: ಅಮಿತ್​​ ಶಾ ಸ್ಥಾನ ತುಂಬಲಿರುವ ಜೆಪಿ ನಡ್ಡಾ

ಈ ಹಿಂದೆ ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಬಿಜೆಪಿಯ ಸಂಸದೀಯ ಮಂಡಳಿಲ್ಲಿ ಈ ನೇಮಕಾತಿ ನಡೆದಿತ್ತು. ಬಳಿಕ ಪಂಚರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಜೆ.ಪಿ ನಡ್ಡಾ ಪೂರ್ಣಪ್ರಮಾಣಲ್ಲಿ ಅಧ್ಯಕ್ಷರಾಗಿ ನಿಯುಕ್ತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಜೆ.ಪಿ. ನಡ್ಡಾ

ಜೆ.ಪಿ. ನಡ್ಡಾ

  • Share this:
ನವದೆಹಲಿ(ಜ.20): ಭಾರತೀಯ ಜನತಾ ಪಕ್ಷದ ಕಾರ್ಯಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲೇ ಈ ಸಮಾರಂಭ ನಡೆಯಲಿದ್ದು, ಕೇಂದ್ರ ಸಚಿವರು ಮತ್ತು ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಇವರ ಸಮ್ಮುಖದಲ್ಲೇ ಜೆ.ಪಿ ನಡ್ಡಾ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಈ ಹಿಂದೆಯೇ ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಬಿಜೆಪಿಯ ಸಂಸದೀಯ ಮಂಡಳಿಲ್ಲಿ ಈ ನೇಮಕಾತಿ ನಡೆದಿತ್ತು. ಬಳಿಕ ಪಂಚರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಜೆ.ಪಿ ನಡ್ಡಾ ಪೂರ್ಣಪ್ರಮಾಣಲ್ಲಿ ಅಧ್ಯಕ್ಷರಾಗಿ ನಿಯುಕ್ತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಈಗಿನ ಎನ್​ಡಿಎ-2 ಸರ್ಕಾರದಲ್ಲಿ ಅಮಿತ್ ಶಾ ಅವರು ಗೃಹ ಸಚಿವರಾಗಿ ಸಂಪುಟ ಸೇರ್ಪಡೆಯಾದ ಬಳಿಕ ಜೆ.ಪಿ. ನಡ್ಡಾ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುವ ನಿರೀಕ್ಷೆಗಳಿದ್ದವು. ಆದರೆ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರಿಂದ ಈ ಮೂರು ರಾಜ್ಯಗಳ ಚುನಾವಣೆಯು ಆ ಪಕ್ಷದ ಪಾಲಿಗೆ ಅಗ್ನಿಪರೀಕ್ಷೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಈ ಚುನಾವಣೆಗಳು ಮುಗಿಯುವವರೆಗೂ ಪಕ್ಷದ ಚುಕ್ಕಾಣಿ ಹಿಡಿದಿರಲಿದ್ದಾರೆ. ಹಾಗೆಯೇ, 2020ರ ಜನವರಿಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತದೆ. ನಡ್ಡಾ ಅವರೇ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎಂಬುದು ಸ್ಪಷ್ಟವಾಗಿತ್ತು.

ಇದನ್ನೂ ಓದಿ: ನಿರ್ಭಯಾ ಅತ್ಯಚಾರಿಗಳ ರಕ್ಷಣೆಗೆ ದೆಹಲಿ ಎಎಪಿ​​ ಸರ್ಕಾರ ಯತ್ನಿಸುತ್ತಿದೆ: ಬಿಜೆಪಿ ಆರೋಪ

ಹಿಮಾಚಲಪ್ರದೇಶ ಮೂಲದ ಬ್ರಾಹ್ಮಣ ಸಮುದಾಯದ ಜೆ.ಪಿ. ನಡ್ಡಾ(58) ಅವರು ಹಿಂದಿನ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ನಡ್ಡಾ ಸಂಘಟನಾ ಚತರುರರೂ ಹೌದು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜವಾಬ್ದಾರಿಯನ್ನು ನಡ್ಡಾ ಸಮರ್ಥವಾಗಿ ನಿಭಾಯಿಸಿದ್ದರು. ಮಹಾಘಟಬಂಧನ್ ಮೈತ್ರಿಕೂಟದ ತೀವ್ರ ಪ್ರತಿರೋಧದ ನಡುವೆಯೂ ಬಿಜೆಪಿಯು ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 62ರಲ್ಲಿ ಗೆಲುವು ಸಾಧಿಸಲು ಶಕ್ಯವಾಯಿತು. ಈ ಸಾಧನೆಯು ಅವರನ್ನು ಬಿಜೆಪಿಯ ಚುಕ್ಕಾಣಿ ಹಿಡಿಯಲು ಕಾರಣವಾಗಿರಬಹುದು.
First published: