HOME » NEWS » National-international » JP NADDA OLD PARTY WARHORSE AND TRUSTED MODI SHAH LIEUTENANT IS NEW BJP PRESIDENT RH

ಮೋದಿ-ಶಾ ನಂಬಿಕಸ್ಥ ಜೆ.ಪಿ. ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಹಿಮಾಚಲಪ್ರದೇಶ ಮೂಲದ ಬ್ರಾಹ್ಮಣ ಸಮುದಾಯದ ಜೆ.ಪಿ. ನಡ್ಡಾ(58) ಅವರು ಹಿಂದಿನ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ನಡ್ಡಾ ಸಂಘಟನಾ ಚತರುರರೂ ಹೌದು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜವಾಬ್ದಾರಿಯನ್ನು ನಡ್ಡಾ ಸಮರ್ಥವಾಗಿ ನಿಭಾಯಿಸಿದ್ದರು.

HR Ramesh | news18-kannada
Updated:January 20, 2020, 3:28 PM IST
ಮೋದಿ-ಶಾ ನಂಬಿಕಸ್ಥ ಜೆ.ಪಿ. ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
ಜೆ.ಪಿ. ನಡ್ಡಾ ಅವರನ್ನು ಅಭಿನಂದಿಸಿದ ಅಮಿತ್ ಶಾ.
  • Share this:
ನವದೆಹಲಿ(ಜ.20): ಭಾರತೀಯ ಜನತಾ ಪಕ್ಷದ ಕಾರ್ಯಾಧ್ಯಕ್ಷರಾಗಿದ್ದ ಜಗತ್ ಪ್ರಕಾಶ್ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.  

ಬಿಜೆಪಿ ಮುಖ್ಯಕಚೇರಿಯಲ್ಲಿ ಗೃಹ ಸಚಿವ ಅಮಿತ್ ಶಾ, ಪಕ್ಷದ ನಾಯಕರು, ಕೇಂದ್ರದ ಸಚಿವರ ಸಮ್ಮುಖದಲ್ಲಿ ಜೆ.ಪಿ. ನಡ್ಡಾ ಅವರು ಬಿಜೆಪಿಯ ಅಧ್ಯಕ್ಷ ಗಾದಿಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡರು.

ಬಿಜೆಪಿ ಹಿರಿಯ ನಾಯಕ ರಾಧಾ ಮೋಹನ್ ಸಿಂಗ್ ಅವರು ಅಧಕ್ಷ ಆಯ್ಕೆ ಚುನಾವಣೆ ಪ್ರಕ್ರಿಯೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಪಕ್ಷದ 36 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಘಟಕಗಳಲ್ಲಿ 21ರಲ್ಲಿ ಪಕ್ಷದ ಆಂತರಿಕ ಮತದಾನದ ಪ್ರಕ್ರಿಯೆ ಪೂರ್ಣಗೊಂಡ ನಂತರ ನೂತನ ಅಧ್ಯಕ್ಷರ ಹೆಸರನ್ನು ಘೋಷಿಸಲಾಯಿತು.

ಹಿಮಾಚಲಪ್ರದೇಶ ಮೂಲದ ಬ್ರಾಹ್ಮಣ ಸಮುದಾಯದ ಜೆ.ಪಿ. ನಡ್ಡಾ(58) ಅವರು ಹಿಂದಿನ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ನಡ್ಡಾ ಸಂಘಟನಾ ಚತರುರರೂ ಹೌದು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜವಾಬ್ದಾರಿಯನ್ನು ನಡ್ಡಾ ಸಮರ್ಥವಾಗಿ ನಿಭಾಯಿಸಿದ್ದರು. ಮಹಾಘಟಬಂಧನ್ ಮೈತ್ರಿಕೂಟದ ತೀವ್ರ ಪ್ರತಿರೋಧದ ನಡುವೆಯೂ ಬಿಜೆಪಿಯು ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 62ರಲ್ಲಿ ಗೆಲುವು ಸಾಧಿಸಿತ್ತು. ಈ ಸಾಧನೆಯು ಅವರನ್ನು ಬಿಜೆಪಿಯ ಚುಕ್ಕಾಣಿ ಹಿಡಿಯಲು ಕಾರಣವಾಗಿರಬಹುದು.

ಇದನ್ನು ಓದಿ: ಬಿಜೆಪಿಗೆ ನೂತನ ರಾಷ್ಟ್ರೀಯ ಅಧ್ಯಕ್ಷ: ಅಮಿತ್​​ ಶಾ ಸ್ಥಾನ ತುಂಬಲಿರುವ ಜೆಪಿ ನಡ್ಡಾ

https://youtu.be/tHvMN5RJYH4
First published: January 20, 2020, 3:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories