• Home
  • »
  • News
  • »
  • national-international
  • »
  • Supreme Court CJ: ಸುಪ್ರೀಂಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕ, ನವೆಂಬರ್ 9ಕ್ಕೆ ನ್ಯಾ ಚಂದ್ರಚೂಡ್ ಪ್ರಮಾಣವಚನ

Supreme Court CJ: ಸುಪ್ರೀಂಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕ, ನವೆಂಬರ್ 9ಕ್ಕೆ ನ್ಯಾ ಚಂದ್ರಚೂಡ್ ಪ್ರಮಾಣವಚನ

ನ್ಯಾ. ಡಿ.ವೈ. ಚಂದ್ರಚೂಡ್

ನ್ಯಾ. ಡಿ.ವೈ. ಚಂದ್ರಚೂಡ್

ನವೆಂಬರ್ 8ರಂದು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ (Uday Umesh Lalit) ಅವರು ನಿವೃತ್ತಿ ಹೊಂದಲಿದ್ದು, ಸುಪ್ರೀಂ ಕೋರ್ಟ್‌ನ (Supreme Court) 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ನ್ಯಾ. ಚಂದ್ರಚೂಡ್‌ ನೇಮಕದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಆದೇಶ ಹೊರಡಿಸಿದ್ದಾರೆ.

ಮುಂದೆ ಓದಿ ...
  • Share this:

ನವದೆಹಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ (Chief Justice of India) ಜಸ್ಟೀಸ್ ಡಿ.ವೈ. ಚಂದ್ರಚೂಡ್ (Justice D.Y. Chandrachud) ಅವರು ನೇಮಕಗೊಂಡಿದ್ದಾರೆ. ನವೆಂಬರ್ 8ರಂದು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ (Uday Umesh Lalit) ಅವರು ನಿವೃತ್ತಿ ಹೊಂದಲಿದ್ದು, ಸುಪ್ರೀಂ ಕೋರ್ಟ್‌ನ (Supreme Court) 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ನ್ಯಾ. ಚಂದ್ರಚೂಡ್‌ ನೇಮಕದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಆದೇಶ ಹೊರಡಿಸಿದ್ದಾರೆ. ಸಂವಿಧಾನದ 124ನೇ (Constitution of India) ವಿಧಿಯ ಕಲಂ (2)ರ ಅಡಿ ಅಧಿಕಾರ ಚಲಾಯಿಸಿ ನ್ಯಾಯಮೂರ್ತಿ ಡಾ. ಧನಂಜಯ ಯಶವಂತ್ ಚಂದ್ರಚೂಡ್ ಅವರನ್ನು ಸಿಜೆಐ ಆಗಿ 2022ರ ನವೆಂಬರ್ 9ರಿಂದ ಅನ್ವಯವಾಗುವಂತೆ ರಾಷ್ಟ್ರಪತಿ (President Of Inida) ಅವರು ಆದೇಶ ಮಾಡಿದ್ದಾರೆ ಎಂದು ಕಾನೂನು ಇಲಾಖೆ (Law) ಹೊರಡಿಸಿರುವ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.


ನವೆಂಬರ್ 9ಕ್ಕೆ ನ್ಯಾ. ಚಂದ್ರಚೂಡ್ ಪ್ರಮಾಣ ವಚನ


ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (CJI) ಅವರು 2 ವರ್ಷ ಅಧಿಕಾರದಲ್ಲಿ ಇರಲಿದ್ದು, 2024ರ ನವೆಂಬರ್ 10ರಂದು ಚಂದ್ರಚೂಡ್ ನಿವೃತ್ತಿ ಹೊಂದಲಿದ್ದಾರೆ. ನ್ಯಾಯಮೂರ್ತಿ ಲಲಿತ್ 74 ದಿನಗಳ ಸಂಕ್ಷಿಪ್ತ ಅಧಿಕಾರಾವಧಿಯನ್ನು ಹೊಂದಿದ್ದರು. ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಎರಡು ವರ್ಷಗಳ ಕಾಲ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಹಾಲಿ ಸಿಜೆಐ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು 65 ನೇ ವಯಸ್ಸಿನಲ್ಲಿ ಅಧಿಕಾರಾವಧಿ ಮುಕ್ತಾಯವಾದ ಒಂದು ದಿನದ ನಂತರ, ನ್ಯಾ. ಚಂದ್ರಚೂಡ್ ನವೆಂಬರ್ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ನ್ಯಾ. ಯುಯು ಲಲಿತ್ ಉತ್ತರಾಧಿಕಾರಿಯಾದ ನ್ಯಾ. ಚಂದ್ರಚೂಡ್


"ತಮ್ಮ ಉತ್ತರಾಧಿಕಾರಿಯನ್ನು ಸೂಚಿಸಿʼʼ ಎಂದು ಕೆಲವು ದಿನದ ಹಿಂದೆ ಕೇಂದ್ರ ಕಾನೂನು ಸಚಿವಾಲಯವು ಯುಯು ಲಲಿತ್‌ಗೆ ಸೂಚನೆ ನೀಡಿತ್ತು. ಯುಯು ಲಲಿತ್‌ ಅವರು ನ್ಯಾಯಮೂರ್ತಿ ಚಂದ್ರಚೂಡ್‌ ಅವರನ್ನು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾ. ಡಿವೈ ಚಂದ್ರಚೂಡ್‌ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಈ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.


ಇದನ್ನೂ ಓದಿ: Notice To Hanuman: ಜಾಗ ಒತ್ತುವರಿ ಮಾಡ್ಕೊಂಡಿದ್ದಾನಂತೆ ಆಂಜನೇಯ! 10 ದಿನಗಳೊಳಗೆ ಖಾಲಿ ಮಾಡುವಂತೆ ನೋಟಿಸ್!


ಕೇಂದ್ರ ಕಾನೂನು ಸಚಿವಾಲಯದಿಂದ ಸ್ಪಷ್ಟನೆ


"ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ಡಾ. ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸಂತೋಷಪಡುತ್ತಾರೆ. ನವೆಂಬರ್ 09, 2022" ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.


ನ್ಯಾ. ಡಿವೈ ಚಂದ್ರಚೂಡ್ ಯಾರು?


ನ್ಯಾ. ಡಿವೈ ಚಂದ್ರಚೂಡ್ ಅವರ ಪೂರ್ಣ ಹೆಸರು ಧನಂಜಯ ವೈ ಚಂದ್ರಚೂಡ್..  ನವದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜ್‍ನಿಂದ ಅರ್ಥಶಾಸ್ತ್ರದಲ್ಲಿ ಬಿ.ಎ. ಆನರ್ಸ್, ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‍ನಿಂದ ಎಲ್.ಎಲ್.ಬಿ. ಪದವಿ ಮತ್ತು ಯು.ಎಸ್.ಎ.ಯ ಹಾರ್ವರ್ಡ್ ಲಾ ಸ್ಕೂಲ್‍ನಿಂದ ಎಲ್.ಎಲ್.ಎಂ. ಮತ್ತು ಎಸ್.ಜೆ.ಡಿ. ಪದವಿ ಪಡೆದಿದ್ದಾರೆ.


ಇದನ್ನೂ ಓದಿ: Weirdest Law: ಹಸು ಸೆಗಣಿ ಹಾಕಿದ್ರೂ ಕೊಡಬೇಕು ಟ್ಯಾಕ್ಸ್! ವಿಚಿತ್ರ ಕಾನೂನಿನಿಂದ ರೈತರು ಕಂಗಾಲು


ತಂದೆಯ ಹೆಸರೂ ಚಂದ್ರಚೂಡ್!


ಅವರು ಸುದೀರ್ಘ ಕಾಲ ಸಿಜೆಐ ಆಗಿ ಸೇವೆ ಸಲ್ಲಿಸಿದ ನ್ಯಾಯಮೂರ್ತಿ ವೈ ವಿ ಚಂದ್ರಚೂಡ್ ಅವರ ಪುತ್ರರಾಗಿದ್ದು, ನವೆಂಬರ್ 11 1959 ರಂದು ಜನಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರ ತಾಯಿ ಶಾಸ್ತ್ರೀಯ ಸಂಗೀತಗಾರರಾಗಿದ್ದರು. ಅವರು ಆರ್ಥಿಕ ಮತ್ತು ಗಣಿತಶಾಸ್ತ್ರದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದರು ಮತ್ತು ನಂತರ 1992 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಕಾನೂನು ವಿಭಾಗದಿಂದ ಕಾನೂನು ಪದವಿಯನ್ನು ಪಡೆದರು ಮತ್ತು ನಂತರ ಹಾರ್ವರ್ಡ್ ಕಾನೂನು ಶಾಲೆಯಿಂದ ಕಾನೂನುಗಳ ಸ್ನಾತಕೋತ್ತರ ಪದವಿಯನ್ನು ಪಡೆದರು.

Published by:Annappa Achari
First published: