• Home
  • »
  • News
  • »
  • national-international
  • »
  • Justice DY Chandrachud: ಭಾರತದ 50 ನೇ ಸಿಜೆಐ ಆದ ನ್ಯಾಯಮೂರ್ತಿ ಚಂದ್ರಚೂಡ್, ಪ್ರಮಾಣ ವಚನ ಬೋಧಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Justice DY Chandrachud: ಭಾರತದ 50 ನೇ ಸಿಜೆಐ ಆದ ನ್ಯಾಯಮೂರ್ತಿ ಚಂದ್ರಚೂಡ್, ಪ್ರಮಾಣ ವಚನ ಬೋಧಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ನ್ಯಾಯಮೂರ್ತಿ ಡಿವೈ ಚಂದ್ರಚೂಡ್

Chief Justice of India: ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಭಾರತದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಔಪಚಾರಿಕವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಸಿಜೆಐ ಆಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಬೋಧಿಸಿದರು.

ಮುಂದೆ ಓದಿ ...
  • Share this:

ನವದೆಹಲಿ(ನ.09): ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Justice DY Chandrachud) ಅವರು ಭಾರತದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಔಪಚಾರಿಕವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಸಿಜೆಐ (CJI) ಆಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ (Rashtrapati Bhavan) ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಉತ್ತರಾಧಿಕಾರಿಯಾಗಿ ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್​ ಡಿವೈ ಚಂದ್ರಚೂಡ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಪ್ರಮಾಣ ವಚನ ಬೋಧಿಸಿದರು.


ಪ್ರಮಾಣವಚನ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗಿ


ಉಪರಾಷ್ಟ್ರಪತಿ ಜಗದೀಪ್ ಧಂಖರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನ್ಯಾಯಮೂರ್ತಿ ಚಂದ್ರಚೂಡ್ ಅವರು ನಿವೃತ್ತ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಸ್ಥಾನಕ್ಕೆ ಬಂದಿದ್ದಾರೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಅಧಿಕಾರಾವಧಿಯು ನವೆಂಬರ್ 10, 2024 ರವರೆಗೆ ಮುಂದುವರಿಯುತ್ತದೆ.


ಇದನ್ನೂ ಓದಿ:  Muzaffarnagar Riots: ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಸೇರಿ 12 ಮಂದಿ ದೋಷಿ, ಜೈಲು ಶಿಕ್ಷೆ!


ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ಜಸ್ಟಿಸ್ ವೈವಿ ಚಂದ್ರಚೂಡ್ ಕೂಡಾ ಸಿಜೆಐ ಆಗಿದ್ದರು


ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ಜಸ್ಟಿಸ್ ವೈವಿ ಚಂದ್ರಚೂಡ್ ಅವರು 2 ಫೆಬ್ರವರಿ 1978 ರಿಂದ 11 ಜುಲೈ 1985 ರವರೆಗೆ ಭಾರತದ 16 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಾಂಗದ ಇತಿಹಾಸದಲ್ಲಿ ತಂದೆ ಮತ್ತು ಮಗ ಸಿಜೆಐ ಆಗುತ್ತಿರುವುದು ಇದೇ ಮೊದಲು. ನ್ಯಾಯಮೂರ್ತಿ ಚಂದ್ರಚೂಡ್ ಅವರು ದೇಶದ ಪ್ರಗತಿಪರ ಮತ್ತು ಉದಾರವಾದಿ ನ್ಯಾಯಾಧೀಶರೆಂದು ಪ್ರಸಿದ್ಧರಾಗಿದ್ದಾರೆ. ಅವರು ನಾಗರಿಕರ ಮೂಲಭೂತ ಹಕ್ಕುಗಳ ಬಗ್ಗೆ ಬಹಳ ಸಂವೇದನಾಶೀಲರು ಎಂದು ಪರಿಗಣಿಸಲಾಗಿದೆ. ನ್ಯಾಯಮೂರ್ತಿ ಚಂದ್ರಚೂಡ್ ಅವರ ದೊಡ್ಡ ಲಕ್ಷಣವೆಂದರೆ ಕೆಟ್ಟದಾಗಿ ವರ್ತಿಸುವವರ ವಿರುದ್ಧ ಕಠಿಣ ವರ್ತನೆ ತೋರುತ್ತಾರೆನ್ನಲಾಗಿದೆ.


ಇದನ್ನೂ ಓದಿ: Eknath Shinde: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಬೆದರಿಕೆ ಕರೆ: ಪೊಲೀಸರಿಂದ ತೀವ್ರ ತನಿಖೆ


ಬಾಂಬೆ ಹೈಕೋರ್ಟ್‌ನಿಂದ ಹಿರಿಯ ವಕೀಲರಾಗಿಯೂ ನೇಮಕ


ನವೆಂಬರ್ 11, 1959 ರಂದು ಜನಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಅಕ್ಟೋಬರ್ 31, 2013 ರಿಂದ ಸುಪ್ರೀಂ ಕೋರ್ಟ್‌ಗೆ ನೇಮಕಗೊಳ್ಳುವವರೆಗೆ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಮೂರ್ತಿ ಚಂದ್ರಚೂಡ್ ಅವರು ಮಾರ್ಚ್ 29, 2000 ರಿಂದ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವವರೆಗೆ ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು. ಅವರು 1998 ರಿಂದ ಬಾಂಬೆ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಳ್ಳುವವರೆಗೆ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದರು. ಜೂನ್ 1998 ರಲ್ಲಿ ಬಾಂಬೆ ಹೈಕೋರ್ಟ್‌ನಿಂದ ಹಿರಿಯ ವಕೀಲರಾಗಿ ನಾಮನಿರ್ದೇಶನಗೊಂಡರು.

Published by:Precilla Olivia Dias
First published: