HOME » NEWS » National-international » JUSTICE NV RAMAN TODAY TAKE OATH AS CHIEF JUSTICE OF INDIA RHHSN

Supreme Court CJI: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಎನ್​.ವಿ. ರಮಣ ಪ್ರಮಾಣವಚನ ಸ್ವೀಕಾರ

ನ್ಯಾ. ಎಸ್​.ಎ. ಬೊಬ್ಡೆ ಅವರು ನ್ಯಾ. ಎನ್​.ವಿ. ರಮಣ ಅವರೊಂದಿಗೆ ಹಲವಾರು ಪ್ರಕರಣಗಳಲ್ಲಿ ನ್ಯಾಯಪೀಠ ಹಂಚಿಕೊಂಡಿದ್ದಾರೆ. ಐತಿಹಾಸಿಕ ಅಯೋಧ್ಯೆ ತೀರ್ಪು ಸೇರಿದಂತೆ ಹಲವಾರು ಪ್ರಮುಖ ಪ್ರಕರಣಗಳನ್ನು ನಿರ್ಧರಿಸಿದ ನ್ಯಾಯಮೂರ್ತಿ ಬೊಬ್ಡೆ ಅವರು 2019 ರ ನವೆಂಬರ್‌ನಲ್ಲಿ 47ನೇ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಿದರು.

news18-kannada
Updated:April 24, 2021, 12:09 PM IST
Supreme Court CJI: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಎನ್​.ವಿ. ರಮಣ ಪ್ರಮಾಣವಚನ ಸ್ವೀಕಾರ
ನ್ಯಾ| ಎನ್ ವಿ ರಮಣ
  • Share this:
ನವದೆಹಲಿ: ಸುಪ್ರೀಂಕೋರ್ಟ್ 48ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಿದರು.

ನ್ಯಾ. ಎನ್​.ವಿ. ರಮಣ ಅವರನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ನೇಮಕಾತಿಗೆ ಸಂಬಂಧ ಏಪ್ರಿಲ್ 6ರಂದು ನ್ಯಾಯಾಂಗ ಇಲಾಖೆ, ಕಾನೂನು ಸಚಿವಾಲಯ ಅಧಿಸೂಚನೆ ಪ್ರಕಟಿಸಿತು. ಈ ಹಿಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಶರದ್ ಅರವಿಂದ್ ಬೊಬ್ದೆ ಅವರು ನ್ಯಾ. ಎನ್.ವಿ.ರಮಣ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದರು.

ನ್ಯಾಯಮೂರ್ತಿ ರಮಣ ಮೊದಲ ತಲೆಮಾರಿನ ವಕೀಲರಾಗಿದ್ದು, ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಪೊನ್ನವರಂ ಗ್ರಾಮದವರು. 22 ವರ್ಷಗಳ ಕಾಲ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ನ್ಯಾ.ಎಸ್​.ಎ. ಬೊಬ್ಡೆ ಅವರು ಶುಕ್ರವಾರ ಸಿಜೆಐ ಸ್ಥಾನದಿಂದ ನಿವೃತ್ತರಾದರು. ಸಿಜೆಐ ಸ್ಥಾನದಿಂದ ನಿರ್ಗಮಿಸಿದ ಬಳಿಕ ಅವರು ಸುಪ್ರೀಂಕೋರ್ಟ್ ಅನ್ನು ಸಂತೋಷ, ಸದ್ಭಾವನೆ ಮತ್ತು ಬಹಳ ಪ್ರೀತಿಯ ನೆನಪುಗಳೊಂದಿಗೆ ಹಾಗೂ ಇರುವಷ್ಟು ಕಾಲ ಅತ್ಯುತ್ತಮ ಕಾರ್ಯ ಮಾಡಿದ ತೃಪ್ತಿಯೊಂದಿಗೆ ನಿರ್ಗಮಿಸುತ್ತಿರುವುದಾಗಿ  ಹೇಳಿದರು.

ನ್ಯಾ. ಎಸ್​.ಎ. ಬೊಬ್ಡೆ ಅವರು ನ್ಯಾ. ಎನ್​.ವಿ. ರಮಣ ಅವರೊಂದಿಗೆ ಹಲವಾರು ಪ್ರಕರಣಗಳಲ್ಲಿ ನ್ಯಾಯಪೀಠ ಹಂಚಿಕೊಂಡಿದ್ದಾರೆ. ಐತಿಹಾಸಿಕ ಅಯೋಧ್ಯೆ ತೀರ್ಪು ಸೇರಿದಂತೆ ಹಲವಾರು ಪ್ರಮುಖ ಪ್ರಕರಣಗಳನ್ನು ನಿರ್ಧರಿಸಿದ ನ್ಯಾಯಮೂರ್ತಿ ಬೊಬ್ಡೆ ಅವರು 2019 ರ ನವೆಂಬರ್‌ನಲ್ಲಿ 47ನೇ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಿದರು.

ಇದನ್ನು ಓದಿ: ಉತ್ತರಾಖಂಡದಲ್ಲಿ ಹಿಮಪಾತಕ್ಕೆ ಎಂಟು ಮಂದಿ ಬಲಿ, 6 ಜನರ ಸ್ಥಿತಿ ಗಂಭೀರ

ನ್ಯಾ. ಶರದ್ ಅರವಿಂದ್ ಬೋಬ್ಡೆ ಬಳಿಕ ನ್ಯಾ| ಎನ್ ವಿ ರಮಣ ಅವರೇ ಸುಪ್ರೀಂ ಕೋರ್ಟ್​ನಲ್ಲಿ ಅತಿ ಹಿರಿಯ ನ್ಯಾಯಮೂರ್ತಿ ಎನಿಸಿದ್ದಾರೆ. ನ್ಯಾ| ರಮಣ ಅವರ ಸೇವಾವಧಿ 2022, ಆಗಸ್ಟ್ 26ರವರೆಗೂ ಇದೆ. 1957, ಆಗಸ್ಟ್ 27ರಂದು ಜನಿಸಿದ ನ್ಯಾ| ರಮಣ ಅವರು 2000ರ ಜೂನ್​ನಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್​ಗೆ ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ಅದಾದ ಬಳಿಕ ಅವರ ಅವರು ದೆಹಲಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ನಂತರ 2014, ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಅವರನ್ನ ನೇಮಕ ಮಾಡಲಾಯಿತು.
Youtube Video
ನಿಯಮಾವಳಿ ಪ್ರಕಾರ, ಹಾಲಿ ಸಿಜೆಐ ಅವರು ನಿವೃತ್ತರಾಗುವ ಮುನ್ನ ಕಾನೂನು ಸಚಿವರು ಮುಂದಿನ ಸಿಜೆಐ ಸ್ಥಾನಕ್ಕೆ ಹೆಸರನ್ನು ಸೂಚಿಸುವಂತೆ ಕೇಳಿಕೊಳ್ಳುತ್ತಾರೆ. ಸಿಜೆಐ ಶಿಫಾರಸು ಬಂದ ನಂತರ ಕಾನೂನು ಸಚಿವರು ಅದನ್ನು ಪ್ರಧಾನಿಗಳ ಗಮನಕ್ಕೆ ತರುತ್ತಾರೆ. ನಂತರ ಪ್ರಧಾನಿಗಳು ಆ ವಿಚಾರದಲ್ಲಿ ರಾಷ್ಟ್ರಪತಿಗಳಿಗೆ ಸಲಹೆ ನೀಡುತ್ತಾರೆ. ಆ ಸಲಹೆಯೇ ಬಹುತೇಕ ಅಂತಿಮವಾಗಿರುತ್ತದೆ. ಪ್ರಧಾನಿಗಳ ಸಲಹೆಯಂತೆ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮಾಡಿ ಆದೇಶ ಹೊರಡಿಸುತ್ತಾರೆ. ಅದರಂತೆ ಇದೀಗ ಈ ಮೊದಲೇ ಸೂಚಿಸಿದ್ದ ನ್ಯಾ.ಎನ್​.ವಿ. ರಮಣ ಅವರನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.
Published by: HR Ramesh
First published: April 24, 2021, 12:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories