ಎಐಸಿಸಿ ಅಧ್ಯಕ್ಷ ಸ್ಥಾನದಿಂದ ರಾಹುಲ್ಗಾಂಧಿ ಹಿಂದೆ ಸರಿದ ನಂತರ ಅನಿವಾರ್ಯವಾಗಿ ಸೋನಿಯಾ ಗಾಂಧಿ ಅವರೇ ಕಾಂಗ್ರೆಸ್ ಚುಕ್ಕಾಣಿ ಹಿಡಿಯಬೇಕಾಯಿತು. ಶೀಘ್ರವೇ ಹೊಸ ನಾಯಕತ್ವ ಬೇಕು ಎಂಬ ಕೂಗು ಕೈ ಪಾಳಯದಲ್ಲೇ ಕೇಳಿ ಬಂದಿತ್ತು. ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ 2 ದಿನಗಳ ಹಿಂದೆಯಷ್ಟೇ ರಾಹುಲ್ ಗಾಂಧಿನ ಭೇಟಿ ಮಾಡಿ ಚರ್ಚಿಸಿದ್ದರು. ಈ ವೇಳೆ ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು ಮಾತ್ರವಲ್ಲದೆ ಕಾಂಗ್ರೆಸ್ ನಾಯಕತ್ವದ ಬಗ್ಗೆಯೂ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಇಂದು ಹಿರಿಯ ಕಾಂಗ್ರೆಸ್ ಮುಖಂಡ, ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ನಾಥ್ ಅವರು ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ಕಮಲ್ನಾಥ್-ಸೋನಿಯಾ ಭೇಟಿ ಹಲವು ರಾಜಕೀಯ ಲೆಕ್ಕಾಚಾರಗಳಿಗೆ ನಾಂದಿ ಹಾಡಿದೆ. ಕಮಲ್ನಾಥ್ ಅವರಿಗೆ ಎಐಸಿಸಿ ಅಧ್ಯಕ್ಷ ಪಟ್ಟ ಕಟ್ಟಲಿದ್ದಾರೆ ಎಂಬ ಮಾತು ಪ್ರಬಲವಾಗಿ ಕೇಳಿ ಬರುತ್ತಿದೆ. ಕಾಂಗ್ರೆಸ್ನಲ್ಲಿ ಬದಲಾವಣೆ ತರುವ ವಿಚಾರವಾಗಿ ಕಮಲ್ನಾಥ್-ಸೋನಿಯಾ ಚರ್ಚೆ ನಡೆಸಿದ್ದಾರೆ ಎನ್ನುತ್ತಿದೆ ಮೂಲಗಳು. ಹೀಗಾಗಲೇ ಎಐಸಿಸಿ ಅಧ್ಯಕ್ಷ ಆಯ್ಕೆ ಪ್ರಕ್ರಿಯೆ ತಡವಾಗಿದ್ದು, ಮಳೆಗಾಲದ ಅಧಿವೇಶದ ನಂತರ ಪಕ್ಷಕ್ಕೆ ಹೊಸ ಸಾರಥಿಯನ್ನು ನೇಮಿಸಲು ಗಾಂಧಿ ಕುಟುಂಬ ಮುಂದಾಗಿದೆ ಎನ್ನಲಾಗುತ್ತಿದೆ.
ಇನ್ನು 74 ವರ್ಷದ ಕಮಲ್ನಾಥ್ ಅವರು ಗಾಂಧಿ ಕುಟುಂಬದ ಆಪ್ತರು, ನಿಷ್ಠರಲ್ಲಿ ಒಬ್ಬರು. ಬರೋಬ್ಬರಿ 9 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವವು ಇದೆ. 1980ರಲ್ಲಿ ಮೊದಲ ಬಾರಿ ಸಂದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್ ಅಧ್ಯಕ್ಷ ಆಯ್ಕೆ ವಿಚಾರವನ್ನು ಕೊರೊನಾ ಕಾರಣದಿಂದ 3 ಬಾರಿ ಮುಂದೂಡಲಾಗಿದೆ. ಈಗ ಆಯ್ಕೆ ಮಾಡಬೇಕಾದ ಒತ್ತಡದಲ್ಲಿದ್ದಾರೆ ಸೋನಿಯಾ ಗಾಂಧಿ.
ಇದನ್ನೂ ಓದಿ: ನಾನು ರಾಷ್ಟ್ರಪತಿ ಚುನಾವಣೆಗೆ ನಿಲ್ಲುವುದಿಲ್ಲ, ಎಲ್ಲಾ ಊಹಾಪೋಹಗಳು ಸುಳ್ಳು: ಎನ್ಸಿಪಿ ನಾಯಕ ಶರದ್ ಪವಾರ್
ಸೋನಿಯಾ ನಂತರ 2017ರಲ್ಲಿ ಎಐಸಿಸಿ ಗದ್ದುಗೆಯೇರಿದ್ದ ರಾಹುಲ್ ಗಾಂಧಿ 2019ರ ಲೋಕಸಭಾ ಚುನಾವಣೆ ಸೋಲಿನ ಬಳಿಕ ಕೆಳಗಿಳಿದಿದ್ದರು. ಅಂದಿನಿಂದ ಮತ್ತೆ ಸೋನಿಯಾ ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನದಲ್ಲಿ ಮುಂದುವರೆಯುವಂತಾಯಿತು. 2020ರ ಆಗಸ್ಟ್ನಲ್ಲಿ ಕಾಂಗ್ರೆಸ್ನ 23 ಮುಖಂಡರು ನಾಯಕತ್ವ ಬದಲಾವಣೆ, ಆಯ್ಕೆ ಕುರಿತು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಇನ್ನು ಎಐಸಿಸಿ ಅಧ್ಯಕ್ಷರ ರೇಸ್ನಲ್ಲಿ ಪ್ರಿಯಾಂಕ ಗಾಂಧಿ, ಶಶಿ ತರೂರ್ ಹೆಸರುಗಳು ಸಹ ಕೇಳಿ ಬಂದಿತ್ತು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ