Kangana Ranaut| 'ಒಂದು ಜಿಲ್ಲೆ, ಒಂದು ಉತ್ಪನ್ನ' ಉತ್ತರಪ್ರದೇಶ ಕಾರ್ಯಕ್ರಮಕ್ಕೆ ನಟಿ ಕಂಗಾನ ರಾಯಭಾರಿ
ರಾಜ್ಯದ 75 ಜಿಲ್ಲೆಗಳಾದ್ಯಂತ ನಿರ್ದಿಷ್ಟ-ಉತ್ಪನ್ನ, ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ಒಂದು ಜಿಲ್ಲೆ-ಒಂದು ಉತ್ಪನ್ನ (ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.
ಸದಾ ಒಂದಿಲ್ಲೊಂದು ವಿವಾದಾತ್ಮ ಹೇಳಿಕೆ ನೀಡುವ, ಬಿಜೆಪಿ ಹಾಗೂ ಸಂಘಪರಿವಾರದ ಜೊತೆ ಗುರುತಿಸಿಕೊಂಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರನ್ನು ಉತ್ತರ ಪ್ರದೇಶ (UttaraPradesh) ಸರ್ಕಾರ ಕಾರ್ಯಕ್ರಮವೊಂದಕ್ಕೆ ರಾಯಭಾರಿಯನ್ನಾಗಿ ನೇಮಿಸಿಕೊಂಡಿದೆ. ಉತ್ತರ ಪ್ರದೇಶ ಸರ್ಕಾರ ಜಾರಿಗೆ ತರಲು ಮುಂದಾಗಿರುವ ‘ಒಂದು ಜಿಲ್ಲೆ-ಒಂದು ಉತ್ಪನ್ನ’ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಕಂಗನಾ ರಣಾವತ್ ಅವರನ್ನು ಶುಕ್ರವಾರ ನೇಮಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ನಟಿ ಕಂಗನಾ ರಣಾವತ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಕಂಗನಾ ಅವರನ್ನು ಬ್ರಾಂಡ್ ಅಂಬಾಸಿಡರ್ ಅಗಿ ಸರ್ಕಾರ ನೇಮಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.
ರಾಜ್ಯದ 75 ಜಿಲ್ಲೆಗಳಾದ್ಯಂತ ನಿರ್ದಿಷ್ಟ-ಉತ್ಪನ್ನ, ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ಒಂದು ಜಿಲ್ಲೆ-ಒಂದು ಉತ್ಪನ್ನ (ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.
"ನಟಿ ಕಂಗನಾ ರಣಾವತ್ ಅವರನ್ನು ಯುಪಿ ಸಿಎಂ ಭೇಟಿ ಮಾಡಿ, ಅವರಿಗೆ ಓಡಿಒಪಿ ಉತ್ಪನ್ನವನ್ನು ನೀಡಿದ್ದಾರೆ. ಕಂಗನಾ ಅವರು ಒಡಿಒಪಿಗೆ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ" ಎಂದು ಮಾಹಿತಿ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಟ್ವೀಟ್ ಮಾಡಿದ್ದಾರೆ.
ಹಿರಿಯ ಅಧಿಕಾರಿಯ ಪ್ರಕಾರ, ಸಿಎಂ ಜೊತೆಗಿನ ಸಭೆಯಲ್ಲಿ ಕಂಗನಾ ಅವರು ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಮಾಡುತ್ತಿರುವ ಕೆಲಸಗಳನ್ನು ಶ್ಲಾಘಿಸಿದ್ದಾರೆ. ಕಂಗನಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ