• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಸಮಾಜದಲ್ಲಿ ಕೋಮುದ್ವೇಷ ಹರಡಿದ ಪ್ರಕರಣ; ಎಫ್​ಐಆರ್​ ರದ್ಧತಿ ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ಕಂಗನಾ

ಸಮಾಜದಲ್ಲಿ ಕೋಮುದ್ವೇಷ ಹರಡಿದ ಪ್ರಕರಣ; ಎಫ್​ಐಆರ್​ ರದ್ಧತಿ ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ಕಂಗನಾ

ಕಂಗನಾ-ರಂಗೋಲಿ

ಕಂಗನಾ-ರಂಗೋಲಿ

ಎಫ್ಐಆರ್ ಮತ್ತು ಮ್ಯಾಜಿಸ್ಟ್ರೇಟ್ ನೀಡಿರುವ ಈ ಆದೇಶವನ್ನು ರದ್ದುಗೊಳಿಸುವಂತೆ ಕಂಗನಾ ರಣಾವತ್ ಮತ್ತು ರಂಗೋಲಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ವಕೀಲ ರಿಜ್ವಾನ್ ಸಿದ್ದಿಕಿ ಪಿಟಿಐಗೆ ತಿಳಿಸಿದ್ದಾರೆ.

  • Share this:

    ಮುಂಬೈ (ನವೆಂಬರ್​ 23); ಸಮಾಜದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಕೋಮುದ್ವೇಷ ಹರಡುತ್ತಿದ್ದಾರೆ ಎಂದು ಮುಂಬೈ ಪೊಲೀಸರು ಈ ಹಿಂದೆ ಬಾಲಿವುಡ್​ ನಟಿ ಕಂಗನಾ ರಣಾವತ್​​ ಮತ್ತು ಆಕೆಯ ಸಹೋದರಿ ರಂಗೋಲಿ ವಿರುದ್ಧ ಎಫ್​ಐಆರ್​ ದಾಖಲಿಸಿದ್ದರು. ಬಾಂದ್ರಾ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಸಹ ಪೊಲೀಸರು ದಾಖಲಿಸಿರುವ ಈ ಎಫ್​ಐಆರ್​ ಅನ್ನು ಕಾನೂನಾತ್ಮಕವಾಗಿಯೇ ಇದೆ ಎಂದು ತೀರ್ಪು ನೀಡಿತ್ತು. ಆದರೆ, ಇದೀಗ ನಟಿ ಕಂಗನಾ ರಣಾವತ್​ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ತಮ್ಮ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ಇಂದು ಬಾಂಬೆ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ. 


    ನಟಿ ಕಂಗನಾ ರಣಾವತ್​ ಕಳೆದ ತಿಂಗಳು ಕೋಮುವಾದಿ ಮನಸ್ಥಿತಿಯ ಟ್ವೀಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದರು. ಹೀಗಾಗಿ ಇವರು ವಿರುದ್ಧಸಯ್ಯದ್​ ಎಂಬುವವರು, "ಕಂಗನಾ ತಮ್ಮ ಆಕ್ಷೇಪಾರ್ಹ ಪೋಸ್ಟ್​ಗಳು ಮತ್ತು ಕಮೆಂಟ್​ಗಳ ಮೂಲಕ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಕಲಾವಿದರ ನಡುವೆ ವಿಭಜನೆಯನ್ನು ಸೃಷ್ಟಿಸುತ್ತಿದ್ದಾರೆ" ಎಂದು ಆರೋಪಿಸಿ ದೂರು ನೀಡಿದ್ದರು.


    ಈ ದೂರನ್ನು ಗಂಭೀರವಾಗಿ ಪರಿಗಣಿಸಿದ್ದ ಮುಂಬೈ ಪೊಲೀಸರು ನಟಿ ಕಂಗನಾ ರಣಾವತ್​ ಮತ್ತು ಅವರ ಸಹೋದರಿ ಮೇಲೆ ದೇಶದ್ರೋಹ ಆರೋಪದಡಿ ಎಫ್‌ಐಆರ್ ದಾಖಲಿಸಲಿಸಿದ್ದರು. ಇವರ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವಂತೆ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಹ ಪೊಲೀಸರಿಗೆ ನಿರ್ದೇಶನ ನೀಡಿತ್ತು.


    ಹೀಗಾಗಿ "ಈ ಎಫ್ಐಆರ್ ಮತ್ತು ಮ್ಯಾಜಿಸ್ಟ್ರೇಟ್ ನೀಡಿರುವ ಈ ಆದೇಶವನ್ನು ರದ್ದುಗೊಳಿಸುವಂತೆ ಕಂಗನಾ ರಣಾವತ್ ಮತ್ತು ರಂಗೋಲಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ" ಎಂದು ಅವರ ವಕೀಲ ರಿಜ್ವಾನ್ ಸಿದ್ದಿಕಿ ಪಿಟಿಐಗೆ ತಿಳಿಸಿದ್ದಾರೆ.


    ಇದನ್ನೂ ಓದಿ : ಕಾಂಗ್ರೆಸ್​ಗೆ​ ಬೆನ್ನು ತೋರಿಸಿದ ಮತ್ತೋರ್ವ ನಟಿ; ಖುಷ್ಬೂ ಆಯ್ತು ಇದೀಗ ಬಿಜೆಪಿ ಪಾಲಾಗಲಿದ್ದಾರೆ ವಿಜಯಶಾಂತಿ


    ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ನವೆಂಬರ್ 23 ಮತ್ತು 24 ರಂದು ಪೊಲೀಸರ ಮುಂದೆ ಹಾಜರಾಗುವಂತೆ ಕಂಗನಾ ರಣಾವತ್ ಅವರಿಗೆ ಕಳೆದ ವಾರವೇ ನೋಟಿಸ್ ನೀಡಲಾಗಿತ್ತು.


    ನ್ಯಾಯಾಲಯದ ನಿರ್ದೇಶನದ ಮೇರೆಗೆ, ಬಾಂದ್ರಾ ಪೊಲೀಸರು ರಣಾವತ್ ಮತ್ತು ಆಕೆಯ ಸಹೋದರಿಯ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಕೃತ್ಯಗಳು) ಮತ್ತು 124 (ದೇಶದ್ರೋಹ), 34ರ (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು