ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; ಪೊಲೀಸ್ ಎನ್​ಕೌಂಟರ್​ಗೆ ಇಬ್ಬರು ಉಗ್ರರು ಬಲಿ

ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ದಿಢೀರ್ ಗುಂಡಿನ ದಾಳಿ ನಡೆಸಿದ್ದರಿಂದ ಎನ್​ಕೌಂಟರ್ ಮೂಲಕ ಇಬ್ಬರನ್ನು ಹತ್ಯೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಶ್ರೀನಗರ (ಏ. 4): ಜಮ್ಮು ಮತ್ತು ಕಾಶ್ಮೀರದ ಕುಲಗಾಂ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಯ ಸಿಬ್ಬಂದಿ ನಡೆಸಿದ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.

ಇಂದು ಮುಂಜಾನೆ ಜಮ್ಮುವಿನ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಕುಲಗಾಂನಲ್ಲಿ ಉಗ್ರರನ್ನು ಸೆರೆಹಿಡಿಯಲು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಉಗ್ರರು ದಿಢೀರ್ ಗುಂಡಿನ ದಾಳಿ ನಡೆಸಿದ್ದರಿಂದ ಎನ್​ಕೌಂಟರ್ ಮೂಲಕ ಕುಲಾಂನ ಹರ್ದಮಂಡ್ ಗುರಿ ಎಂಬ ಗ್ರಾಮದಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.ಇದನ್ನೂ ಓದಿ: ಕೊರೋನಾದಿಂದ ಅಮೆರಿಕದಲ್ಲಿ 24 ಗಂಟೆಯಲ್ಲಿ 1,480 ಸಾವು!; ವಿಶ್ವಾದ್ಯಂತ ಸಾವಿನ ಸಂಖ್ಯೆ 59,160ಕ್ಕೆ ಏರಿಕೆ

ಕಾರ್ಡಾನ್​ನಲ್ಲಿ ಮೂವರು ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಸಿಕ್ಕಿತ್ತು. ಅದೇ ಮೂವರು ಇತ್ತೀಚೆಗೆ ಕುಲಗಾಂನಲ್ಲಿ ವಾಸವಾಗಿದ್ದ ಮೂವರನ್ನು ಹತ್ಯೆ ಮಾಡಿದ್ದರು. ಆ ಮೂವರನ್ನು ಹಿಡಿಯಲು ಕಾರ್ಯಾಚರಣೆ ನಡೆಸಿದಾಗ ಇಬ್ಬರನ್ನು ಎನ್​ಕೌಂಟರ್ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರದ ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ.
First published: