KSRTC Bus Accident: ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ಬಸ್-ಲಾರಿ ನಡುವೆ ಡಿಕ್ಕಿ; 20 ಸಾವು

ಅಪಘಾತಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಲಾರಿ ಹಾಗೂ ಬಸ್​ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಂತರ ಕೆಲ ಕಾಲ ಈ ಭಾಗದಲ್ಲಿ ಸಂಚಾರಕ್ಕೆ ತೊಡಕು ಉಂಟಾಗಿತ್ತು. 

Rajesh Duggumane | news18-kannada
Updated:February 20, 2020, 8:30 AM IST
KSRTC Bus Accident: ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ಬಸ್-ಲಾರಿ ನಡುವೆ ಡಿಕ್ಕಿ; 20 ಸಾವು
ಅಫಘಾತಕ್ಕೆ ತುತ್ತಾದ ಬಸ್​
  • Share this:
ಬೆಂಗಳೂರು (ಫೆ.20): ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ಸಂಭವಿಸಿದ  ಎರಡು ಪ್ರತ್ಯೇಕ ಅಪಘಾತದಲ್ಲಿ ಒಟ್ಟು 26 ಜನರು ಮೃತಪಟ್ಟಿದ್ದಾರೆ. ಸಾಕಷ್ಟು ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೊಯಿಮತ್ತೂರಿನಲ್ಲಿ ಕೇರಳ ರಾಜ್ಯ ಸಾರಿಗೆ ಸಂಸ್ಥೆಗೆ (KSRTC ) ಸೇರಿದ ಬಸ್​ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 20 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಸ್ಸು ಬೆಂಗಳೂರಿನೊಂದ ಕೊಚ್ಚಿಗೆ ಹೊರಟಿತ್ತು. ಈ ವೇಳೆ ಬಸ್​ ಅಪಘಾತಕ್ಕೆ ತುತ್ತಾಗಿದೆ. ಸಾಕಷ್ಟು ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುವ ಭೀತಿ ಕಾಡಿದೆ.

ಇನ್ನು, ಅಪಘಾತಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಲಾರಿ ಹಾಗೂ ಬಸ್​ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಂತರ ಕೆಲ ಕಾಲ ಈ ಭಾಗದಲ್ಲಿ ಸಂಚಾರಕ್ಕೆ ತೊಡಕು ಉಂಟಾಗಿತ್ತು.

ಮತ್ತೊಂದು ಅಪಘಾತ:

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಚಂದ್ರಾಪುರ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಟ್ರಕ್​ಗೆ ಕಾರು ಡಿಕ್ಕಿ ಹೊಡೆದಿದ್ದು, 6 ಜನರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಬಳಿ ಘಟನೆ ನಡೆದಿದೆ. 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಇಂದು ಸಾರಿಗೆ ನೌಕರರ ಮುಷ್ಕರ; ಕೆಎಸ್ಆರ್​ಟಿಸಿ, ಬಿಎಂಟಿಸಿ ಬಸ್​ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
First published: February 20, 2020, 8:11 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading