ದೆಹಲಿ ಹಿಂಸಾಚಾರ; ಸಾವಿನ ಸಂಖ್ಯೆ 38ಕ್ಕೆ ಏರಿಕೆ; ವಿಚಾರಣೆಗಾಗಿ 514 ಜನ ಪೊಲೀಸ್ ವಶಕ್ಕೆ

Delhi Violence: ದೆಹಲಿ ಹಿಂಸಾಚಾರದಲ್ಲಿ ಇಬ್ಬರು ಸೆಕ್ಯುರಿಟಿ ಸಿಬ್ಬಂದಿ ಸೇರಿ ಒಟ್ಟು 38 ಜನರು ಸಾವನ್ನಪ್ಪಿದ್ದಾರೆ. 70ಕ್ಕೂ ಹೆಚ್ಚು ಪೊಲೀಸರಿಗೆ ಗಂಭೀರ ಗಾಯಗಳಾಗಿವೆ.

ದೆಹಲಿಯ ಪೊಲೀಸ್ ಭದ್ರತೆ

ದೆಹಲಿಯ ಪೊಲೀಸ್ ಭದ್ರತೆ

  • Share this:
ನವದೆಹಲಿ (ಫೆ. 28): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ಮತ್ತು ಎನ್​​ಆರ್​​ಸಿ ವಿರೋಧಿ ಪ್ರತಿಭಟನೆಯಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಿಂಸಾಚಾರಕ್ಕೆ ತಿರುಗಿರುವ ಪ್ರತಿಭಟನೆಯಿಂದಾಗಿ ದೆಹಲಿಯ ಜನರು ಮನೆಯಿಂದ ಹೊರಗೆ ಬರಲು ಹೆದರುವಂತಾಗಿದೆ. ಈ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಸುಮಾರು 514 ಜನರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ ದೆಹಲಿ ಪ್ರತಿಭಟನಾ ಸ್ಥಳದಲ್ಲಿ ಯಾವುದೇ ಪ್ರಮುಖ ಘಟನೆಗಳು ನಡೆದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಕಳೆದ 36 ಗಂಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಗೃಹ ಸಚಿವಾಲಯ ನಿನ್ನೆ ರಾತ್ರಿ ಪ್ರಕಟಣೆ ನೀಡಿದೆ. ಈ ದುರ್ಘಟನೆಯಲ್ಲಿ 514 ಸಂಶಯಾಸ್ಪದರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಸಾಫ್ಟ್​ವೇರ್​ ಕಂಪನಿ ಹೆಸರಲ್ಲಿ ಬೆಂಗಳೂರಿನ 45 ಬ್ಯಾಂಕ್​ಗೆ ವಂಚನೆ; ಈ ಖತರ್ನಾಕ್​ ಗ್ಯಾಂಗ್ ಮಾಡಿದ್ದೇನು ಗೊತ್ತಾ?ಫೆ. 24ರಿಂದ ಸುಮಾರು 7,000 ಪ್ಯಾರಾಮಿಲಿಟರಿ ಸಿಬ್ಬಂದಿಯನ್ನು ದೆಹಲಿಯಲ್ಲಿ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ದೆಹಲಿ ಪೊಲೀಸ್ ಇಲಾಖೆ ಹೆಚ್ಚುವರಿಯಾಗಿ ವಿಶೇಷ ಪೊಲೀಸ್ ತಂಡಗಳನ್ನು ನಿಯೋಜನೆ ಮಾಡಿದೆ. ದೆಹಲಿ ಹಿಂಸಾಚಾರದಲ್ಲಿ ಇಬ್ಬರು ಸೆಕ್ಯುರಿಟಿ ಸಿಬ್ಬಂದಿ ಸೇರಿ ಒಟ್ಟು 38 ಜನರು ಸಾವನ್ನಪ್ಪಿದ್ದಾರೆ. 70ಕ್ಕೂ ಹೆಚ್ಚು ಪೊಲೀಸರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರವನ್ನು ಕಾಂಗ್ರೆಸ್​, ಆಪ್​ ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ; ಕೇಂದ್ರ ಸಚಿವ ಜಾವಡೇಕರ್​ ವಾಗ್ದಾಳಿ

ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ, ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಮೃತಪಟ್ಟ ಪೊಲೀಸ್​​ ಕಾನ್ಸ್​​ಟೇಬಲ್​​ ಕುಟುಂಬಕ್ಕೆ ಕೂಡ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಘೋಷಿಸಿದ್ದಾರೆ.
First published: