ನವದೆಹಲಿ (ಮಾ. 13): ನಿರ್ಭಯಾ ಅತ್ಯಾಚಾರ ಪ್ರಕರಣದ ಬಳಿಕ ಉನ್ನಾವೋ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಕೇಸಿನ ಪ್ರಮುಖ ಆರೋಪಿಯಾಗಿದ್ದ ಉತ್ತರ ಪ್ರದೇಶದ ಉಚ್ಛಾಟಿತ ಬಿಜೆಪಿಯ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಉತ್ತರ ಪ್ರದೇಶದ ಉನ್ನಾವೋದಲ್ಲಿ 2017ರಲ್ಲಿ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗಾರ್ಗೆ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಕುಲದೀಪ್ ಸಿಂಗ್ ಸೆಂಗಾರ್ ಅವರ ಉತ್ತರ ಪ್ರದೇಶದ ವಿಧಾನಸಭಾ ಸದಸ್ಯತ್ವವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿತ್ತು.
ಇದನ್ನೂ ಓದಿ: ಉನ್ನಾವೋ ಅತ್ಯಾಚಾರ ಪ್ರಕರಣ; ಜೀವಾವಧಿ ಶಿಕ್ಷೆ ಬೆನ್ನಲ್ಲೇ ಕುಲದೀಪ್ ಶಾಸಕತ್ವ ಅಧಿಕೃತವಾಗಿ ರದ್ದು
ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪ್ಪನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪವನ್ನೂ ಎದುರಿಸುತ್ತಿದ್ದ
ಕುಲದೀಪ್ ಸಿಂಗ್ ಸೆಂಗಾರ್ಗೆ ಇದೀಗ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ಉತ್ತರ ಪ್ರದೇಶದ ಬಂಗೆರ್ಮಾವ್ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ 4 ಬಾರಿ ಶಾಸಕರಾಗಿರುವ ಕುಲದೀಪ್ ಸೆಂಗಾರ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದ್ದರಿಂದ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿತ್ತು.
ಇದನ್ನೂ ಓದಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಹೆಂಡತಿಗೂ ಕೊರೋನಾ ಸೋಂಕು; ವಿಶ್ವಾದ್ಯಂತ 4,900 ಬಲಿ
ಏನಿದು ಪ್ರಕರಣ?:
ಉತ್ತರ ಪ್ರದೇಶದ
ಉನ್ನಾವೋದ ಅಪ್ರಾಪ್ತ ಯುವತಿಯನ್ನು ಅಪಹರಿಸಿ, ಜೂನ್ 4 2017ರಲ್ಲಿ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಜೊತೆಗೆ ಇನ್ನೂ ನಾಲ್ವರ ಹೆಸರು ಕೇಳಿಬಂದಿತ್ತು. ಆ ಯುವತಿ ಸಿಎಂ ಯೋಗಿ ಆದಿತ್ಯನಾಥ್ ಅವರ ಮನೆಯ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ನಂತರ ಈ ಪ್ರಕರಣದ ಕಾವು ಹೆಚ್ಚಾಗಿತ್ತು. ಆದರೆ, ಈ ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು. 2018ರ ಏಪ್ರಿಲ್ 9ರಂದು ಯುವತಿಯ ಅಪ್ಪನನ್ನು ಕೊಲೆ ಮಾಡಲಾಗಿತ್ತು.
ಇದನ್ನೂ ಓದಿ: ಮ್ಯಾಟ್ರಿಮೊನಿ ವಂಚನೆ; ಮದುವೆಗೆ ವರನನ್ನು ಹುಡುಕಲು ಹೋದ ವೈದ್ಯೆಗೆ 12 ಲಕ್ಷ ರೂ. ಪಂಗನಾಮ!
2018ರಿಂದಲೂ ಸಿಬಿಐ ಈ ಪ್ರಕರಣದ ತನಿಖೆ ನಡೆಸಿತ್ತು. ಆದರೆ, ರೇಪ್ ಸಂತ್ರಸ್ತೆಯ ಕುಟುಂಬದವರನ್ನು ನಾಶ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿತು. ಸಂತ್ರಸ್ತೆ ಮತ್ತಾಕೆಯ ಕುಟುಂಬ ಸದಸ್ಯರನ್ನು ವಾಯುಮಾರ್ಗದ ಮೂಲಕ ಉತ್ತರ ಪ್ರದೇಶದಿಂದ ಹೊರಗೆ ಕರೆ ತರಬೇಕೆಂದು ಸುಪ್ರೀಂ ಕೋರ್ಟ್ ಹೇಳಿತು. ನಂತರ ಈ ಪ್ರಕರಣದ ತನಿಖೆ ನಡೆಸಿದ್ದ ದೆಹಲಿ ಹೈಕೋರ್ಟ್ ಕುಲದೀಪ್ ಸಿಂಗ್ ಸೆಂಗಾರ್ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ