• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Kanpur Accident: ಕಾನ್ಪುರದ ರಸ್ತೆ ಅಪಘಾತದಲ್ಲಿ 17 ಜನ ಸಾವು; ಪ್ರಧಾನಿ ಮೋದಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

Kanpur Accident: ಕಾನ್ಪುರದ ರಸ್ತೆ ಅಪಘಾತದಲ್ಲಿ 17 ಜನ ಸಾವು; ಪ್ರಧಾನಿ ಮೋದಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಕಾನ್ಪುರ ರಸ್ತೆ ಅಪಘಾತದ ದೃಶ್ಯ

ಕಾನ್ಪುರ ರಸ್ತೆ ಅಪಘಾತದ ದೃಶ್ಯ

Kanpur Road Accident | ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಂಗಳವಾರ ರಾತ್ರಿ ಆಟೋ ಮತ್ತು ಎಸಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದಾರೆ.

  • Share this:

ಕಾನ್ಪುರ (ಜೂನ್ 9): ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿನ್ನೆ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಕಾನ್ಪುರದ ಸಚೇಂದಿ ಪ್ರದೇಶದಲ್ಲಿ ಬಸ್ ಮತ್ತು ಆಟೋ ಢಿಕ್ಕಿ ಹೊಡೆದ ಪರಿಣಾಮ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 4 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ದುರಂತದ ಬಗ್ಗೆ ತನಿಖೆ ನಡೆಸಿ, ವರದಿ ನೀಡುವಂತೆ ಉತ್ತರ ಪ್ರದೇಶ ಆದೇಶ ನೀಡಿದೆ.


ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಂಗಳವಾರ ರಾತ್ರಿ ಆಟೋ ಮತ್ತು ಎಸಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದಾರೆ. 4 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅಪಘಾತದಲ್ಲಿ ಗಾಯಗೊಂಡವರನ್ನು ಲಾಲಾ ಲಜಪತ್​ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. 4 ಗಾಯಾಳುಗಳಲ್ಲಿ ಬಹುತೇಕ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.ಕಾನ್ಪುರದ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಹಾಗೇ, ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನೂ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


I express my condolences to the families of those who lost their lives in the painful road accident in Kanpur. May God give them the strength to bear this grief! I wish the injured a speedy recovery: Union Home Minister Amit Shahಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಸೇರಿದಂತೆ ಅನೇಕರು ಈ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 17 ಜನರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಿಸಿದ್ದಾರೆ.


ಲಕ್ನೋದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಎಸಿ ಬಸ್ ಕಾನ್ಪುರದ ಉಪನಗರ ಸಚೇಂದಿಯಲ್ಲಿ ಆಟೋಗೆ ಢಿಕ್ಕಿ ಹೊಡೆದಿದೆ. ಬಸ್ ಮತ್ತು ಆಟೋಗಳು ಕೆಳಗೆ ಉರುಳಿ ಬಿದ್ದ ಪರಿಣಾಮ 17 ಜನರು ಸಾವನ್ನಪ್ಪಿದ್ದಾರೆ.

Published by:Sushma Chakre
First published: