ಶಿವಮೊಗ್ಗ: ಕರ್ನಾಟಕದಲ್ಲಿ ಚುನಾವಣಾ ರಣಕಣ ರಂಗೇರಿದೆ. ದಿನದಿಂದ ದಿನಕ್ಕೆ ರಾಜಕೀಯ ಪಕ್ಷಗಳ (Karnataka Assembly Election 2023) ಪ್ರಚಾರ ಕಾರ್ಯ ಮೆರುಗು ಪಡೆಯುತ್ತಿದೆ. ಮತದಾರರನ್ನು ಒಲಿಸಲು ಆಭ್ಯರ್ಥಿಗಳು ಮಾಡುತ್ತಿರುವ ಕಸರತ್ತು ಒಂದಕ್ಕಿಂತ ಒಂದು ಭಿನ್ನವಾಗಿದೆ. ಈ ಮಧ್ಯೆ ರಾಜ್ಯ ಬಿಜೆಪಿಯ (BJP) ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಯಕರ್ತರೊಂದಿಗೆ ಸಂವಾದ ನಡೆಸುತ್ತಿದ್ದಾರೆ.
ಆನ್‌ಲೈನ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 50 ಲಕ್ಷಕ್ಕೂ ಹೆಚ್ಚು ರಾಜ್ಯದ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸುತ್ತಿದ್ದು, ಬೆಳಗ್ಗೆ 9.45ಕ್ಕೆಆರಂಭವಾದ ಈ ವರ್ಚುವಲ್ ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್, ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಕುಮಾರ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ.
ಇದನ್ನೂ ಓದಿ: Sudan Crisis: ಸುಡಾನ್‌ನಿಂದ ತಾಯ್ನೆಲಕ್ಕೆ ತಲುಪಿದ 360 ಭಾರತೀಯರು; ಮುಂದುವರಿದ ‘ಆಪರೇಷನ್ ಕಾವೇರಿ’ ಕಾರ್ಯ
ಶಿವಮೊಗ್ಗದಲ್ಲಿ ತಯಾರಿ!
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಲಿರುವ ಕಾರ್ಯಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಶಿವಮೊಗ್ಗದಲ್ಲೂ ತಯಾರಿ ನಡೆಸಲಾಗಿದ್ದು, ಶಿವಮೊಗ್ಗದ ಗೊಂಧಿ ಚಟ್ನಹಳ್ಳಿಯ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಭಾಗದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಸಂವಾದ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ ಸಂಸದ ಬಿವೈ ರಾಘವೇಂದ್ರ ಅವರು ಭಾಗಿಯಾಗಲಿದ್ದಾರೆ.
ಇನ್ನು ಪ್ರಧಾನಿ ಮೋದಿ ಅವರ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರು ಭಾಗಿಯಾದರೆ, ಆ ಪೈಕಿ 24 ಲಕ್ಷ ಕಾರ್ಯಕರ್ತರು 'ನಮೋ ಆ್ಯಪ್' ಡೌನ್'ಲೋಡ್ ಮಾಡಿಕೊಂಡು ಅದರ ಮೂಲಕ ಕಾರ್ಯಕ್ರಮ ನೋಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತರಿಗಾಗಿ ನರೇಂದ್ರ ಮೋದಿಯವರು ಸ್ಪೂರ್ತಿಯುತ ಮಾತುಗಳನ್ನು ಆಡಲಿದ್ದು, ರಾಜ್ಯ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.
ಇದನ್ನೂ ಓದಿ: Karnataka Election 2023: ಈ ಬಾರಿ ಬಿಜೆಪಿ 150 ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೆ: ನಳಿನ್ ಕುಮಾರ್ ಕಟೀಲ್
ಮೋದಿಯನ್ನು ಸ್ವಾಗತಿಸಿದ ಕಟೀಲ್
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಕಾರ್ಯಕರ್ತರ ಜೊತೆ ನಡೆಸುವ ಸಂವಾದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗಿಯಾದರು. ಈ ವೇಳೆ ಮೋದಿ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿದರು.
ಈ ಸಂವಾದದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿನಿಂದ ಭಾಗಿಯಾದರೆ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಗೋವಿಂದ ಕಾರಜೋಳ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದಂತೆ ಇನ್ನಿತರರು ರಾಜ್ಯದ ವಿವಿಧ ಭಾಗಗಳಿಂದ ಭಾಗಿಯಾದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ