• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Karnataka New CM: ಸಿದ್ದರಾಮಯ್ಯ ನೂತನ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ: ಕಾಂಗ್ರೆಸ್‌ನಿಂದ ಅಧಿಕೃತ ಘೋಷಣೆ

Karnataka New CM: ಸಿದ್ದರಾಮಯ್ಯ ನೂತನ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ: ಕಾಂಗ್ರೆಸ್‌ನಿಂದ ಅಧಿಕೃತ ಘೋಷಣೆ

ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ.

  • News18 Kannada
  • 5-MIN READ
  • Last Updated :
  • Delhi, India
  • Share this:

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರ ವಹಿಸಲಿದ್ದಾರೆ ಎಂದು ಕಾಂಗ್ರೆಸ್‌ (AICC) ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ. ಇಂದು ದೆಹಲಿಯಲ್ಲಿ ನಡೆದ ಎಐಸಿಸಿ ನಾಯಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆಸಿ ವೇಣುಗೋಪಾಲ್ (KC Venugopal) ಮುಂದಿನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಹೆಸರನ್ನು ಘೋಷಿಸಿದರು.


ಇದನ್ನೂ ಓದಿ: Karnataka DCM: ಡಿಸಿಎಂ ಹುದ್ದೆಗೆ ಸಾಂವಿಧಾನಿಕ ಮಾನ್ಯತೆ ಇಲ್ಲ, ಎಕ್ಸ್‌ಟ್ರಾ ಪವರ್ ಏನೂ ಇಲ್ಲ: ಹೀಗಂದಿದ್ಯಾರು ಗೊತ್ತಾ?


ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾದ ಕೆಸಿ ವೇಣುಗೋಪಾಲ್ ಮತ್ತು ರಣ್‌ದೀಪ್ ಸಿಂಗ್ ಸುರ್ಜೇವಾಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವಿಶೇಷವಾಗಿ ಡಿಕೆ ಶಿವಕುಮಾರ್​ ಒಬ್ಬರು ಮಾತ್ರ ಡಿಸಿಎಂ ಆಗಿರುತ್ತಾರೆ ಎಂದು ಹೇಳಿದ ಕೆಸಿ ವೇಣುಗೋಪಾಲ್,  ಕೆಪಿಸಿಸಿ ಅಧ್ಯಕ್ಷರಾಗಿಯೂ ಡಿಕೆ ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಹೇಳಿದರು.


ಶನಿವಾರ ಪ್ರಮಾಣ ವಚನ


ಇನ್ನು ಮೇ 20ರಂದು ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ, ಅಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಾರೆ. ಇದರ ಜೊತೆಗೆ ಅವತ್ತೇ  ಕೆಲವು ಶಾಸಕರು ಸಚಿವರಾಗಿಯೂ ಪ್ರಮಾಣವಚನ ಸ್ವೀಕರಿಸ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್​ ಹೇಳಿದರು.


ಇದನ್ನೂ ಓದಿ: AICC Press Meet: ದಿಢೀರ್ ಸುದ್ದಿಗೋಷ್ಠಿ ಕರೆದ ಎಐಸಿಸಿ, ಸಿಎಂ ಹೆಸರು ಅಧಿಕೃತ ಘೋಷಣೆ ಸಾಧ್ಯತೆ!


ಇದಕ್ಕೂ ಮೊದಲು ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದ ಬಗ್ಗೆಯೂ ಮಾತನಾಡಿದ ಕೆಸಿ ವೇಣುಗೋಪಾಲ್, ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ ಎಂದರು.

top videos



    ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ ಎಂದ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಯೂ ಸಮರ್ಥವಾಗಿ ಆಡಳಿತ ಕೊಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ಕಾಂಗ್ರೆಸ್‌ ನೀಡಲಿದೆ ಎಂದರು.

    First published: