ಚಿದಂಬರಂ ಬಂಧನ: ಕೇಂದ್ರ ಸರ್ಕಾರದಿಂದ ದ್ವೇಷ ರಾಜಕಾರಣ; ಜೆಡಿಎಸ್​ ಖಂಡನೆ

ಹಲವಾರು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಕಾಂಗ್ರೆಸ್​ ಹಿರಿಯ ನಾಯಕ ಚಿದಂಬರಂ ರಾತ್ರೋ ರಾತ್ರಿ ಪಲಾಯನ ಮಾಡುವ ಅವಕಾಶ ಇರಲಿಲ್ಲ.

Seema.R | news18-kannada
Updated:August 22, 2019, 9:42 AM IST
ಚಿದಂಬರಂ ಬಂಧನ: ಕೇಂದ್ರ ಸರ್ಕಾರದಿಂದ ದ್ವೇಷ ರಾಜಕಾರಣ; ಜೆಡಿಎಸ್​ ಖಂಡನೆ
ಪಿ. ಚಿದಂಬರಮ್
  • Share this:
ಬೆಂಗಳೂರು (ಆ.21): ಕೇಂದ್ರದ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ರಾತ್ರೋರಾತ್ರಿ ಬಂಧಿಸುವ ಮೂಲಕ ದೇಶದಲ್ಲಿ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್​ ಖಂಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್​ ಬಾಬು, ಚಿದಂಬರಂ ವಿಷಯದಲ್ಲಿ ಕೇಂದ್ರ ಸರ್ಕಾರ ಸಿಬಿಐ ದುರಪಯೋಗ ಮಾಡಿಕೊಂಡಿದೆ.  ಹಲವಾರು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಕಾಂಗ್ರೆಸ್​ ಹಿರಿಯ ನಾಯಕ ಚಿದಂಬರಂ ರಾತ್ರೋ ರಾತ್ರಿ ಪಲಾಯನ ಮಾಡುವ ಅವಕಾಶ ಇರಲಿಲ್ಲ. ಈ ಕುರಿತು ಅವರೇ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ರಾಷ್ಟ್ರದಲ್ಲಿ ಸ್ವಾತಂತ್ರ್ಯದ ಮೌಲ್ಯಗಳು ಉಳಿಯಬೇಕು ಎಂದು ಅವರು, ಹೇಳಿದ ಕೆಲವೇ ನಿಮಿಷಗಳಲ್ಲಿ ನಾಟಕೀಯ ರೀತಿಯಲ್ಲಿ ಅವರನ್ನು ಬಂಧಿಸಲಾಗಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಸಿಬಿಐ ಅವರನ್ನು ಬಂಧಿಸಿದೆ.

ಇದನ್ನು ಓದಿ: ಐಎನ್​ಎಕ್ಸ್​ ಮೀಡಿಯಾ ಪ್ರಕರಣ: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು

 

ಬಿಜೆಪಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಚಿಕೆಗೇಡಿನ ರಾಜಕಾರಣ ಮಾಡುತ್ತಿದ್ದು,  ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ತಳ್ಳುವ ಮೂಲಕ ಕಾಯಂ ಆಗಿ ಅಧಿಕಾರದಲ್ಲಿ ಉಳಿಯುವ ಕನಸು ಕಾಣುತ್ತಿದೆ.

ಹಿರಿಯ  ನಾಯಕರನ್ನು ಬಂಧಿಸುವ ಮೂಲಕ  ಮೂಲಕ ಪ್ರತಿಪಕ್ಷಗಳ ಹಣಿಯುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ. ಬಿಜೆಪಿಯ ಈ ಪ್ರಯತ್ನಕ್ಕೆ ಪ್ರಜಾಪೃಭುತ್ವದ ಮೌಲ್ಯಗಳೇ ಮುಂದೆ ತಕ್ಕ ಉತ್ತರ ನೀಡಲಿದೆ ಎಂದು ಹರಿಹಾಯ್ದಿದ್ದಾರೆ.
First published:August 21, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading