HOME » NEWS » National-international » KARNATAKA NEWS LIQUOR TYCOON VIJAY MALLYA LOSES ENGLAND HIGH COURT APPEAL AGAINST EXTRADITION SCT

Vijay Mallya: ಕಾನೂನು ಸಮರದಲ್ಲಿ ವಿಜಯ್ ಮಲ್ಯಗೆ ಭಾರೀ ಹಿನ್ನಡೆ; ಶೀಘ್ರದಲ್ಲೇ ಮದ್ಯದ ದೊರೆ ಭಾರತಕ್ಕೆ ಹಸ್ತಾಂತರ

Vijay Mallya Extradition: ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಗಾಗಿ ಭಾರತದ ವಿವಿಧ ಬ್ಯಾಂಕುಗಳಿಂದ ವಿಜಯ ಮಲ್ಯ ಸುಮಾರು 9,000 ಕೋಟಿ ರೂ. ಸಾಲ ಪಡೆದಿದ್ದರು. ಅಲ್ಲದೆ, ಆ ಹಣವನ್ನು ತೀರಿಸಲಾಗದೆ ಲಂಡನ್‌ನಲ್ಲಿ ತಲೆ ಮರೆಸಿಕೊಂಡಿದ್ದರು.

Sushma Chakre | news18-kannada
Updated:May 14, 2020, 11:35 PM IST
Vijay Mallya: ಕಾನೂನು ಸಮರದಲ್ಲಿ ವಿಜಯ್ ಮಲ್ಯಗೆ ಭಾರೀ ಹಿನ್ನಡೆ; ಶೀಘ್ರದಲ್ಲೇ ಮದ್ಯದ ದೊರೆ ಭಾರತಕ್ಕೆ ಹಸ್ತಾಂತರ
ವಿಜಯ್ ಮಲ್ಯ
  • Share this:
ನವದೆಹಲಿ (ಮೇ 14): ಭಾರತದ ಬ್ಯಾಂಕ್​ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ದೇಶ ಬಿಟ್ಟು ಪರಾರಿಯಾಗಿದ್ದ ಮದ್ಯದ ದೊರೆ ವಿಜಯ್ ಮಲ್ಯಗೆ ಭಾರೀ ಹಿನ್ನಡೆಯಾಗಿದೆ. ಭಾರತಕ್ಕೆ ತನ್ನನ್ನು ಹಸ್ತಾಂತರ ಮಾಡದಂತೆ ಕಳೆದ ತಿಂಗಳು ವಿಜಯ್ ಮಲ್ಯ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಬ್ರಿಟನ್​ನ ಹೈಕೋರ್ಟ್ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಮಲ್ಯ ನಿರ್ಧರಿಸಿದ್ದರು. ಆದರೆ, ಮಲ್ಯ ಅವರಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಹೈಕೋರ್ಟ್​ ಇಂದು ಅವಕಾಶ ನೀಡಿಲ್ಲ. ಈ ಹಿನ್ನಲೆಯಲ್ಲಿ ಇನ್ನು 28 ದಿನಗಳಲ್ಲಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರಗೊಳಿಸುವ ಪ್ರಕ್ರಿಯೆ ಶುರುವಾಗಲಿದೆ. ಭಾರತಕ್ಕೆ ವಾಪಾಸಾದ ಬಳಿಕ ವಿಜಯ್ ಮಲ್ಯ ಅವರನ್ನು ಮುಂಬೈನ ಅರ್ಥೂರ್​ ರಸ್ತೆಯಲ್ಲಿರುವ ಜೈಲಿನಲ್ಲಿ ಬಂಧಿಸಲಾಗುವುದು.

ಇಂದು ಬೆಳಗ್ಗೆಯಷ್ಟೇ ಟ್ವೀಟ್ ಮಾಡಿದ್ದ ವಿಜಯ್ ಮಲ್ಯ ತಾವು ಸಾಲ ಪಡೆದ ಶೇ. 100ರಷ್ಟು ಹಣವನ್ನು ವಾಪಾಸ್ ನೀಡಲು ಸಿದ್ಧರಿರುವುದಾಗಿ ಪುನರುಚ್ಛರಿಸಿದ್ದರು. ಅದರ ಬೆನ್ನಲ್ಲೇ ಅವರಿಗೆ ಯುಕೆ ಸುಪ್ರೀಂ ಕೋರ್ಟ್​ನಲ್ಲಿ ಭಾರೀ ಹಿನ್ನಡೆಯಾಗಿದೆ. ಇದರಿಂದ ಅವರು ಇಂಗ್ಲೆಂಡ್​ನಿಂದ ಭಾರತಕ್ಕೆ ವಾಪಾಸ್​ ಬರಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿಂದು 28 ಕೊರೋನಾ ಕೇಸ್ ಪತ್ತೆ; 35 ಸಾವು, ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆ

ಕಿಂಗ್‌ಫಿಶರ್ ಏರ್‌ಲೈನ್ಸ್‌ಗೆ ಸಂಬಂಧಿಸಿದಂತೆ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಕಳೆದ ಏಪ್ರಿಲ್ 20ರಂದು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಅನುಮತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಆ ಮೇಲ್ಮನವಿಯನ್ನು ಹೈ ಕೋರ್ಟ್ ವಜಾ ಮಾಡಿದೆ. ಹೀಗಾಗಿ, ಇನ್ನು 1 ತಿಂಗಳೊಳಗೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ. ಈ ಮೂಲಕ ವಿಜಯ್ ಮಲ್ಯ ಮುಂದಿರುವ ಎಲ್ಲ ಕಾನೂನು ಅವಕಾಶಗಳ ಬಾಗಿಲೂ ಮುಚ್ಚಿದಂತಾಗಿದೆ.


ಇದನ್ನೂ ಓದಿ: ’ಶೇ.100ರಷ್ಟು ಹಣ ಮರುಪಾವತಿಗೆ ನಾನು ಸಿದ್ಧ ದಯವಿಟ್ಟು ಸ್ವೀಕರಿಸಿ’; ಮತ್ತೊಮ್ಮೆ ಪ್ರಸ್ತಾವನೆ ಮುಂದಿಟ್ಟ ಮಲ್ಯ

ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಗಾಗಿ ಭಾರತದ ವಿವಿಧ ಬ್ಯಾಂಕುಗಳಿಂದ ವಿಜಯ ಮಲ್ಯ ಸುಮಾರು 9,000 ಕೋಟಿ ರೂ. ಸಾಲ ಪಡೆದಿದ್ದರು. ಅಲ್ಲದೆ, ಆ ಹಣವನ್ನು ತೀರಿಸಲಾಗದೆ ಲಂಡನ್‌ನಲ್ಲಿ ತಲೆ ಮರೆಸಿಕೊಂಡಿದ್ದರು. ಆದರೆ, ಭಾರತ ಸರ್ಕಾರ ಅವರನ್ನು ವಾಪಸ್‌ ದೇಶಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ನಡೆಸಿದ ಬೆನ್ನಿಗೆ ವಿಜಯ ಮಲ್ಯ ತಾನು ಸಾಲವಾಗಿ ಪಡೆದ ಸಂಪೂರ್ಣ ಹಣವನ್ನು ಬಡ್ಡಿ ಸಮೇತ ಮರುಪಾವತಿ ಮಾಡಲು ಸಿದ್ದನಿದ್ದೇನೆ ಎಂದು ಕಳೆದ ಒಂದು ವರ್ಷದಿಂದ ಸತತವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆದರೆ, ಸರ್ಕಾರ ಈ ಮನವಿಯನ್ನು ಈವರೆಗೆ ಸ್ವೀಕರಿಸಿಲ್ಲ. ಇದಕ್ಕೆ ನಿಖರ ಕಾರಣವನ್ನೂ ತಿಳಿಸಿಲ್ಲ.
First published: May 14, 2020, 7:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading