Karnataka Postal Circle Recruitment 2020: ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ!

ವಿದ್ಯಾರ್ಹತೆ: 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

JOB

JOB

  • Share this:
    ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಖಾಲಿ ಇರುವ 52 ಪೋಸ್ಟಲ್ ಅಸಿಸ್ಟೆಂಟ್ ಮತ್ತು ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ನವೆಂಬರ್​ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ: 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

    ವಯೋಮಿತಿ: ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20 ಸಾವಿರ ರೂ.ನಿಂದ 25,000ರೂ ವೇತನ ಸಿಗಲಿದೆ.

    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ cpmgre@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
    First published: