HOME » NEWS » National-international » KARNATAKA PUBLIC SERVICE COMMISSION KPSC RECRUITMENT NOTIFICATION RELEASED FOR THE RECRUITMENT OF 523 GROUP C NON TECHNICAL POSTS HG

KPSC Recruitment 2020: ಪದವಿ ಪೂರೈಸಿದವರಿಗೆ ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗವಕಾಶ!

KPSC Recruitment 2020:  ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್​ಸೈಟ್​ಗೆ ತೆರಳಿ ಅಧಿಸೂಚನೆಗಳನ್ನು ಓದಿ ನಂತರ ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ. ಸೆಪ್ಟೆಂಬರ್​ 19ರವರೆಗೆ ಅರ್ಜಿಸಲ್ಲಿಸಲು ಸಮಯವಕಾಶವನ್ನು ನೀಡಿದೆ.

news18-kannada
Updated:September 14, 2020, 9:46 PM IST
KPSC Recruitment 2020: ಪದವಿ ಪೂರೈಸಿದವರಿಗೆ ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗವಕಾಶ!
ಕರ್ನಾಟಕ ಲೋಕಸೇವಾ ಆಯೋಗ
  • Share this:
KPSC Recruitment 2020:  ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್​ಸೈಟ್​ಗೆ ತೆರಳಿ ಅಧಿಸೂಚನೆಗಳನ್ನು ಓದಿ ನಂತರ ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ. ಸೆಪ್ಟೆಂಬರ್​ 19ರವರೆಗೆ ಅರ್ಜಿಸಲ್ಲಿಸಲು ಸಮಯವಕಾಶವನ್ನು ನೀಡಿದೆ.

ವಿದ್ಯಾರ್ಹತೆ:

ಲೋಕೋಪಯೋಗಿ ಇಲಾಖೆಯಲ್ಲಿನ 523  ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಆಭ್ಯರ್ಥಿಗಳು  ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು ಎಮದು ಅಧಿಸೂಚನೆಯಲ್ಲಿ ತಿಳಿಸಿದೆ. ಹಿಂದುಳಿದ ವರ್ಗಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದಾಗಿದೆ.

ವೇತನದ ವಿವರ:

-ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 70,850/-ರೂ ವೇತನ ಸಿಗಲಿದೆ.ಆಯ್ಕೆ ಪ್ರಕ್ರಿಯೆ:

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 600/-ರೂ ಪಾವತಿಸಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಸೆಪ್ಟೆಂಬರ್ 18,2020ರೊಳಗೆ ಪಾವತಿಸಬೇಕು. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/indexk.html ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಲಾಡಗಿರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 19,2020

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 21,2020
Published by: Harshith AS
First published: September 14, 2020, 9:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories