HOME » NEWS » National-international » KARNATAKA RAINS MONSOON 2020 ONSET TO TO ENTER KERALA BY JUNE 1ST SCT

Monsoon 2020: ಜೂನ್ 1ರಿಂದ ಮಳೆಗಾಲ ಶುರು; ಇನ್ನು 3 ದಿನದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ

Weather Updates: ಈ ವರ್ಷ ಜೂನ್ 5ರಂದು ದಕ್ಷಿಣ ರಾಜ್ಯಗಳಲ್ಲಿ ಮಳೆಗಾಲ ಆರಂಭವಾಗಲಿದೆ, ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಮಳೆಗಾಲ ತಡವಾಗಿ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

Sushma Chakre | news18-kannada
Updated:May 29, 2020, 3:59 PM IST
Monsoon 2020: ಜೂನ್ 1ರಿಂದ ಮಳೆಗಾಲ ಶುರು; ಇನ್ನು 3 ದಿನದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಮೇ 29): ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಪಶ್ಚಿಮ ಬಂಗಾಳ, ಒರಿಸ್ಸಾ ಮುಂತಾದ ಕಡೆ ಅಂಫಾನ್​ ಚಂಡಮಾರುತದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಈ ಬಾರಿ ಮಾನ್ಸೂನ್​ ಶುರುವಾಗುವ ಮೊದಲೇ ದೇಶದ ಹಲವೆಡೆ ಮಳೆಯ ಸಿಂಚನವಾಗಿದೆ. ಜೂನ್ 1ರಿಂದ ಕೇರಳಕ್ಕೆ ನೈರುತ್ಯ ಮಾನ್ಸೂನ್ ಮಾರುತಗಳು ತಲುಪಲಿದ್ದು, ನಿರೀಕ್ಷಿತ ದಿನಕ್ಕೂ ಮೊದಲೇ ಮಳೆಗಾಲ ಆರಂಭವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ವರ್ಷ ಜೂನ್ 5ರಂದು ದಕ್ಷಿಣ ರಾಜ್ಯಗಳಲ್ಲಿ ಮಳೆಗಾಲ ಆರಂಭವಾಗಲಿದೆ, ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಮಳೆಗಾಲ ತಡವಾಗಿ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಆದರೆ, ಇದೀಗ ಹೊಸ ಪ್ರಕಟಣೆ ಹೊರಡಿಸಿರುವ ಹವಾಮಾನ ಇಲಾಖೆ, ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತದಿಂದಾಗಿ ಮಾನ್ಸೂನ್ ಮಾರುತಗಳು ಜೂನ್ 1ರಂದು ಕೇರಳ ಪ್ರವೇಶಿಸಲಿವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಹೈಕಮಾಂಡ್‌ ಸೂಚಿಸಿದರೆ ಈಗಲೂ 5 ಜನ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಲು ಸಿದ್ದ: ರಮೇಶ್ ಜಾರಕಿಹೊಳಿ

ಜೂನ್​ 1ರಂದೇ ಕೇರಳದಿಂದ ಮಾನ್ಸೂನ್ ಶುರುವಾಗಲಿದೆ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದರೆ, ಮೇ 31ರಿಂದ ಜೂನ್ 4ರವರೆಗೆ ಆಗ್ನೇಯ ಮತ್ತು ಪಕ್ಕದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಸಾಧ್ಯತೆಯಿದೆ. ಹೀಗಾಗಿ ನೈರುತ್ಯ ಮಾನ್ಸೂನ್ ಮಾರುತಗಳು ಜೂನ್ 1ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
Youtube Video
First published: May 29, 2020, 3:54 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories