HOME » NEWS » National-international » KARNATAKA STATE POLICE RECRUITMENT 2021 NOTIFICATION 402 CIVIL PSI POSTS HG

KSP Recruitment 2021: ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

news18-kannada
Updated:March 12, 2021, 2:58 PM IST
KSP Recruitment 2021: ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
  • Share this:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹುದ್ದೆಗಳಿಗೆ ಈಗಾಗಲೇ ಸೇವೆಯಲ್ಲಿರುವ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:  21 ರಿಂದ ಇತರೆ ವರ್ಗದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸೇವಾನಿರತ ಅಭ್ಯರ್ಥಿಗಳಿಗೆ: ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಇತರೆ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷಗಳು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900 ರಿಂದ 70,850 ರೂಗಳ ವರೆಗೆ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:  ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500ರೂ ಪಾವತಿಸಬೇಕು.  ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250 ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು.ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್ ನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
Published by: Harshith AS
First published: March 12, 2021, 2:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories